ಡಿಕೆ ಶಿವಕುಮಾರ್‌ಗೆ ಅನಾರೋಗ್ಯ: 3 ದಿನ ಸಾರ್ವಜನಿಕರ ಭೇಟಿ ಇಲ್ಲ, ಆಗಿದ್ದೇನು?
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಹಾಗೂ ವಿಶ್ರಾಂತಿಗೆ ಮುಂದಾಗಿದ್ದಾರೆ. ಇದರಿಂದ ಮೂರು ದಿನಗಳ ಕಾಲ ಡಿಕೆ ಶಿವಕುಮಾರ್ ಯಾವುದೇ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ. ಈ ಬಗ್ಗೆ ಸ್ವತಃ ಡಿಕೆಶಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ನಾಳೆಯಿಂದ (ಜುಲೈ 22) ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಬೆಂಗಳೂರು, (ಜುಲೈ 21): ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಾಳೆಯಿಂದ (ಜುಲೈ 22) ಮೂರು ದಿನಗಳ ಕಾಲ ಯಾರನ್ನೂ ಭೇಟಿ ಸಿಗಲ್ಲ. ಈ ಬಗ್ಗೆ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಬರೆದುಕೊಂಡಿದ್ದಾರೆ.
ಡಿಕೆ ಶಿವಕುಮಾರ್ ಅವರು ತಮ್ಮ ಅನಾರೋಗ್ಯದ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದ್ರೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಡಿಕೆ ಶಿವಕುಮಾರ್‌ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಈ ಬಗ್ಗೆ ಸುರ್ಜೆವಾಲ ಟ್ವಿಟ್ಟರ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದು ಖಚಿತವಾಗಿದೆ.
ಜ್ವರದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ರಣದೀಪ್ ಸಿಂಗ್ ಸುರ್ಜೆವಾಲ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ನಿರಂತರ ಜ್ವರದಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದ್ದು, ನಮ್ಮ ಪಿಸಿಸಿ ಅಧ್ಯಕ್ಷರು ಮತ್ತು ಉಪ ಮುಖ್ಯಮಂತ್ರಿಗಳು ಶೀಘ್ರವಾಗಿ ಚೇತರಿಸಿಕೊಂಡು ಜನರ ಸೇವೆಯಲ್ಲಿ ನಿರತವಾಗಬೇಕೆಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
Spoke to Sh. @DKShivakumar and checked on his health, owing to constant fever for last few days. Wishing our PCC President & Dy CM a speedy recovery to continue playing a frontline role in service of the people. https://t.co/Tq0T758xxK
— Randeep Singh Surjewala (@rssurjewala) July 21, 2025
ಜುಲೈ 16ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಅಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ವಿಶ್ರಾಂತಿ ಪಡೆದುಕೊಂಡಿದ್ದರು. ಈಗ ಮತ್ತೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೂರು ದಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಹೀಗಾಗಿ ನಾಳೆಯಿಂದ (ಮಂಗಳವಾರ) ಮೂರು ದಿನಗಳ ಕಾಲ ಸಾರ್ವಜನಿಕ ಭೇಟಿ, ಸಭೆ-ಸಮಾರಂಭ, ಕಾರ್ಯಕ್ರಮಗಳಿಂದ ದೂರ ಉಳಿಯಲಿದ್ದಾರೆ.
Published On - 9:31 pm, Mon, 21 July 25