ಮೇಕೆದಾಟು ಡ್ಯಾಂ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವ ನಂಬಿಕೆ ಇದೆ; ಡಿ.ಕೆ.ಶಿವಕುಮಾರ್ ಟ್ವೀಟ್

ರಾಜ್ಯದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ನ ಭೇಟಿ ಮಾಡಿದ್ದಾರೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉಪಸ್ಥಿತರಿದ್ದಾರೆ.

ಮೇಕೆದಾಟು ಡ್ಯಾಂ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವ ನಂಬಿಕೆ ಇದೆ; ಡಿ.ಕೆ.ಶಿವಕುಮಾರ್ ಟ್ವೀಟ್
ಡಿ.ಕೆ. ಶಿವಕುಮಾರ್
Follow us
TV9 Web
| Updated By: sandhya thejappa

Updated on:Jul 13, 2021 | 11:06 AM

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಇಂದು (ಜುಲೈ 13) ನಡೆಸಲಿರುವ ಸಭೆಯಲ್ಲಿ ಮೇಕೆದಾಟು ಅಣೆಕಟ್ಟೆ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಇದು ಇಡೀ ರಾಜ್ಯದ ಜನರ ನಂಬಿಕೆಯೂ ಹೌದು. ಮುಖ್ಯಮಂತ್ರಿ ಈ ನಿಟ್ಟಿನಲ್ಲಿ ಕೈ ಜೋಡಿಸ್ತಾರೆ ಎಂಬ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ನ ಭೇಟಿ ಮಾಡಿದ್ದಾರೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉಪಸ್ಥಿತರಿದ್ದಾರೆ.

ನ್ಯಾಯ ಸಿಗುವ ಭರವಸೆಯಿದೆ ಕೃಷಿಗಿಂತಲೂ ಕುಡಿಯುವ ನೀರಿಗೆ ಮೊದಲ ಆದ್ಯತೆಯಾದ್ದರಿಂದ ಕರ್ನಾಟಕಕ್ಕೆ ಮೇಕೆದಾಟು ಯೋಜನೆ ಜಾರಿಗೊಳಿಸಲು ಸಂಪೂರ್ಣ ಹಕ್ಕಿದೆ. ಕಾನೂನಿನ ಪ್ರಕಾರವಾಗಿ ನಾವು ಇಟ್ಟಿರುವ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿ, ನಮಗೆ ಮೇಕೆದಾಟು ಯೋಜನೆ ಪೂರ್ಣಗೊಳಿಸಲು ಅನುಮತಿ ನೀಡಬೇಕು. ಕೇಂದ್ರ ಸರ್ಕಾರದಿಂದ ನಮಗೆ ನ್ಯಾಯ ಸಿಗುವ ಭರವಸೆಯಿದೆ ಎಂದು ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

Mekedatu Project: ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದು; ಸ್ಟಾಲಿನ್ ನೇತೃತ್ವದಲ್ಲಿ ತಮಿಳುನಾಡು ನಾಯಕರ ನಿರ್ಧಾರ

Mekedatu Project: ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ; ಗೃಹಸಚಿವ ಬೊಮ್ಮಾಯಿ ವಿಶ್ವಾಸ

(DK Shivakumar says he hopes Mekedatu dam construction works will starts soon)

Published On - 11:03 am, Tue, 13 July 21