ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ: ಕುಮಾರಸ್ವಾಮಿ ವಿರುದ್ಧ ಡಿಕೆ ಶಿವಕುಮಾರ್​ ವಾಗ್ದಾಳಿ

‘ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ’ ವಿಚಾರವಾಗಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್​ನಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್​​, ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದಿದ್ದಾರೆ.

ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ: ಕುಮಾರಸ್ವಾಮಿ ವಿರುದ್ಧ ಡಿಕೆ ಶಿವಕುಮಾರ್​ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 14, 2024 | 7:58 PM

ತುಮಕೂರು, ಏಪ್ರಿಲ್​ 14: ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್​ ತೀವ್ರ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್​ನಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ನನ್ನ ತಾಯಂದಿರು, ಅಕ್ಕಂದಿರು, ಅವರ ತಾಯಿಯ ಮನೆಗೆ ಹೋಗೋಕೆ, ಧರ್ಮಸ್ಥಳ, ಕುಕ್ಕೆಗೆ‌ ಹೋಗಲು ಬಸ್‌ ಹಿಡಿದ್ರೆ ದಾರಿ‌ತಪ್ಪಿದ್ದಾರೆ ಅಂತೀರಾ? ಅವರ ಕ್ಷಮೆ ಕೇಳಿ ಅಂತಾ ಹೇಳಲ್ಲ. ಕ್ಷಮಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದ್ದಾರೆ.

ಮಾನ್ಯ ಕುಮಾರಸ್ವಾಮಿ, ದೇಶದ ಪ್ರಧಾನಿಯಾಗಿದ್ದ ದೇವೇಗೌಡರ ಮಗ. ಈ ಭೂಮಿಲಿ ದೊಡ್ಡ ಸ್ಥಾನ ಹೊತ್ತ ದೊಡ್ಡ ಕುಟುಂಬ. ಹೆಚ್‌.ಡಿ.ದೇವೇಗೌಡರ ಮನೆಯಲ್ಲಿ ಎಂಎಲ್ಎ, ಎಂಪಿಗಳು ಇದ್ದಾರೆ. ಜನರ ಬದುಕಿಗೆ ಶಕ್ತಿ ಕೊಡಬೇಕು ಅಂತಾ ಜನರಿಗೆ 5 ಗ್ಯಾರಂಟಿ ನೀಡಿದ್ದೇವೆ. ಧೀಮಂತ ಮಹಿಳೆ ಇಂದಿರಾಗಾಂಧಿ ನಿಧನರಾದಾಗ ಮನಸ್ಸಿಗೆ ನೋವಾಗಿತ್ತು. ಅದು ಆದ್ಮೆಲೇ ಇಂದು ಮನಸ್ಸಿಗೆ ದುಃಖವಾಗುತ್ತಿದೆ. ಈಗಾಗಲೇ ಹೆಣ್ಣುಮಕ್ಕಳು ಪ್ರತಿಭಟನೆ ಆರಂಭಿಸಿದ್ದಾರೆ. ದೇಶದೆಲ್ಲೆಡೆ ಹೊತ್ತಿಕೊಂಡು‌ ಉರಿಯುತ್ತಿದೆ ಎಂದಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿ.ಕೆ.ಸುರೇಶ್ ತಿರುಗೇಟು

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಕೀಳಾಗಿ ಮಾತನಾಡಿರುವುದು ಎಲ್ಲರೂ ತಲೆತಗ್ಗಿಸುವಂಥದ್ದು. ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವಿಚಲಿತರಾಗಿದ್ದಾರೆ. ಈ ಹಿಂದೆಯೂ 2-3 ಬಾರಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇಡೀ ಮಹಿಳಾ ಕುಲಕ್ಕೆ ಹೆಚ್​.ಡಿ.ಕುಮಾರಸ್ವಾಮಿ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಾನು ಮಹಿಳೆಯರನ್ನು ಅಪಮಾನ ಮಾಡಿಲ್ಲ: ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ

ಚುನಾವಣಾ ಆಯೋಗ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಬೇಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಕುಟುಂಬದ ವ್ಯವಸ್ಥೆ ಬದಲಾಗುತ್ತಿದೆ. ಇದನ್ನು ಸಹಿಸದೆ ಕುಮಾರಸ್ವಾಮಿ ಮಹಿಳೆಯವರ ಬಗ್ಗೆ ಮಾತನಾಡ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:18 pm, Sun, 14 April 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್