ಕರ್ನಾಟಕದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ರಜೆ ನೀಡುವಂತೆ ಡಿಕೆಶಿ ಮನವಿ
ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಮತಬೇಟೆ ನಡೆಸಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲೂ ಸಹ ಬಿಹಾರ ಚುನಾವಣೆ ಪ್ರಚಾರದ ಬಿರುಸಿನಿಂದ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿರುವ ಬಿಹಾರಿಗಳನ್ನ ಭೇಟಿ ಮಾಡಿ ಮತಬೇಟೆ ನಡೆಸಿದ್ದಾರೆ. ಈ ವೇಳೆ ಬಿಹಾರಿಗಳಿಗೆ ಮಹತ್ವದ ಭರವಸೆ ನೀಡಿದ್ದಾರೆ. ಜೊತೆಗೆ ಅವರು ತಮ್ಮ ಊರಿಗೆ ತೆರಳಿ ಮತದಾನ ಮಾಡಿಬರಲು ರಜೆ ನೀಡಬೇಕೆಂದು ಡಿಕೆಶಿ ಮನವಿ ಮಾಡಿದ್ದಾರೆ.

ಬೆಂಗಳೂರು, (ಅಕ್ಟೋಬರ್ 04): ಇದೇ ನವೆಂಬರ್ 6 ಹಾಗೂ 11ರಂದು ಎರಡು ಹಂತದಲ್ಲಿ ಬಿಹಾರ ವಿಧಾನಸಭೆ ಚುನಾವಣೆ (Bihar Assembly Election 2025) ನಡೆಯಲಿದ್ದು, ಈಗಾಗಲೇ ಗೆಲುವಿಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಿಗಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲಿರುವ ಕೆಲಸ ಮಾಡಿಕೊಂಡಿರುವ ಬಿಹಾರಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದಾರೆ. ಅಲ್ಲದೇ ಬಿಹಾರಿಗಳು ತಮ್ಮ ರಾಜ್ಯಕ್ಕೆ ಹೋಗಿ ಮತದಾನ ಮಾಡಿಬರಲು ಮೂರು ದಿನ ರಜೆ ನೀಡಬೇಕೆಂದು ಆಯಾ ಸಂಸ್ಥೆ, ಕಂಪನಿಗಳಿಗೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.
2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಿ,…
— DK Shivakumar (@DKShivakumar) November 4, 2025
ಇದನ್ನೂ ಓದಿ: ಬೆಂಗಳೂರಿನಲ್ಲೂ ಬಿಹಾರ ಚುನಾವಣೆ ಪ್ರಚಾರ: ಬಿಹಾರಿಗಳನ್ನ ಭೇಟಿ ಮಾಡಿ ಮತಯಾಚಿಸಿದ ಡಿಕೆಶಿ
ಇನ್ನು ಬಿಹಾರ ವಿಧಾನಸಭೆ 243 ಸ್ಥಾಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಚುನಾವಣೆಯು ಈ ಬಾರಿ ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ರಾಜಕಾರಣಿಗಳು ಸಹ ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.
ಮೊನ್ನೆ ಭಾನುವಾರ ಅಷ್ಟೇ ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಡಿಜೆ ಶಿವಕುಮಾರ್ ಭೇಟಿ ಮಾಡಿದ್ದು, ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೇ ಇದೇ ವೇಳೆ ಬೆಂಗಳೂರಿನಲ್ಲೊಂದು ಬಿಹಾರಿಗಳಿಗಾಗಿ ಸಮುದಾಯ ಭವನ ನಿರ್ಮನಿಸಿಕೊಡುವುದಾಗಿ ಭರವಸೆ ನೀಡಿದ್ದರು.




