ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಗಳವಾರ ರೋಡ್ ಶೋ ವೇಳೆ ಜನರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರವಾಗಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 29, 2023 | 6:29 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮಂಗಳವಾರ ರೋಡ್ ಶೋ ವೇಳೆ ಜನರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿಚಾರವಾಗಿ ಬಿಜೆಪಿಯು (BJP) ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ವೇಳೆ ತೆರೆದ ಬಸ್​​ನಲ್ಲಿ ರೋಡ್​ಶೋ ನಡೆಸಿದ್ದ ಡಿಕೆಶಿ ಕಲಾವಿದರತ್ತ ಹಣ ಎಸೆದಿದ್ದರು. ಈ ಬಗ್ಗೆ ಬಿಜೆಪಿ ಎಂಎಲ್​ಸಿ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜತೆಗೆ, ಎಸ್​ಡಿಪಿಐ ಮುಖಂಡರೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರವಾಗಿಯೂ ದೂರು ಸಲ್ಲಿಸಲಾಗಿದೆ.

ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಒಂದು ಬದಿಯಲ್ಲಿ ಕಲಾವಿದರ ತಂಡ ವಿವಿಧ ಪ್ರದರ್ಶನಗಳನ್ನು ನಡೆಸುತ್ತಿತ್ತು. ಅವರತ್ತ ಡಿಕೆಶಿ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದಿದ್ದರು. ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುವ ಮಂಡ್ಯದಲ್ಲಿ ಕಾಂಗ್ರೆಸ್‌ನ ಒಕ್ಕಲಿಗ ನಾಯಕ, ಕಾಂಗ್ರೆಸ್​ ಮತ ಗಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಈ ಮಧ್ಯೆ, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತುಕೊಳ್ಳಲು ಆಶೀರ್ವದಿಸಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನೀವು ಮಾಡಿದ್ದೆಲ್ಲ ಸಹಿಸಿಕೊಂಡು ಬಿರಿಯಾನಿ ಹಾಕುವ ದೇಶ ಇದಲ್ಲ; ಎಸ್​ಡಿಪಿಐ ಮುಖಂಡಗೆ ಸಿಟಿ ರವಿ ತಿರುಗೇಟು

ಎಸ್​ಡಿಪಿಐ ಮುಖಂಡರ ವಿರುದ್ಧ ಯಾಕೆ ದೂರು?

ಮುಸ್ಲಿಮರ ಮೀಸಲಾತಿ ವಾಪಸ್ ಕೊಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಡ್ಡಿ ಬಿಚ್ಚಿಸುತ್ತೇವೆ ಎಂದು ಚಿತ್ರದುರ್ಗ ಎಸ್​​ಡಿಪಿಐ ಮುಖಂಡರೊಬ್ಬರು ಇತ್ತೀಚೆಗೆ ಹೇಳಿದ್ದರು. ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸುವ ಬಗ್ಗೆ ಕಳೆದ ವಾರ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್​ಡಿಪಿಐ ಮುಖಂಡರು ಬಿಜೆಪಿ ಹಾಗೂ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ