AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಕರ್ನಾಟಕ ಕಾಂಗ್ರೆಸ್‌ ಅಧಿಕಾರ ಹಂಚಿಕೆ ಚರ್ಚೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಆಪ್ತ ನಾಯಕನನ್ನು ಸೆಳೆಯಲು ಯತ್ನಿಸಿರುವುದು ಸ್ಪಷ್ಟವಾಗಿದೆ. ಹಾಗಾದರೆ, ಸಿದ್ದರಾಮಯ್ಯ ಆಪ್ತ ನಾಯಕನ ಜತೆ ಡಿಕೆ ಶಿವಕುಮಾರ್ ಹೇಳಿದ್ದೇನು? ಮೇಲಿಂದ ಮೇಲೆ ಆ ನಾಯಕನ ಭೇಟಿಯಾಗುತ್ತಿರುವುದೇಕೆ? ಈ ಪ್ರಶ್ನೆಗಳಿಗೆ ಉತ್ತರ ಈಗ ಸಿಕ್ಕಿದೆ.

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Pramod Shastri G
| Edited By: |

Updated on:Dec 23, 2025 | 9:31 AM

Share

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ (Congress) ಪಕ್ಷದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮೊನ್ನೆಲೆಗೆ ಬಂದಿದೆ. ಈ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ನಾಯಕನನ್ನು ತಮ್ಮ ಕಡೆಗೆ ಸೆಳೆಯಲು ಯತ್ನಿಸಿರುವುದು ಬಹಿರಂಗವಾಗಿದೆ. ಶನಿವಾರವಷ್ಟೇ ಡಿಕೆ ಶಿವಕುಮಾರ್ ಮಾಜಿ ಸಚಿವ ಕೆಎನ್ ರಾಜಣ್ಣ ನಿವಾಸಕ್ಕೆ ಹೋಗಿ ಮಾತುಕತೆ ನಡೆಸಿದ್ದರು. ಅದಾದ ನಂತರದ ಬೆಳವಣಿಗೆಯಲ್ಲಿ, ಸೋಮವಾರ ಸಂಜೆ ಡಿಕೆ ಶಿವಕುಮಾರ್ ಜೊತೆ ರಾಜಣ್ಣ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭ ಏನೇನು ಚರ್ಚೆಯಾಗಿದೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ.

ರಾಜಣ್ಣ ಬಳಿ ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಜಣ್ಣ ಜೊತೆ ರಾಜಕೀಯದ ಹಳೆ ನೆನಪುಗಳನ್ನು ಮೆಲುಕು ಹಾಕಿದ ಡಿಕೆ ಶಿವಕುಮಾರ್, ಯೂತ್ ಕಾಂಗ್ರೆಸ್ ದಿನಗಳನ್ನು ನೆನಪಿಸಿದ್ದಾರೆ. ನಾವಿಬ್ಬರೂ ಹಳೆಯ ಸ್ನೇಹಿತರು ನೆನಪಿರಲಿ. ಯೂತ್​ ಕಾಂಗ್ರೆಸ್​ ದಿನಗಳಿಂದಲೂ ಜತೆಯಾಗಿ ಕೆಲಸ ಮಾಡಿದ್ದೇವೆ. ನೀವು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಲೂ ನಾನೇ ಸಹಾಯ ಮಾಡಿದ್ದು. ಹೀಗಾಗಿದ್ದಾಗ ರಾಜಕೀಯ ವಿರೋಧ ಯಾಕೆ ಎಂದು ರಾಜಣ್ಣ ಬಳಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಕಾಂಗ್ರೆಸ್​ ಪಕ್ಷಕ್ಕೆ ಬರುವ ಮೊದಲೇ ನಾವಿಬ್ಬರೂ ಸ್ನೇಹಿತರು. 2004ರ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬಂದಿದ್ದಾರೆ. ಅದಕ್ಕಿಂತ ಮೊದಲೇ ನಾವಿಬ್ಬರು ಸ್ನೇಹಿತರಾಗಿದ್ದೇವೆ ಎಂದು ರಾಜಣ್ಣ ಜತೆ ಆತ್ಮೀಯವಾಗಿ ಡಿಕೆ ಶಿವಕುಮಾರ್ ಸಂಭಾಷಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಕೆಶಿ ಮಾತಿಗೆ ರಾಜಣ್ಣ ಏನಂದ್ರು?

ಡಿಕೆಶಿ ಮಾತಿಗೆ ಪ್ರತಿಯಾಗಿ ರಾಜಣ್ಣ, ನಮಗೆ ಎಲ್ಲಿ ಗೌರವ ಇದೆಯೋ ಅಲ್ಲಿ ನಾವು ಇರುತ್ತೇವೆ. ನಿಮ್ಮ ಸ್ಥಾನಮಾನದ ಬಗ್ಗೆ ನಮ್ಮದೇನು ಅಭ್ಯಂತರವಿಲ್ಲ. ಹೈಕಮಾಂಡ್​ ಅನ್ನು ಒಪ್ಪಿಸಿ ಎಂದು ಹೇಳಿದ್ದಾರೆ.

ಈ ಭೇಟಿಗೂ ಮುನ್ನ ಸೋಮವಾರ ಮಾತನಾಡಿದ್ದ ರಾಜಣ್ಣ, ಉಪಮುಖ್ಯಮಂತ್ರಿಗಳು ಎಷ್ಟೇ ಪ್ರಯತ್ನ ಮಾಡಿದರೂ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಈಗಲೂ ಸಿಎಂ ಸಿದ್ದರಾಮಯ್ಯ ಪರ ಎಂದು ಹೇಳಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ!

ಏತನ್ಮಧ್ಯೆ, ರಾಜಣ್ಣ ಅವರು ಸಿದ್ದರಾಮಯ್ಯಗಿಂತಲೂ ನನಗೆ ಅತ್ಯಾಪ್ತರು. ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇದಕ್ಕೆ ಕೌಂಟರ್ ನೀಡುವ ರೀತಿಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಅಂದಿನ ಸಿಎಂ ಎಸ್ಎಂ ಕೃಷ್ಣ ಎಂದು ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 am, Tue, 23 December 25

ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್