AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ

ಕರ್ನಾಟಕ ರಾಜಕಾರಣದಲ್ಲಿ(Karnataka Politics) ಡಿ.ಕೆ.ಶಿವಕುಮಾರ್ ಅಚಲ ದೈವಭಕ್ತಿ ಇಟ್ಟುಕೊಂಡವರು. ಹೀಗಾಗಿ ಅವರು ನಾಳೆ (ಜೂನ್ 03) ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ 55 ಸ್ವಾಮೀಜಿಗಳು, ಫಾದರ್ ಹಾಗೂ ಮೌಲ್ವಿಗಳಿಗೆ ಆಹ್ವಾನ ನೀಡಲಾಗಿದ್ದು, ಪಟ್ಟಿ ಈ ಕೆಳಗಿನಂತಿದೆ.

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ
Dk Shivakumar
ಪ್ರಸನ್ನ ಗಾಂವ್ಕರ್​
| Edited By: |

Updated on: Jun 02, 2026 | 2:43 PM

Share

ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ (DK Shivakumar) ಅವರು ನಾಳೆ (ಮೇ ಜೂನ್ 03) ಸಂಜೆ 4.05ಕ್ಕೆ ಲೋಕಭವನದ (Lokbhavana) ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಮೊದಲ ಬಾರಿಗೆ ಎಲ್ಲಾ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಈಗಾಗಲೇ ಎಲ್ಲಾ ಧರ್ಮ, ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚನೆ ನೀಡಲಾಗಿದೆ. ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಮುಂದಾಗಿದ್ದಾರೆ.

ಮುಖ್ಯಾಂಶಗಳು

  • ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ.ಶಿವಕುಮಾರ್​
  • ಸರ್ವ ಧರ್ಮ, ಸಮುದಾಯದ ಶ್ರೀಗಳ ಸಮ್ಮುಖದಲ್ಲಿ ಡಿಕೆ ಪದಗ್ರಹಣ
  • ಲೋಕಭವನದಲ್ಲಿ ನಡೆಯೋ ಪ್ರಮಾಣವಚನಕ್ಕೆ 55 ಮಠಾಧಿಪತಿಗಳು, ಫಾದರ್ ಹಾಗೂ ಮೌಲ್ವಿಗಳಿಗೆ ಸರ್ಕಾರದಿಂದ ಆಹ್ವಾನ
  • ಪೂರ್ವಾಭಿಮುಖವಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಿಎಂ ಮತ್ತು ಸಚಿವರು

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪ್ರಮಾಣವಚನ

ಸರ್ವ ಧರ್ಮ, ಸರ್ವ ಸಮುದಾಯದ ಸ್ವಾಮೀಜಿಗಳ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, 55 ಸ್ವಾಮೀಜಿಗಳು, ಫಾದರ್ , ಮಠಾಧಿಪತಿಗಳು ಹಾಗೂ ಮೌಲ್ವಿಗಳಿಗೆ ಸರ್ಕಾರದಿಂದಲೇ ಅಧಿಕೃತ ಆಹ್ವಾನ ಕಳಿಸಲು ಡಿಕೆ ಶಿವಕುಮಾರ್ ಸೂಚನೆ ನೀಡಿದೆ.ಇದರ ಬೆನ್ನಲ್ಲೇ ಯಾರಿಗೆಲ್ಲಾ ಆಹ್ವಾನ ನೀಡಬೇಕೆಂದು ಶಿಷ್ಟಾಚಾರ ವಿಭಾಗವು ಡಿ.ಕೆ ಶಿವಕುಮಾರ್ ಕಚೇರಿಯಿಂದ ಪಟ್ಟಿ ಪಡೆದುಕೊಂಡಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು

ಪೂರ್ವಾಭಿಮುಖವಾಗಿ ಪ್ರಮಾಣ ವಚನ

ಇನ್ನು ಡಿಕೆ ಶಿವಕುಮಾರ್ ಜ್ಯೋತಿಷ್ಯಯನ್ನು ಬಹಳ ನಂಬುವರು. ಹೀಗಾಗಿ ಸ್ವಾಮೀಜಿಗಳು ಹೇಳಿದ ದಿನಾಂಕ, ಸಮಯವನ್ನು ಚಾಚು ತಪ್ಪಿದೆ ಪಾಲನೆ ಮಾಡಲಿದ್ದಾರೆ. ಅದರಂತೆ ಡಿಕೆ ಶಿವಕುಮಾರ್ ಅವರು ಪೂರ್ವಾಭಿಮುಖವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಗಾಜಿನ ಮನೆಯಲ್ಲಿ 1100 ರಷ್ಟು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿಗಳು, ಧರ್ಮಗುರುಗಳು, ನ್ಯಾಯಾಧೀಶರು, ವಿಶೇಷ ಆಹ್ವಾನಿತರು, ಬೇರೆ ರಾಜ್ಯಗಳ ಸಿಎಂಗಳಿಗೆ ಸೇರಿದಂತೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಆಹ್ವಾನದ ಪಟ್ಟಿಯಲ್ಲಿರುವ ಪ್ರಮುಖ ಶ್ರೀಗಳ ಹೆಸರು

  •  ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು- ಆದಿಚುಂಚನಗಿರಿ ಮಹಾಸಂಸ್ಥಾನಮಠ, ಆದಿಚುಂಚನಗಿರಿ.
  •  ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳು- ಸುತ್ತೂರುಮಠ,ಮೈಸೂರು.
  • ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು- ಶ್ರೀಸಿದ್ಧಗಂಗಾಮಠ, ತುಮಕೂರು.
  •  ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು- ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠ, ಬೆಂಗಳೂರು. 05. ಶ್ರೀ ನಂಜಾವಧೂತ ಮಹಾಸ್ವಾಮಿಗಳು- ಗುರು ಬೃಹ್ಮೇಶ್ವರಮಠ, ಪಟ್ಟನಾಯಕನಹಳ್ಳಿ, ಶಿರಾ.
  • .ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳು, ಕಾಡಸಿದ್ಧೇಶ್ವರಮಠ, ನೊಣವಿನಕೆರೆ.
  •  ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ತರಳಬಾಳು ಬೃಹನ್ಮಠ, ಸಿರಿಗೆರೆ.
  •  ಶ್ರೀ ವಚನಾನಂದ ಮಹಾಸ್ವಾಮಿಗಳು- ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರ.
  •  ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ-ಮಹಾಸ್ವಾಮಿಗಳು,ರಂಭಾಪುರ ಪೀಠ, ಬಾಳೆಹೊನ್ನೂರು.
  • ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಮಹಾಸ್ವಾಮಿಗಳು, ಉಜ್ಜಯಿನಿಪೀಠ,ಉಜ್ಜಯಿನಿ. ವಿಜಯನಗರ ಜಿಲ್ಲೆ.
  • ಶ್ರೀ ಭೀಮಾಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಕೇದಾರಪೀಠ, ಕೇದಾರನಾಥ.
  •  ಶ್ರೀ ಚೆನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು,ಶ್ರೀಶೈಲಪೀಠ,ಶ್ರೀಶೈಲ.
  •  ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕನಕ ಗುರುಪೀಠ,ಕಾಗಿನೆಲೆ
  •  ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ,ಚಿತ್ರದುರ್ಗ.
  • ಶ್ರೀ ಶಾಂತವೀರ ಸ್ವಾಮೀಜಿ ಕುಂಚಟಿಗ ಗುರುಪೀಠ,ಹೊಸದುರ್ಗ.
  • ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,ಮಾದಾರ ಚನ್ನಯ್ಯ ಗುರುಪೀಠ, ಚಿತ್ರದುರ್ಗ.
  •  ಶ್ರೀ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮಿಗಳು, ಪೇಜಾವರಮಠ, ಉಡುಪಿ.
  •  ಶ್ರೀ ರವಿಶಂಕರ ಗುರೂಜೀ, ಆರ್ಟ್ ಆಪ್ ಲಿವಿಂಗ್ ಆಶ್ರಮ, ಬೆಂಗಳೂರು.
  •  ಶ್ರೀ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ದಿಗಂಬರ ಜೈನಮಠ, ಶ್ರವಣಬೆಳಗೊಳ.
  • ಶ್ರೀ ವೀರಭದ್ರ ಚನ್ನಮಲ್ಲ ಮಹಾಸ್ವಾಮಿಗಳು, ನಿಡುಮಾಮಡಿಮಠ, ಬೆಂಗಳೂರು.
  •  ಆನಂದ ಬಿಕ್ಕು, ಮಹಾಬೋಧಿ ಸೊಸಾಯಿಟಿ, ಬೆಂಗಳೂರು.
  •  ಆರ್ಚಬಿಷಪ್ ಡಾ.ಪೀಟರ್ ಮಚಾಡೋ,ಕ್ಯಾಥೋಲಿಕ್ ಚರ್ಚ,ಬೆಂಗಳೂರು.
  • ಹಜರತ್ ಹಫೀಜ್ ಡಾ.ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್,ದರ್ಗಾ ಹಜರತ್ ಖ್ವಾಜಾ ಬಂದೆನವಾಜ್,ಕಲಬುರ್ಗಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ