ಬೆಂಗಳೂರು: ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಆಗಬಹುದೆಂಬ ಭಯವೂ ಆವರಿಸಿದೆ. ಆದರೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಒತ್ತನ್ನು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸರ್ವಪಕ್ಷಗಳ ಜತೆ ಸಭೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್ ಸಭೆಗೆ ನನಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ ಎಂದಿದ್ದಾರೆ. ಜೊತೆಗೆ ಕೊರೊನಾ ವೇಳೆ ಕಳೆದ ಬಾರಿ ರಾಜ್ಯ ಸರ್ಕಾರ ಘೋಷಿಸಿದ್ದ ಪರಿಹಾರ ಹಣವನ್ನು ಆಟೋ, ಚಾಲಕರಿಗೆ ಸೇರಿದಂತೆ ನೌಕರರಿಗೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಈವರೆಗೆ ನಮ್ಮ ಮಾತು ಕೇಳಲೇ ಇಲ್ಲ. ಇಷ್ಟಬಂದಂತೆ ಅವರೇ ತೀರ್ಮಾನಗಳನ್ನು ಕೈಗೊಂಡಿದ್ದರು. ಈಗ ಪರಿಸ್ಥಿತಿ ಕೈಮೀರಿದಾಗ ನಮಗೆ ಹೇಳುತ್ತಿದ್ದಾರೆ. ಜನ ಇವತ್ತು ನರಳುತ್ತಿದ್ದಾರೆ. ಲಾಕ್ಡೌನ್ ಮಾಡುವುದರಿಂದ ಏನ್ ಪ್ರಯೋಜವಿಲ್ಲ. ಒಂದು ಕಡೆ ಜೀವ, ಮತ್ತೊಂದೆಡೆ ಜೀವನ ಎರಡೂ ಮುಖ್ಯ. ಬ್ಯಾಂಕ್ನವರು 1 ವರ್ಷದ ಸಾಲದ ಬಡ್ಡಿಯನ್ನು ನಿಲ್ಲಿಸಿಲ್ಲ ಎಂದು ಮಾತನಾಡಿದ ಅವರು ರಾಜ್ಯದಲ್ಲಿ ಹೋಟೆಲ್ಗಳನ್ನು ಮಾರುವ ಪರಿಸ್ಥಿತಿ ಬಂದಿದೆ ಎಂದರು.
ಇದನ್ನೂ ಓದಿ
ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ
(DK Shivakumar says there was no need for lockdown in the state)