ಕೆಂಪೇಗೌಡ ಜಯಂತಿಗೆ ಕುಮಾರಸ್ವಾಮಿ, ದೇವೇಗೌಡ ಆಹ್ವಾನಿಸದ ವಿಚಾರ: ಡಿಕೆ ಶಿವಕುಮಾರ್​​ ಹೇಳಿದ್ದಿಷ್ಟು

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರನ್ನು ಆಹ್ವಾನಿಸಿಲ್ಲ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಪ್ರತಿಕ್ರಿಯಿಸಿದ್ದಾರೆ.

ಕೆಂಪೇಗೌಡ ಜಯಂತಿಗೆ ಕುಮಾರಸ್ವಾಮಿ, ದೇವೇಗೌಡ ಆಹ್ವಾನಿಸದ ವಿಚಾರ: ಡಿಕೆ ಶಿವಕುಮಾರ್​​ ಹೇಳಿದ್ದಿಷ್ಟು
ಡಿಸಿಎಂ ಡಿಕೆ ಶಿವಕುಮಾರ್​
Follow us
Anil Kalkere
| Updated By: ವಿವೇಕ ಬಿರಾದಾರ

Updated on: Jun 27, 2024 | 2:57 PM

ಬೆಂಗಳೂರು, ಜೂನ್​​ 27: ಕರ್ನಾಟಕ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರನ್ನು ಆಹ್ವಾನಿಸದೆ ಇದ್ದಿದ್ದು, ಒಕ್ಕಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಮಾತನಾಡಿ, ಶಿಷ್ಟಾಚಾರ ಪ್ರಕಾರ ಕರೆಯಬೇಕಿತ್ತು, ಆದರೆ, ಕರೆಯದಿದ್ದದ್ದು ತಪ್ಪಾಗಿದೆ. ಮುಂದೆ ಈ ರೀತಿ ಆಗಲ್ಲ ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್​, ಕೆಂಪೇಗೌಡ ಜಯಂತಿಯನ್ನ ಪ್ರಾರಂಭ ಮಾಡಲು ಮತ್ತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಿದ್ದರಾಮಯ್ಯನವರು ಕಾರಣ ಎಂದು ಹೇಳಿದರು.

ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಇದ್ದ ಕಾರಣ ಬೇಗ ಕಾರ್ಯಕ್ರಮ ಮಾಡಲು, ಶ್ರಮ ವಹಿಸಲು ಆಗಲಿಲ್ಲ, ಕ್ಷಮಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಂಪೇಡಗೌಡ ಜಯಂತಿಗೆ ಒತ್ತು ನೀಡಿದ್ದಾರೆ. ಮಾಗಡಿಯ ಸುಮ್ಮನಹಳ್ಳಿ‌ ಬಳಿಕ ಐದು ಎಕರೆ ಜಮೀನನ್ನು ಪ್ರಾಧಿಕಾರಕ್ಕೆ ನೀಡಿದ್ದಾರೆ. ಮುಂದಿನ ವರ್ಷ ಅಲ್ಲಿ ಕಟ್ಟಡ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆಂಪೇಗೌಡರ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ, ಎಚ್​ಡಿಕೆಗೆ ಕೋಕ್: ಸರ್ಕಾರದ ವಿರುದ್ಧಒಕ್ಕಲಿಗರ ಸಂಘ ಕಿಡಿ

ಕೆಂಪೇಗೌಡ ಅವರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು. ಅವರು ಒಕ್ಕಲಿಗ ಸಮುದಾಯಕ್ಕೆ‌ ಸೇರಿದರೂ, ಎಲ್ಲ ಜಾತಿ ವರ್ಗಕ್ಕೆ‌ ಸೀಮಿತರಾದವರು. ಈ ವರ್ಷದಿಂದ ರಾಜ್ಯದ ಉದ್ದಗಲಕ್ಕೂ ಶಿಕ್ಷಣ ಇಲಾಖೆ ವತಿಯಿಂದ ಕೆಂಪೇಗೌಡ ಬಗ್ಗೆ ಚರ್ಚಾ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತದೆ. ಪ್ರತಿ ತಾಲೂಕಿಗೂ ‌1 ಲಕ್ಷ ರೂ. ಹಣ ಬಿಬಿಎಂಪಿ ವತಿಯಿಂದ ನೀಡಲಾಗಿದೆ. ಸರ್ಕಾರದಿಂದ ನಾವು ನೀಡುವ ಹಣ ಸಾಕಾಗುತ್ತಿಲ್ಲ. ಹೀಗಾಗಿ, ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಬಿಬಿಎಂಪಿ ಪ್ರತಿ ತಾಲೂಕಿಗೆ 1 ಲಕ್ಷ ಹಣ ನೀಡುತ್ತೇವೆ ಎಂದರು.

ಬೆಂಗಳೂರಿಗೆ ಹೊಸ ರೂಪ ಕೊಡಲು ಬ್ರ್ಯಾಂಡ್​ ಬೆಂಗಳೂರು ರೂಪಿಸಿದ್ದೇವೆ. ಪೆರಿಫೆರಲ್ ರಿಂಗ್ ರೋಡ್​ಗೆ ಹೊಸ ರೂಪ ಕೊಡಲಿದ್ದೇವೆ. 150 ಕಿ.ಮೀ ರಸ್ತೆಗಳನ್ನು ಸಿಗ್ನಲ್ ಫ್ರೀ ಮಾಡಬೇಕು. ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ ಕೊಡಬೇಕು ಅಂತಾ ಯೋಚನೆ ಮಾಡಿದ್ದೇವೆ. ಕೆಂಪೇಗೌಡರ ಆದರ್ಶ ಇಟ್ಟುಕೊಂಡು ಕೆಲಸಗಳನ್ನ ಮಾಡುತ್ತಿದ್ದೇವೆ. ಇಡೀ ವಿಶ್ವ ಕೆಂಪೇಗೌಡರ ನಾಡನ್ನು ಗಮನಿಸುತ್ತಿದೆ ಎಂದು ನುಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು