ಡಿಸೆಂಬರ್ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ: ವಿವಿಧ ಕಾರ್ಯಕ್ರಮಗಳ ಬಗ್ಗೆ ಡಿಕೆ ಶಿವಕುಮಾರ್ ಮಾಹಿತಿ
DK Shivakumar: ನವೆಂಬರ್ನಲ್ಲಿ ಯುವಜನರಿಗೆ, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮ ಆಯೊಜಿಸಲಾಗ್ತಿದೆ. ಪ್ರತಿ ಜಿಲ್ಲೆಯಲ್ಲಿ ಜವಾಬ್ದಾರಿ ವಹಿಸಲಾಗ್ತಿದೆ. ಇದು ಪಕ್ಷದ ಸಂಘಟನೆಯ ವರ್ಷ. ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಯಚೂರು: ಕಾಂಗ್ರೆಸ್ ಸಂಸ್ಥಾಪನಾ ದಿನ ಹಿನ್ನೆಲೆ ಕರ್ನಾಟಕ ಕಾಂಗ್ರೆಸ್ ಪಕ್ಷ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಡಿಸೆಂಬರ್ನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಇರಲಿದ್ದು, ಅಂದಿನ ವಿವಿಧ ವಿಶೇಷ ಕಾರ್ಯಕ್ರಮಗಳ ಬಗ್ಗೆ ಇಂದು (ಆಗಸ್ಟ್ 17) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಯಚೂರಿನಲ್ಲಿ ಮಾಹಿತಿ ನೀಡಿದ್ದಾರೆ. ಆ ದಿನದಂದು, ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡುತ್ತೇವೆ. ಪ್ರತಿ ಪಂಚಾಯಿತಿಯಲ್ಲಿ ಸಭೆ ನಡೆಸಲು ಸಲಹೆ ಬಂದಿದೆ. ಕೇಂದ್ರದ ಧೋರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತೆ ಎಂದು ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಏಕೆ ಸಿಎಂ ಬದಲಾವಣೆ ಮಾಡಿದರೆಂದು ಬಿಜೆಪಿ ಪಕ್ಷ ಹೇಳಲಿ. ಕೇಂದ್ರ ಆರೋಗ್ಯ ಸಚಿವರನ್ನು ಏಕೆ ತೆಗೆದರು ಎಂದೂ ಅವರು ಹೇಳಬೇಕು ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶಾದ್ಯಂತ ಬಿಜೆಪಿ ಜನಾಶೀರ್ವಾದ ಯಾತ್ರೆ ವಿಚಾರವಾಗಿ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇವರು ಕೊರೊನಾಗೆ ಬಲಿಯಾದವರ ಮನೆಗೆ ಹೋಗಲಿಲ್ಲ. ದೇಶದಲ್ಲಿ ಕೊರೊನಾಗೆ 4 ಲಕ್ಷ ಜನರು ಬಲಿಯಾಗಿದ್ದಾರೆ. ಜನರಿಗಾಗಿ ಏನು ಮಾಡಿದ್ದಾರೆಂದು ಈಗ ಯಾತ್ರೆ ಹೋಗುತ್ತಿದ್ದಾರೆ ಎಂದು ಬಿಜೆಪಿ ಜನಾಶೀರ್ವಾದ ಯಾತ್ರೆಯನ್ನು ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಡಿಸೆಂಬರ್ನಲ್ಲಿ ಕಾಂಗ್ರೆಸ್ ಸಂಸ್ಥಾಪನ ದಿನ ಇರಲಿದೆ. ನವೆಂಬರ್ನಲ್ಲಿ ಯುವಜನರಿಗೆ, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮ ಆಯೊಜಿಸಲಾಗ್ತಿದೆ. ಪ್ರತಿ ಜಿಲ್ಲೆಯಲ್ಲಿ ಜವಾಬ್ದಾರಿ ವಹಿಸಲಾಗ್ತಿದೆ. ಇದು ಪಕ್ಷದ ಸಂಘಟನೆಯ ವರ್ಷ. ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ
ಕಾಂಗ್ರೆಸ್ ಕಣ್ಣುಮುಚ್ಚಿಕೊಂಡು ಮುಂದೆ ಹೋಗುತ್ತಿದೆ: ಸುಶ್ಮಿತಾ ದೇವ್ ರಾಜೀನಾಮೆ ಬೆನ್ನಲ್ಲೇ ಕಪಿಲ್ ಸಿಬಲ್ ಟೀಕೆ