ರಾಜ್ಯದಲ್ಲಿ ಹೂಡಿಕೆ ಮಾಡುವ ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಸೆಕ್ರೆಟರಿಯೇಟ್: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

|

Updated on: Nov 01, 2023 | 10:25 PM

ಅನಿವಾಸಿ ಭಾರತೀಯರಿಗೆ ಅನುಕೂಲವಾಗುವಂತೆ ಸೆಕ್ರೆಟರಿಯೇಟ್ ಸ್ಥಾಪಿಸುತ್ತೇವೆ. ಅವರಲ್ಲಿ ಬಹಳಷ್ಟು ಮಂದಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಅವರು ತಮ್ಮ ತಾಯ್ನಾಡು ಸಮೃದ್ಧವಾಗಿರಬೇಕೆಂದು ಬಯಸುತ್ತಾರೆ ಎಂದು ಶಿವಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಹೂಡಿಕೆ ಮಾಡುವ ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಸೆಕ್ರೆಟರಿಯೇಟ್: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಡಿಕೆ ಶಿವಕುಮಾರ್
Follow us on

ಬೆಂಗಳೂರು, ನವೆಂಬರ್ 1: ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸುವ ಅನಿವಾಸಿ ಭಾರತೀಯರಿಗಾಗಿ (NRIs) ರಾಜ್ಯ ಸರ್ಕಾರ ಪ್ರತ್ಯೇಕ ಸೆಕ್ರೆಟರಿಯೇಟ್ (Secretariat) ತೆರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ. ಈ ಸೌಲಭ್ಯವು ಕೇಂದ್ರ ಸರ್ಕಾರ ಹಾಗೂ ಕೇರಳ ಸರ್ಕಾರ ಅನಿವಾಸಿ ಭಾರತೀಯ ಹೂಡಿಕೆದಾರರಿಗೆ ನೀಡುತ್ತಿರುವ ಸೌಲಭ್ಯಗಳಿಗೆ ಅನುಗುಣವಾಗಿರಲಿದೆ.

‘ಅನಿವಾಸಿ ಭಾರತೀಯರಿಗೆ ಅನುಕೂಲವಾಗುವಂತೆ ಸೆಕ್ರೆಟರಿಯೇಟ್ ಸ್ಥಾಪಿಸುತ್ತೇವೆ. ಅವರಲ್ಲಿ ಬಹಳಷ್ಟು ಮಂದಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಅವರು ತಮ್ಮ ತಾಯ್ನಾಡು ಸಮೃದ್ಧವಾಗಿರಬೇಕೆಂದು ಬಯಸುತ್ತಾರೆ’ ಎಂದು ಶಿವಕುಮಾರ್ ಹೇಳಿದ್ದಾರೆ.

ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಸೆಕ್ರೆಟರಿಯೇಟ್ ಸ್ಥಾಪಿಸುವುದಾಗಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪಕ್ಷದ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು ಎಂದು ಅವರು ಹೇಳಿದರು. ಜತೆಗೆ, ಈಗಾಗಲೇ ಉಪಾಧ್ಯಕ್ಷರನ್ನು ನೇಮಿಸಲಾಗಿದೆ ಎಂದೂ ತಿಳಿಸಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಎನ್‌ಆರ್‌ಐಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಕರಡು ಟಿಪ್ಪಣಿಯನ್ನು ಸಹ ಸಲ್ಲಿಸಿದ್ದಾರೆ ಎಂದು ಶಿವಕುಮಾರ್ ಮಾಹಿತಿ ನೀಡಿದರು.

ಬೆಂಗಳೂರಿನಾಚೆಗೂ ಕರ್ನಾಟಕದಲ್ಲಿ ಹೂಡಿಕೆಗೆ ಪ್ರಿಯಾಂಕ್ ಖರ್ಗೆ ಮನವಿ

ಕರ್ನಾಟಕ ಸರ್ಕಾರವು ಬಂಡವಾಳ ಹೂಡಿಕೆಗೆ ಪೂರಕ ವಾತಾವರಣವನ್ನು ಒದಗಿಸಲು ಬದ್ಧವಾಗಿದ್ದು, ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜಧಾನಿಯ ಆಚೆಗೂ ಹೂಡಿಕೆ ಮಾಡಬೇಕು ತಂತ್ರಜ್ಞಾನ ಉದ್ಯಮಕ್ಕೆ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಮನವಿ ಮಾಡಿದ್ದರು.

ಇದನ್ನೂ ಓದಿ: ಇಸ್ರೋ ಮುಖ್ಯಸ್ಥ ಎಸ್​ ಸೋಮನಾಥ ಸೇರಿ ವಿವಿಧ ಕ್ಷೇತ್ರಗಳ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

26ನೇ ಬೆಂಗಳೂರು ಟೆಕ್ ಸಮ್ಮಿಟ್​​ನ ಪೂರ್ವಭಾವಿ ಸಭೆಯಲ್ಲಿ ನವದೆಹಲಿಯಲ್ಲಿ ಮಾತನಾಡಿದ್ದ ಅವರು, ನಿಮ್ಮ ಸಹಕಾರವನ್ನು ಕೋರಲು ನಾನು ಇಲ್ಲಿದ್ದೇನೆ. ಕರ್ನಾಟಕವು ಕೇವಲ ಬೆಂಗಳೂರು ಮಾತ್ರವಲ್ಲ. ಅದರ ಆಚೆಗೂ ಅಭಿವೃದ್ಧಿಹೊಂದಬೇಕಿದೆ. ಅದಕ್ಕೆ ಸಹಾಯ ಮಾಡಲು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ನಾವು ಬೆಂಗಳೂರು ನಗರದ ಹೊರಗೆ ಕೂಡ ಹೂಡಿಕೆಗೆ ಅನುಕೂಲಕರ ವಾತಾವರಣವನ್ನು ಒದಗಿಸುತ್ತಿದ್ದೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ