ಕಾಂಗ್ರೆಸ್​​ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ​ ಎಂದ ಡಿಕೆ ಶಿವಕುಮಾರ್​

ಲೋಕಸಭಾ ಚುನಾವಣೆಗೆ (Loksabha Elections 2024) ಕಾಂಗ್ರೆಸ್​ನ (Congress)ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್​ 8 ರಂದು ಬಿಡುಗಡೆ ಮಾಡಿದೆ. ಇನ್ನುಳಿದಂತೆ 21 ಅಭ್ಯರ್ಥಿಗಳ ಕುರಿತು ಇಂದು ಅಥವಾ ನಾಳೆ ಬೆಳಗ್ಗೆ ಒಳಗಡೆ ಹೊರ ಬೀಳಲಿದೆ  ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ.

ಕಾಂಗ್ರೆಸ್​​ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ​ ಎಂದ ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 20, 2024 | 10:11 PM

ನವದೆಹಲಿ, ಮಾ.20: ಲೋಕಸಭಾ ಚುನಾವಣೆಗೆ (Loksabha Elections 2024) ಕಾಂಗ್ರೆಸ್​ನ (Congress)ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್​ 8 ರಂದು ಬಿಡುಗಡೆ ಮಾಡಿದೆ. ಇನ್ನುಳಿದಂತೆ 21 ಅಭ್ಯರ್ಥಿಗಳ ಕುರಿತು ಇಂದು ಅಥವಾ ನಾಳೆ ಬೆಳಗ್ಗೆ ಒಳಗಡೆ ಹೊರ ಬೀಳಲಿದೆ  ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್​ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.

ಮೊದಲ ಬಾರಿಗೆ 5 ಹೆಣ್ಣು ಮಕ್ಕಳಿಗೆ ಲೋಕಸಭಾ ಟಿಕೆಟ್

ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 5 ಹೆಣ್ಣು ಮಕ್ಕಳಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್​ಗಳನ್ನ ಈ ಸಲ ಯುವಕರಿಗೆ ನೀಡಿದ್ದೇವೆ. ಕೋಲಾರ ಲೋಕಸಭೆಯಲ್ಲಿ ಗೊಂದಲ ಇರುವ ವಿಚಾರ, ‘ಎರಡು ಕಡೆಯ ಬೆಂಬಲಿಗರು ಬಂದು ಭೇಟಿಯನ್ನ ಮಾಡಿದ್ದಾರೆ. ಅಂತಿಮವಾಗಿ ನಾವು ನಿರ್ಧಾರವನ್ನ ಕೈಗೊಳ್ಳುತ್ತೇವೆ ಎಂದರು. ಇದೇ ವೇಳೆ ಕುಟುಂಬ ರಾಜಕಾರಣ ಮುಂದುವರೆದಿರುವ ವಿಚಾರ, ‘ಯಡಿಯೂರಪ್ಪನವರ ಮನೆಯಲ್ಲಿ ಕುಟುಂಬ ರಾಜಕಾರಣ ಇಲ್ವಾ ಎಂದು ಪ್ರಶ್ನಿಸಿದ ಅವರು, ಈ ಬಾರಿ ಜೊತೆಗೆ ರಾಜಕೀಯವಾಗಿ ಸದೃಢ ಇರುವ ನಾಯಕರಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಬಿಜೆಪಿ ನಾಯಕರಿಗೆ ಗಾಳ; ಬಹಿರಂಗವಾಗಿ ಮಾತನಾಡಲು ನಿರಾಕರಿಸಿದ ಡಿಕೆಶಿ

ಇನ್ನು ಕಾಂಗ್ರೆಸ್​ನಿಂದ ಬಿಜೆಪಿ ನಾಯಕರಿಗೆ ಗಾಳ ವಿಚಾರ, ‘ಈ ಕುರಿತು ಬಹಿರಂಗವಾಗಿ ಮಾತನಾಡಲು ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಬೇರೆ ಪಕ್ಷದ ನಾಯಕರು ಕಾಂಗ್ರೆಸ್​ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡಲ್ಲ,  ಕೆಲವು ಸಂಸದರು ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ನನಗೆ ವಿಷವಿಟ್ಟಿದ್ದಾರೆಂದು ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆ ವಿಚಾರ, ‘ನಾನೇದರೂ ಸಮ್ಮಿಶ್ರ ಸರ್ಕಾರ ಬೀಳಿಸಿದ್ರೆ ನಾನು ನಂಬುವ ದೇವರು ನನಗೆ ಶಿಕ್ಷೆ ಕೊಡಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Wed, 20 March 24

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us