AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್​​ ಕೊರೆಸಿದ ಅತ್ತೆ-ಸೊಸೆಗೆ ಡಿಕೆ ಶಿವಕುಮಾರ್​ ಶ್ಲಾಘನೆ

ಕಾಂಗ್ರೆಸ್​ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಬಳಸಿಕೊಂಡು ಗದಗಿನ ಅತ್ತೆ-ಸೊಸೆ ಬೋರ್‌ವೆಲ್ ಕೊರೆಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ ಈ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ ಮತ್ತು ವಿರೋಧ ಪಕ್ಷಗಳ ಟೀಕೆಗಳನ್ನು ತಿರಸ್ಕರಿಸಿದ್ದಾರೆ. ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ ಎಂದು ಟಾಂಗ್​ ನೀಡಿದ್ದಾರೆ.

ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್​​ ಕೊರೆಸಿದ ಅತ್ತೆ-ಸೊಸೆಗೆ ಡಿಕೆ ಶಿವಕುಮಾರ್​ ಶ್ಲಾಘನೆ
ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್​​ ಕೊರೆಸಿದ ಅತ್ತೆ-ಸೊಸೆಗೆ ಡಿಕೆ ಶಿವಕುಮಾರ್​ ಶ್ಲಾಘನೆ
ಗಂಗಾಧರ​ ಬ. ಸಾಬೋಜಿ
|

Updated on:Dec 14, 2024 | 7:29 PM

Share

ಬೆಂಗಳೂರು, ಡಿಸೆಂಬರ್​ 14: ಕಾಂಗ್ರೆಸ್​ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ (Gruha Lakshmi Scheme) ಸಹಕಾರಿಯಾಗಿದೆ ಎಂದು ಕರ್ನಾಟಕದ ಸಾಕಷ್ಟು ಮಹಿಳೆಯರು ಈ ಹಿಂದೆ ಹೇಳಿಕೊಂಡಿದ್ದಾರೆ. ಗೃಹಲಕ್ಷ್ಮಿಯಿಂದ ಬಂದ ಹಣದಲ್ಲಿ ಮಹಿಳೆಯರು ಒಳ್ಳೆಯ ಕೆಲಸಗಳನ್ನು ಮಾಡಿದ ಉದಾಹರಣೆಗಳಿವೆ. ಇತ್ತೀಚೆಗೆ ಬೆಳಗಾವಿಯ ವೃದ್ಧೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಅದೇ ರೀತಿಯಾಗಿ ಇದೀಗ ಗದಗಿನ ಅತ್ತೆ-ಸೊಸೆ ಅದೇ ಹಣದಿಂದ ಬೋರ್​ವೆಲ್ ಕೊರೆಸಿದ್ದಾರೆ. ಈ ಬಗ್ಗೆ ಟಿವಿ9 ಡಿಜಿಟಲ್​ ಸುದ್ದಿ ಮಾಡಿತ್ತು. ಅದನ್ನು ಉಲ್ಲೇಖಿಸಿ ಡಿಸಿಎಂ ಡಿಕೆ ಶಿವಕುಮಾರ್ ಸಂದೇಶ ನೀಡಿದ್ದಾರೆ.

ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ!

ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್​​, ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಹೇಳಿದ್ದಾರೆ.

ಅತ್ತೆ ಮಾಬುಬೀ, ಸೊಸೆ ರೋಷನ್ ಬೇಗಂ ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿ ತಿಂಗಳು ಕೂಡಿಟ್ಟಿದ್ದಾರೆ. ಹೀಗೆ ಕೂಡಿಟ್ಟ 44 ಸಾವಿರ ರೂ. ಅನ್ನು ಬೋರ್​ವೆಲ್ ಕೊರಿಸಲು ನೀಡಿದ್ದಾರೆ. ಬೋರ್​ವೆಲ್ ಕೊರಿಸಲು 60 ಸಾವಿರ ರೂ. ಖರ್ಚು ಆಗಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ 44 ಸಾವಿರ ರೂ. ಬಳಿಕೆ ಮಾಡಿದ್ದಾರೆ. ಇನ್ನುಳಿದ್ದ ಹಣ ಮಗ ಹಾಕಿ ಬೋರ್​ವೆಲ್ ಕೊರಿಸಿದ್ದಾರೆ.

ಇದನ್ನೂ ಓದಿ: ಗದಗ: ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್ ಕೊರೆಸಿದ ಅತ್ತೆ, ಸೊಸೆ!

ಕೊಳವೆ ಬಾವಿ ಕೊರೆಸುತ್ತಿದ್ದಂತೆ ಭರ್ಜರಿ ನೀರು ಸಿಕ್ಕಿದೆ. ಆ ಮೂಲಕ ಗೃಹಲಕ್ಷ್ಮಿಗೆ ಭಗೀರಥಿ ಒಲಿದು ಬಂದಿದ್ದಾಳೆ. ಸಿಎಂ ಸಿದ್ದರಾಮಯ್ಯ ಅವರು ನೀಡಿದ ಗೃಹಲಕ್ಷ್ಮಿ ಯೋಜನೆ ತುಂಬಾನೆ ಅನುಕೂಲವಾಗಿದೆ. ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಅತ್ತೆ-ಸೂಸೆ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:27 pm, Sat, 14 December 24