ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಖರ್ಗೆ ಸುಳಿವು ಬೆನ್ನಲ್ಲೇ ಡಿಕೆಶಿ ಮಾರ್ಮಿಕ ಟ್ವೀಟ್!
ಕರ್ನಾಟಕ ಕಾಂಗ್ರೆಸ್ ಮನೆಯಲ್ಲಿ ಬೀಸುತ್ತಿರೋ ಬದಲಾವಣೆ ಬಿರುಗಾಳಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಸಿಎಂ ಕುರ್ಚಿ ಬದಲಾವಣೆ ಚರ್ಚೆ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಕಾಲ ಸನ್ನಿಹಿತವಾದಂತಿದೆ. ಶೀಘ್ರದಲ್ಲೇ ಎಲ್ಲಾ ರಾಜ್ಯಗಳ ಅಧ್ಯಕ್ಷರ ಬದಲಾವಣೆ ಮಾಡುತ್ತೇವೆ ಎಂದು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಡಿರುವ ಒಂದು ಮಾರ್ಮಿಕ ಟ್ವೀಟ್ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ಫೆಬ್ರವರಿ 12): ಕೆಪಿಸಿಸಿ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಎಸ್ಸಿ, ಎಸ್ಟಿ ನಾಯಕರು, ಹುದ್ದೆಗಾಗಿ ಕಾರ್ಯತಂತ್ರ ಬದಲಿಸಿದ್ದಾರೆ. ಗುಂಪು ಕಟ್ಟಿಕೊಂಡು ದೆಹಲಿಗೆ ಹೋಗೋ ಬದಲು ಪ್ರತ್ಯೇಕ ಭೇಟಿಯ ಕಾರ್ಯತಂತ್ರ ರೂಪಿಸಿದ್ದಾರೆ. ಮೊದಲು ಸತೀಶ್ ಜಾರಕಿಹೊಳಿ ಎರಡು ದಿನ ದೆಹಲಿಯಲ್ಲಿ ಠಿಕಾಣಿ ಹೂಡಿ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಬಂದಿದ್ದಾರೆ. ಬಳಿಕ ಮತ್ತೋರ್ವ ಸಚಿವ ರಾಜಣ್ಣ ಎಂಟ್ರಿ ಕೊಟ್ಟಿದ್ದಾರೆ. ಮುಂದಿನ ವಾರ ಡಾ.ಪರಮೇಶ್ವರ್ ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು(ಫೆ.12) ಶೀಘ್ರದಲ್ಲೇ ಕೆಪಿಸಿಸಿ (KPCC) ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ. ಟಿ.ನರಸೀಪುರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿ ಗಂಗಾ ಆರತಿ ನೆರವೇರಿಸಿ, ಭಗವಂತನಲ್ಲಿ ಪ್ರಾರ್ಥಿಸಿದೆ. ಪುಣ್ಯಸ್ನಾನ ಮಾಡಿ ಭಕ್ತಿ-ಭಾವಗಳಲ್ಲಿ ಮಿಂದು ಭಾವಪರವಶನಾದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ
ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ!
ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿ ಗಂಗಾ ಆರತಿ ನೆರವೇರಿಸಿ, ಭಗವಂತನಲ್ಲಿ ಪ್ರಾರ್ಥಿಸಿದೆ. ಪುಣ್ಯಸ್ನಾನ ಮಾಡಿ ಭಕ್ತಿ-ಭಾವಗಳಲ್ಲಿ ಮಿಂದು ಭಾವಪರವಶನಾದೆ. pic.twitter.com/cWrSu5MZNc
— DK Shivakumar (@DKShivakumar) February 12, 2025
ಸದ್ಯಕ್ಕೆ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಗೊಂದಲಗಳು ಉದ್ಭವಿಸಿವೆ. ಇದರ ಮಧ್ಯ ಖರ್ಗೆ ಅವರು ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಇದರ ನಡುವೆ ಸಂಜೆ ಹೊತ್ತಿಗೆ ಡಿಕೆ ಶಿವಕುಮಾರ್ ಅವರು ಮಾರ್ಮಿಕ ಟ್ವೀಟ್ ಮಾಡಿ ಗಮನಸೆಳೆದಿದ್ದಾರೆ. ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಹೇಳಿರುವುದು ಕಾಂಗ್ರೆಸ್‌ನಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ , ದೇಶಾದ್ಯಂತ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಹಂತಹಂತವಾಗಿ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೂರು ರಾಜ್ಯಗಳಲ್ಲಿ ಪಿಸಿಸಿ ಅಧ್ಯಕ್ಷರ ನೇಮಕ ಮಾಡಲಾಗಿದೆ. ಆದಷ್ಟು ಬೇಗ ಹಂತ ಹಂತವಾಗಿ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ನೇಮಕ ನಡೆಯಲಿದೆ. ಇದಕ್ಕೆ ಕರ್ನಾಟಕ ಹೊರತಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬದಲಾವಣೆ ಖಚಿತ ಎನ್ನಲಾಗುತ್ತಿದೆ.
ಸಚಿವರು ದೆಹಲಿಗೆ ರೌಂಡ್ಸ್ ಹಾಕುತ್ತಿರೋ ಹೊತ್ತಲ್ಲೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಇದರ ನಡುವೆ ಡಿಕೆಶಿ ಮಾರ್ಮಿಕವಾಗಿ ಟ್ವೀಟ್ ಮಾಡಿದ್ಉದ, ನಿಜಕ್ಕೂ ಕಾಂಗ್ರೆಸ್‌ನಲ್ಲಿ ಬದಲಾವಣೆಯಾಗುತ್ತಾ? ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.