AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಯ್ತು!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಪದಗ್ರಹಣ ಕಾರ್ಯಕ್ರಮವನ್ನ ಜುಲೈ 2ರಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮ ಕೆಪಿಸಿಸಿಯ ನೂತನ ಕಟ್ಟಡದಲ್ಲಿ ನೆರವೇರಲಿದೆ. ಇದಲ್ಲದೆ ಮುಖ್ಯ ಸಮಾರಂಭದಲ್ಲಿ ತಾಂತ್ರಿಕ ಸಮಸ್ಯೆ ಎದುರಾದ್ರೆ ನಗರದ ಗ್ಲೋಬಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಪರ್ಯಾಯ ವ್ಯವಸ್ಥೆ ಕೂಡ ಮಾಡಲಾಗಿದೆ. ಜೊತೆಗೆ ಪದಗ್ರಹಣ ಕಾರ್ಯಕ್ರಮವನ್ನು ಏಕಕಾಲದಲ್ಲಿ ವೀಕ್ಷಿಸಲು 2,800 ಸ್ಥಳಗಳಿಂದ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಇದರಿಂದ ರಾಜ್ಯದ 15 […]

ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಯ್ತು!
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jun 15, 2020 | 4:15 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಪದಗ್ರಹಣ ಕಾರ್ಯಕ್ರಮವನ್ನ ಜುಲೈ 2ರಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮ ಕೆಪಿಸಿಸಿಯ ನೂತನ ಕಟ್ಟಡದಲ್ಲಿ ನೆರವೇರಲಿದೆ.

ಇದಲ್ಲದೆ ಮುಖ್ಯ ಸಮಾರಂಭದಲ್ಲಿ ತಾಂತ್ರಿಕ ಸಮಸ್ಯೆ ಎದುರಾದ್ರೆ ನಗರದ ಗ್ಲೋಬಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಪರ್ಯಾಯ ವ್ಯವಸ್ಥೆ ಕೂಡ ಮಾಡಲಾಗಿದೆ. ಜೊತೆಗೆ ಪದಗ್ರಹಣ ಕಾರ್ಯಕ್ರಮವನ್ನು ಏಕಕಾಲದಲ್ಲಿ ವೀಕ್ಷಿಸಲು 2,800 ಸ್ಥಳಗಳಿಂದ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಇದರಿಂದ ರಾಜ್ಯದ 15 ಲಕ್ಷ ಕಾರ್ಯಕರ್ತರು ಏಕಕಾಲದಲ್ಲಿ ಪದಗ್ರಹಣ ಸಮಾರಂಭವನ್ನು ವೀಕ್ಷಿಸಬಹುದು.

Published On - 11:30 am, Mon, 15 June 20