AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಬೇಕೋ, ಜೈಲುವಾಸ ಬೇಕೋ? ಬಿಜೆಪಿಯಿಂದ ಬಂದಿತ್ತು ಆಫರ್, ಪಕ್ಷನಿಷ್ಠೆಗಾಗಿ ಜೈಲಿಗೋಗಿದ್ದೆ: ಸತ್ಯ ಬಿಚ್ಚಿಟ್ಟ ಡಿಕೆಶಿ

ಕಾಂಗ್ರೆಸ್ ಪಾಳಯದ ಟ್ರಬಲ್ ಶೂಟರ್, ಕರ್ನಾಟಕ ರಾಜಕೀಯದ ಪವರ್‌ಫುಲ್ ನಾಯಕ, ರಾಜಕೀಯ ತಂತ್ರಗಾರಿಕೆಯ ಮಾಸ್ಟರ್‌, ಸಿಎಂ ರೇಸ್‌ನಲ್ಲಿರುವ ನಾಯಕ ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿಯಿಂದ ಡಿಸಿಎಂ ಬೇಕೋ, ಜೈಲುವಾಸ ಬೇಕೋ ಎಂಬ ಆಫರ್ ಬಂದಿದ್ದಾಗ ಪಕ್ಷನಿಷ್ಠೆಗಾಗಿ ಜೈಲುವಾಸ ಆಯ್ಕೆ ಮಾಡಿಕೊಂಡಿದ್ದೆ ಎಂದು ಅವರು ಹೇಳಿದ್ದಾರೆ.

ಡಿಸಿಎಂ ಬೇಕೋ, ಜೈಲುವಾಸ ಬೇಕೋ? ಬಿಜೆಪಿಯಿಂದ ಬಂದಿತ್ತು ಆಫರ್, ಪಕ್ಷನಿಷ್ಠೆಗಾಗಿ ಜೈಲಿಗೋಗಿದ್ದೆ: ಸತ್ಯ ಬಿಚ್ಚಿಟ್ಟ ಡಿಕೆಶಿ
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on:Oct 16, 2025 | 9:23 AM

Share

ಬೆಂಗಳೂರು, ಅಕ್ಟೋಬರ್ 16: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜೀವನಪಯಣದ ಕುರಿತು ಹೊರಬಂದಿರುವ ಪುಸ್ತಕ ಡೈರೆಕ್ಟರ್ ಕೆಎಂ ರಘು ರಚಿಸಿರುವ ‘‘ಎ ಸಿಂಬಲ್ ಆಫ್ ಲಾಯಲ್ಟಿ ಡಿಕೆಶಿವಕುಮಾರ್’’ ಪುಸ್ತಕ ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಯಾಗಿದೆ. ಈ ಪುಸ್ತಕದ ಮೂಲಕ ಡಿಕೆ ಶಿವಕುಮಾರ್ ಹಲವು ಸ್ಫೋಟಕ ವಿಚಾರಗಳನ್ನು ಬಿಚ್ಟಿಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಹಿಂದೊಮ್ಮೆ ಬಿಜೆಪಿಯ ಬಾಗಿಲು ತಟ್ಟಿದ್ದರು ಎನ್ನುವುದು ಬಿಜೆಪಿಗರ ಮಾತು ಹಾಗೂ ಆರೋಪ. ಕೆಲ ದಿನಗಳ ಹಿಂದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಬಗ್ಗೆ ಹೇಳಿದ್ದರು. ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇದ್ದಿದ್ದರೆ ಬಿಜೆಪಿಗೆ ಸ್ವಾಗತ ಮಾಡಲಾಗುತ್ತಿತ್ತು ಎಂದಿದ್ದರು. ಇಂಥದ್ದೊಂದು ಪ್ರಯತ್ನ ಈಗಿನದ್ದಲ್ಲ. 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿಯೇ ಡಿಕೆಶಿಯವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನಗಳಾಗಿತ್ತು ಎಂಬುದು ಈಗ ಗೊತ್ತಾಗಿದೆ. ಇದನ್ನು ಖುದ್ದು ಡಿಕೆ ಶಿವಕುಮಾರ್ ಅವರೇ ಈಗ ಬಹಿರಂಗಪಡಿಸಿದ್ದಾರೆ.

ಇನ್‌ಕಮ್ ಟ್ಯಾಕ್ಸ್ ಆಡಿಟರ್‌ರಿಂದ ಫೋನ್ ಮಾಡಿಸಿ ಬಿಜೆಪಿಗೆ ಆಫರ್: ಸತ್ಯ ಬಿಚ್ಚಿಟ್ಟ ಬಂಡೆ

ಬೆಂಗಳೂರಿನ ಮೂವರು ಕಾಂಗ್ರೆಸ್ ಶಾಸಕರು ಸೇರಿ ಹಲವು ಮಂದಿ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆ ಮುಖ ಮಾಡಿದ್ದರು. ಅವತ್ತು ಕನಕಪುರದಲ್ಲಿದ್ದ ನಾನು ಓಡೋಡಿ ಬಂದು ನಮ್ಮ 5-6 ಶಾಸಕರನ್ನು ಕ್ವಾರ್ಟರ್ಸ್‌ಗೆ ಕರೆದುಕೊಂಡು ಬಂದಿದ್ದೆ. ಆಗ ದೆಹಲಿಯಿಂದ ನನಗೆ ಫೋನ್ ಬಂದಿತ್ತು. ಇನ್‌ಕಮ್ ಟ್ಯಾಕ್ಸ್ ಆಡಿಟರ್‌ರಿಂದ ಫೋನ್ ಮಾಡಿ ಮಾತನಾಡಿಸಿದ್ದರು. ಅಲ್ಲಿ ಒಬ್ಬ ಡಿಜಿ ಸಹ ಇದ್ದ. ಅವನು ಮಾತನಾಡಿದ. ಡಿಸಿಎಂ‌ ಆಗುತ್ತೀರಾ? ಅಥವಾ ಜೈಲಿಗೆ ಹೋಗುತ್ತೀರಾ? ಎರಡರಲ್ಲಿ ಒಂದು ಆಯ್ಕೆ ಮಾಡಬೇಕು ಎಂದ. ಜೊತೆಗಿದ್ದ ಶಾಸಕರನ್ನು ವಾಪಸ್ ಕಳುಹಿಸಲು ಹೇಳಿದರು. ಆದರೆ ನಾನು ಪಕ್ಷನಿಷ್ಠೆಗಾಗಿ ಡಿಸಿಎಂ ಬೇಡ ಎಂದು ಜೈಲುವಾಸವನ್ನೇ ಆಯ್ಕೆಮಾಡ್ಕೊಂಡೆ. ನಾನು ಮನಸ್ಸು ಮಾಡಿದ್ದರೆ ಅಂದೇ ಡಿಸಿಎಂ ಆಗಬಹುದಿತ್ತು ಎಂದು ಡಿಕೆ ಶಿವಕುಮಾರ್ ರಹಸ್ಯ ಬಿಚ್ಚಿಟ್ಟಿದ್ದಾರೆ.

ಮುಂದಿನ 8-10 ವರ್ಷ ಮಾತ್ರ ನನ್ನ ರಾಜಕಾರಣ: ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಯಾವುದೂ ನಿಂತ ನೀರಲ್ಲ ಎಂದ ಡಿಕೆ ಶಿವಕುಮಾರ್, A Symbol Of Loyalty ಪುಸ್ತಕದಲ್ಲಿ ನನ್ನ ಬದುಕಿನ ಶೇ 99 ರಷ್ಟು ಅಂಶಗಳು ಸತ್ಯ ಇವೆ ಎಂದು ತಿಳಿಸಿದ್ದಾರೆ. ನಾನು ಮುಂದಿನ 8-10 ವರ್ಷ ರಾಜಕಾರಣ ಮಾಡಬಹುದು. ಹೊಸಬರಿಗೆ ಅವಕಾಶಗಳು ಸಿಗಬೇಕು ಎಂದರು.

ನಾನು ಹೆಚ್​ಡಿ ದೇವೇಗೌಡರ ಕುಟುಂಬದ ವಿರುದ್ಧವಾಗಿ ರಾಜಕಾರಣ ಮಾಡಿದ್ದೇನೆ. ಆದರೆ ಪಕ್ಷದ ನಿಷ್ಠೆಗಾಗಿ ನಾನು ಹೆಚ್​ಡಿ ಕುಮಾರಸ್ವಾಮಿ ಜೊತೆಗೆ ಕೈಜೋಡಿಸಿದ್ದೇನೆ. ನನ್ನ ವಿರೋಧಿಗಳು ಕಥೆ ಕಟ್ಟಿ ಆರೋಪ‌ ಮಾಡುತ್ತಾರೆ. ಆದರೆ ನಾನು ಅದನ್ನೂ ಸ್ವಾಗತಿಸ್ತೇನೆ ಎಂದರು.

RSS ಬಗ್ಗೆ ಮಾತನಾಡಿದಕ್ಕೆ ಕ್ಷಮಾಪಣೆ ಕೇಳಲು ಯಾರೂ ಹೇಳಿಲ್ಲ: ಡಿಕೆಶಿ

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಹಾಡು ಹೇಳಿದ್ದನ್ನು ವಿವಾದ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, RSS ಬಗ್ಗೆ ನಾನು ಸದನದಲ್ಲಿ ಮಾತನಾಡಿದ್ದಕ್ಕೆ ಕ್ಷಮಾಪಣೆ ಕೇಳು ಎಂದು ನನಗೆ ಯಾರೂ ಹೇಳಲಿಲ್ಲ. ನನ್ನ ಕಾರ್ಯಕರ್ತರಿಗೆ ನೋವು ಆಗಬಾರದು ಎಂದು ಕ್ಷಮೆ ಕೇಳಿದೆ. ‘‘ನೀರಿನ ಮೇಲಿನ ಹೆಜ್ಜೆ’’ ಎಂಬ ನನ್ನ ಜೀವನದ ಕುರಿತ ಮತ್ತೊಂದು ಪುಸ್ತಕ ನವೆಂಬರ್ 6ಕ್ಕೆ ಬಿಡುಗಡೆಯಾಗಲಿದೆ. ಸಿಎಂ ಸಿದ್ದರಾಮಯ್ಯ ಅವರೇ ಇದನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಒಬ್ಬರು ಧರ್ಮಾಧಿಕಾರಿ ಭಾಷಣದಿಂದ ಪ್ರಭಾವಿತನಾಗಿ ನಾನು ಸಂಸ್ಕೃತ ಕಲಿತಿದ್ದೇನೆ ಎಂದ ಡಿ.ಕೆ.ಶಿವಕುಮಾರ್, ಕಾರ್ಯಕ್ರಮದಲ್ಲೂ ಶ್ಲೋಕ ಪಠಿಸಿ ಸಭಿಕರಿಂದ ಚಪ್ಪಾಳೆಗಿಟ್ಟಿಸಿದರು.

ಇದನ್ನೂ ಓದಿ: ಡಿಸಿಎಂ ಆಗ್ತೀರಾ ಅಥವಾ ಜೈಲಿಗೆ ಹೋಗ್ತೀರಾ: ಡಿಕೆ ಶಿವಕುಮಾರ್​​ ಆಯ್ಕೆ ಮಾಡಿಕೊಂಡಿದ್ದೇನು ಗೊತ್ತಾ?

ಕಾಂಗ್ರೆಸ್ ಪಾಳಯದಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿಕೆ ಶಿವಕುಮಾರ್ ಪಕ್ಷನಿಷ್ಠೆಯನ್ನ ಕಾಂಗ್ರೆಸ್‌ ಪ್ರತಿಯೊಬ್ಬ ಕಾರ್ಯಕರ್ತರು ಹಾಡಿಹೊಗಳುತ್ತಾರೆ. ಎಂಥದ್ದೇ ಸಂದರ್ಭ ಬಂದರೂ ಡಿಕೆ ಶಿವಕುಮಾರ್ ಪಕ್ಷಕ್ಕೆ ವಿರುದ್ಧವಾಗಿ ಹೋಗುವುದಿಲ್ಲ ಎಂಬುದನ್ನು ಅವರ ಆಪ್ತರು ಆಗಾಗ ನೆನಪಿಸುತ್ತಲೇ ಇರುತ್ತಾರೆ. ಇದೀಗ ಈ ಸಿಂಬಲ್ ಆಫ್ ಲಾಯಲ್ಟಿ ಎಂಬ ಪುಸ್ತಕ ಬಿಡುಗಡೆಯ ಸಂದರ್ಭದಲ್ಲೂ ಡಿಕೆ ಶಿವಕುಮಾರ್ ಅವರ ಬಾಯಿಂದಲೇ ಹಲವು ರಹಸ್ಯಗಳು ಬಯಲಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Thu, 16 October 25

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್