ತುಮಕೂರು, ಆಗಸ್ಟ್ 27: ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಆಡಳಿತ ಪಕ್ಷ ಕಾಂಗ್ರೆಸ್ನಲ್ಲಿ ಚರ್ಚೆ ನಡೆಯುತ್ತಲೇ ಇದೆ. ಸದ್ಯ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದರೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗಲಿ ಎಂಬ ಅಭಿಪ್ರಾಯಗಳನ್ನು ಹೇಳುತ್ತಲೇ ಇದ್ದಾರೆ. ಇದೀಗ, ತಿಪಟೂರಿನ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ (K.Shadakshari) ಅವರು ಕೂಡ ಕರ್ನಾಟಕದ ಮುಖ್ಯಮಂತ್ರಿ ಆಗುವ ಶಿವಕುಮಾರ್ ಅವರ ಆಸೆಯನ್ನು ಬಿಚ್ಚಿಟ್ಟಿದ್ದಾರೆ.
ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ನಡೆದ ಕರವಗಲ್ ಶ್ರೀ ಆಂಜನೇಯ ಸ್ವಾಮಿ ನೂತನ ದೇವಾಲಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಷಡಕ್ಷರಿ, ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಇವರ ಈ ಆಸೆಯನ್ನು ಗಂಗಾಧರ ಅಜ್ಜ ನೇರವೇರಿಸುತ್ತಾರೆ ಎಂದು ಭಾವಿಸುತ್ತೇನೆ ಎಂದರು.
ಇದನ್ನೂ ಓದಿ: ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಕೆ ಶಿವಕುಮಾರ್ಗೆ ಹೆಚ್ಚಾದ ಪ್ರೀತಿ, ಇದು ಬೈ ಎಲೆಕ್ಷನ್ ತಯಾರಿಯೇ?
ಡಿಸಿಎಂ ಡಿಕೆ ಶಿವಕುಮಾರ್ ಅವರು ವೈಯಕ್ತಿಕವಾಗಿ ಆಗಲಿ ಜೊತೆಗೆ ಕುಟುಂಬಸ್ಥರಾಗಲಿ ಏನಾದರೂ ಆಗಲಿ ಮೊದಲು ಅಜ್ಜಯ್ಯ ಗಂಗಾಧರ ಪೀಠವನ್ನ ದರ್ಶನ ಪಡೆದು ಆಶಿರ್ವಾದ ಪಡೆದು ಹೋಗುತ್ತಾರೆ ಎಂದು ಹೇಳಿದ ಷಡಕ್ಷರಿ, ಈ ಕ್ಷೇತ್ರದ ಮೇಲೆ ಶಿವಕುಮಾರ್ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ತಿಪಟೂರು ತಾಲೂಕಿನಲ್ಲಿ ನೀರಾವರಿಗೆ ಹೆಚ್ಚು ಆದ್ಯತೆ ನೀಡಬೇಕಿದೆ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:06 pm, Sun, 27 August 23