ಕೊನೆಗೂ ಅಧಿಕಾರ ಹಸ್ತಾಂತರದ ಗುಟ್ಟು ಬಿಚ್ಚಿಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​

Edited By:

Updated on: Nov 25, 2025 | 2:49 PM

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಖರ್ಗೆ ಮತ್ತು ರಾಹುಲ್ ಗಾಂಧಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯ ಮಧ್ಯೆ, ಡಿಕೆ ಶಿವಕುಮಾರ್ ತಮ್ಮ ಕಷ್ಟದ ದಿನಗಳ ಜನರ ಬೆಂಬಲ ಸ್ಮರಿಸಿದ್ದಾರೆ. ಪಕ್ಷದ ಘನತೆ ಮತ್ತು ಒಗ್ಗಟ್ಟಿಗೆ ಆದ್ಯತೆ ನೀಡುವುದಾಗಿ ಹೇಳಿರುವ ಅವರು, ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕನಕಪುರ, ನವೆಂಬರ್​ 25: ರಾಜ್ಯ ಕಾಂಗ್ರೆಸ್​ನಲ್ಲಿ ಸಿಎಂ ಪಟ್ಟಕ್ಕಾಗಿ ಫೈಟ್​​ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣದ ತಂತ್ರ ಒಂದುಕಡೆಯಾದರೆ ಡಿಸಿಎಂ ಡಿಕೆಶಿ ಬಣದ ಪ್ರತಿತಂತ್ರ ಮತ್ತೊಂದೆಡೆ ರೆಡಿಯಾಗ್ತಿದೆ. ಈ ನಡುವೆ ಡಿ.ಕೆ. ಶಿವಕುಮಾರ್​ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ ಎಂದಿದ್ದಾರೆ. ಕನಕಪುರದಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನ ಹಸ್ತಾಂತರ ಐದಾರು ಜನರ ಗುಟ್ಟಿನ ವಿಚಾರ. ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರೋದಕ್ಕೆ ನನಗೆ ಇಷ್ಟವಿಲ್ಲ. ಪಕ್ಷ ಇದ್ದರೆ ನಾವೆಲ್ಲ, ಪಕ್ಷವನ್ನು ನಾನು ವೀಕ್ ಮಾಡುವುದಿಲ್ಲ. ಸಿದ್ದರಾಮಯ್ಯ ಬಜೆಟ್ ಮಂಡಿಸ್ತೇನೆ ಅಂದಿದ್ದಾರೆ, ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಕೂಡ ದುಡಿದಿದ್ದಾರೆ. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ ಎಂದು ಡಿಕೆಶಿ ಹೇಳಿದ್ದಾರೆ. ಜೊತೆಗೆ ರಾಯರೆಡ್ಡಿ, ಡಿವಿಎಸ್​ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ನಾನು ಅವರ ವಕ್ತಾರ ಅಲ್ಲ ಎಂದು ಇದೇ ವೇಳೆ ತಿರುಗೇಟು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.