Dk Shivakumar
ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ (DK Shivakumar) ಅವರು ನಾಳೆ (ಮೇ ಜೂನ್ 03) ಸಂಜೆ 4.05ಕ್ಕೆ ಲೋಕಭವನದ (Lokbhavana) ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಮೊದಲ ಬಾರಿಗೆ ಎಲ್ಲಾ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಈಗಾಗಲೇ ಎಲ್ಲಾ ಧರ್ಮ, ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚನೆ ನೀಡಲಾಗಿದೆ. ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಮುಂದಾಗಿದ್ದಾರೆ.
ಮುಖ್ಯಾಂಶಗಳು
- ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ.ಶಿವಕುಮಾರ್
- ಸರ್ವ ಧರ್ಮ, ಸಮುದಾಯದ ಶ್ರೀಗಳ ಸಮ್ಮುಖದಲ್ಲಿ ಡಿಕೆ ಪದಗ್ರಹಣ
- ಲೋಕಭವನದಲ್ಲಿ ನಡೆಯೋ ಪ್ರಮಾಣವಚನಕ್ಕೆ 55 ಮಠಾಧಿಪತಿಗಳು,
ಫಾದರ್ ಹಾಗೂ ಮೌಲ್ವಿಗಳಿಗೆ ಸರ್ಕಾರದಿಂದ ಆಹ್ವಾನ
- ಪೂರ್ವಾಭಿಮುಖವಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಿಎಂ ಮತ್ತು ಸಚಿವರು
ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪ್ರಮಾಣವಚನ
ಸರ್ವ ಧರ್ಮ, ಸರ್ವ ಸಮುದಾಯದ ಸ್ವಾಮೀಜಿಗಳ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, 55 ಸ್ವಾಮೀಜಿಗಳು, ಫಾದರ್ , ಮಠಾಧಿಪತಿಗಳು ಹಾಗೂ ಮೌಲ್ವಿಗಳಿಗೆ ಸರ್ಕಾರದಿಂದಲೇ ಅಧಿಕೃತ ಆಹ್ವಾನ ಕಳಿಸಲು ಡಿಕೆ ಶಿವಕುಮಾರ್ ಸೂಚನೆ ನೀಡಿದೆ.ಇದರ ಬೆನ್ನಲ್ಲೇ ಯಾರಿಗೆಲ್ಲಾ ಆಹ್ವಾನ ನೀಡಬೇಕೆಂದು ಶಿಷ್ಟಾಚಾರ ವಿಭಾಗವು ಡಿ.ಕೆ ಶಿವಕುಮಾರ್ ಕಚೇರಿಯಿಂದ ಪಟ್ಟಿ ಪಡೆದುಕೊಂಡಿದೆ.
ಪೂರ್ವಾಭಿಮುಖವಾಗಿ ಪ್ರಮಾಣ ವಚನ
ಇನ್ನು ಡಿಕೆ ಶಿವಕುಮಾರ್ ಜ್ಯೋತಿಷ್ಯಯನ್ನು ಬಹಳ ನಂಬುವರು. ಹೀಗಾಗಿ ಸ್ವಾಮೀಜಿಗಳು ಹೇಳಿದ ದಿನಾಂಕ, ಸಮಯವನ್ನು ಚಾಚು ತಪ್ಪಿದೆ ಪಾಲನೆ ಮಾಡಲಿದ್ದಾರೆ. ಅದರಂತೆ ಡಿಕೆ ಶಿವಕುಮಾರ್ ಅವರು ಪೂರ್ವಾಭಿಮುಖವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಗಾಜಿನ ಮನೆಯಲ್ಲಿ 1100 ರಷ್ಟು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿಗಳು, ಧರ್ಮಗುರುಗಳು, ನ್ಯಾಯಾಧೀಶರು, ವಿಶೇಷ ಆಹ್ವಾನಿತರು, ಬೇರೆ ರಾಜ್ಯಗಳ ಸಿಎಂಗಳಿಗೆ ಸೇರಿದಂತೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಆಹ್ವಾನದ ಪಟ್ಟಿಯಲ್ಲಿರುವ ಪ್ರಮುಖ ಶ್ರೀಗಳ ಹೆಸರು
- ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು- ಆದಿಚುಂಚನಗಿರಿ ಮಹಾಸಂಸ್ಥಾನಮಠ, ಆದಿಚುಂಚನಗಿರಿ.
- ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳು- ಸುತ್ತೂರುಮಠ,ಮೈಸೂರು.
- ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು- ಶ್ರೀಸಿದ್ಧಗಂಗಾಮಠ, ತುಮಕೂರು.
- ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು- ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠ, ಬೆಂಗಳೂರು.
05. ಶ್ರೀ ನಂಜಾವಧೂತ ಮಹಾಸ್ವಾಮಿಗಳು- ಗುರು ಬೃಹ್ಮೇಶ್ವರಮಠ, ಪಟ್ಟನಾಯಕನಹಳ್ಳಿ, ಶಿರಾ.
- .ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳು, ಕಾಡಸಿದ್ಧೇಶ್ವರಮಠ, ನೊಣವಿನಕೆರೆ.
- ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ತರಳಬಾಳು ಬೃಹನ್ಮಠ, ಸಿರಿಗೆರೆ.
- ಶ್ರೀ ವಚನಾನಂದ ಮಹಾಸ್ವಾಮಿಗಳು- ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರ.
- ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ-ಮಹಾಸ್ವಾಮಿಗಳು,ರಂಭಾಪುರ ಪೀಠ, ಬಾಳೆಹೊನ್ನೂರು.
- ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಮಹಾಸ್ವಾಮಿಗಳು, ಉಜ್ಜಯಿನಿಪೀಠ,ಉಜ್ಜಯಿನಿ. ವಿಜಯನಗರ ಜಿಲ್ಲೆ.
- ಶ್ರೀ ಭೀಮಾಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಕೇದಾರಪೀಠ, ಕೇದಾರನಾಥ.
- ಶ್ರೀ ಚೆನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು,ಶ್ರೀಶೈಲಪೀಠ,ಶ್ರೀಶೈಲ.
- ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕನಕ ಗುರುಪೀಠ,ಕಾಗಿನೆಲೆ
- ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ,ಚಿತ್ರದುರ್ಗ.
- ಶ್ರೀ ಶಾಂತವೀರ ಸ್ವಾಮೀಜಿ ಕುಂಚಟಿಗ ಗುರುಪೀಠ,ಹೊಸದುರ್ಗ.
- ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,ಮಾದಾರ ಚನ್ನಯ್ಯ ಗುರುಪೀಠ, ಚಿತ್ರದುರ್ಗ.
- ಶ್ರೀ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮಿಗಳು, ಪೇಜಾವರಮಠ, ಉಡುಪಿ.
- ಶ್ರೀ ರವಿಶಂಕರ ಗುರೂಜೀ, ಆರ್ಟ್ ಆಪ್ ಲಿವಿಂಗ್ ಆಶ್ರಮ, ಬೆಂಗಳೂರು.
- ಶ್ರೀ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ದಿಗಂಬರ ಜೈನಮಠ, ಶ್ರವಣಬೆಳಗೊಳ.
- ಶ್ರೀ ವೀರಭದ್ರ ಚನ್ನಮಲ್ಲ ಮಹಾಸ್ವಾಮಿಗಳು, ನಿಡುಮಾಮಡಿಮಠ, ಬೆಂಗಳೂರು.
- ಆನಂದ ಬಿಕ್ಕು, ಮಹಾಬೋಧಿ ಸೊಸಾಯಿಟಿ, ಬೆಂಗಳೂರು.
- ಆರ್ಚಬಿಷಪ್ ಡಾ.ಪೀಟರ್ ಮಚಾಡೋ,ಕ್ಯಾಥೋಲಿಕ್ ಚರ್ಚ,ಬೆಂಗಳೂರು.
- ಹಜರತ್ ಹಫೀಜ್ ಡಾ.ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್,ದರ್ಗಾ ಹಜರತ್ ಖ್ವಾಜಾ ಬಂದೆನವಾಜ್,ಕಲಬುರ್ಗಿ.