AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ದಿನಗಳಲ್ಲಿ.. ಕೆಂಪುಕೋಟೆಯ ಮೇಲೆ ನಾವು ಭಾಷಣ ಮಾಡ್ತೇವೆ -ಡಿಕೆ ಶಿವಕುಮಾರ್​

ಬೆಂಗಳೂರು: ರಾಜ್ಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರರು ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು. ಈ ಸಂದಂರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಾಂಧೀಜಿಯವರ ತತ್ವಗಳನ್ನ ನಾವೆಲ್ಲರೂ ಅನುಸರಿಸಬೇಕು. ಸ್ವಾತಂತ್ರ್ಯಕ್ಕಾಗಿ ಪ್ರಾಣಕೊಟ್ಟವರನ್ನ ನಾವೆಲ್ಲರೂ ಸ್ಮರಿಸಬೇಕು. ಎಲ್ಲೆಡೆ ಅಸಮಾನತೆ ನಿವಾರಿಸಿ ಸಮಾನತೆ ಸಾಧಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನ ನಾವು ಎತ್ತಿಹಿಡಿಯಬೇಕು. ದೇಶದ ಐಕ್ಯತೆಯನ್ನ ನಾವು ಇಂದು […]

ಮುಂದಿನ ದಿನಗಳಲ್ಲಿ.. ಕೆಂಪುಕೋಟೆಯ ಮೇಲೆ ನಾವು ಭಾಷಣ ಮಾಡ್ತೇವೆ -ಡಿಕೆ ಶಿವಕುಮಾರ್​
KUSHAL V
| Edited By: |

Updated on: Aug 15, 2020 | 11:06 AM

Share

ಬೆಂಗಳೂರು: ರಾಜ್ಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರರು ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದಂರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಾಂಧೀಜಿಯವರ ತತ್ವಗಳನ್ನ ನಾವೆಲ್ಲರೂ ಅನುಸರಿಸಬೇಕು. ಸ್ವಾತಂತ್ರ್ಯಕ್ಕಾಗಿ ಪ್ರಾಣಕೊಟ್ಟವರನ್ನ ನಾವೆಲ್ಲರೂ ಸ್ಮರಿಸಬೇಕು. ಎಲ್ಲೆಡೆ ಅಸಮಾನತೆ ನಿವಾರಿಸಿ ಸಮಾನತೆ ಸಾಧಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನ ನಾವು ಎತ್ತಿಹಿಡಿಯಬೇಕು. ದೇಶದ ಐಕ್ಯತೆಯನ್ನ ನಾವು ಇಂದು ಉಳಿಸಬೇಕಿದೆ ಎಂದು ಹೇಳಿದರು.

ಇಂದು ಸಂವಿಧಾನಕ್ಕೆ ಅಪಚಾರವಾಗುತ್ತಿದೆ. ಸಂವಿಧಾನ ಅಳಿಸುವ ಮೇಲಾಟ ನಡೆದಿದೆ. ಸಂವಿಧಾನದ ಮೇಲೆ ಬಿಜೆಪಿಯವರಿಗೆ ಕನಿಷ್ಠ ಬೆಲೆಯಿಲ್ಲ. ಸಂವಿಧಾನ ಸುಡಲು ಹೊರಟವರು ಅವರು. ಹೀಗಾಗಿ, ಕೋಮುವಾದಿಗಳಿಂದ ಸ್ವಾತಂತ್ರ್ಯ ಪಡೆಯಬೇಕಿದೆ. ಅವರು ಕೋಮುವಾದ ಮತ್ತು ದ್ವೇಷದ ಬೀಜ ಬಿಜೆಪಿ ಬಿತ್ತುತ್ತಿದ್ದಾರೆ ಎಂದರು.

ಈ ವಿಷ ಬೀಜವನ್ನ ನಾವು ಕಿತ್ತುಹಾಕಬೇಕಿದೆ. ನಾವು ಹೋರಾಟದ ಮೂಲಕವೇ ಸ್ವಾತಂತ್ರ್ಯ ಪಡೀಬೇಕು. ದೇಶದಲ್ಲಿನ ತಿಕ್ಕಾಟವನ್ನ ತೊಡೆಯಬೇಕಿದೆ. ರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ ತರಬೇಕಿದೆ. ಮುಂದಿನ ದಿನದಲ್ಲಿ ಕೆಂಪುಕೋಟೆಯಲ್ಲಿ ಭಾಷಣ ಮಾಡ್ತೇವೆ ಎಂಬ ಆತ್ಮವಿಶ್ವಾಸದ ಮಾತುಗಳನ್ನು ಆಡಿದರು.

ಅದಕ್ಕೆ ನಾವು ಇಲ್ಲಿಂದಲೇ ಧ್ವನಿ ನೀಡಬೇಕಿದೆ. ಯುವಜನತೆಯ ಮೂಲಕ ಹೋರಾಟ ಮಾಡಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ.ಶಿವಕುಮಾರ್ ತಮ್ಮ ಭಾಷಣದ ಮೂಲಕ ಕರೆ ನೀಡಿದರು.

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ