ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಡಿಕೆಶಿ ಹೇಳಿದ್ದೇನು?
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಮೇಲೆ ಬಹಳಷ್ಟು ಆರೋಪಗಳು ಕೇಳಿ ಬಂದಿವೆ. ಇಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವುದಿಲ್ಲ ಎಂದು ಸೋಂಕಿತರು ಅಳಲು ತೋಡಿಕೊಂಡಿರುವುದನ್ನೂ ನೋಡಿದ್ದೇವೆ. ಹೀಗಿರುವ ವಿಕ್ಟೋರಿಯಾ ಆಸ್ಪತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆ ಚೆನ್ನಾಗಿದೆ. ಸೋಂಕಿತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದೇನೆ. ಎಲ್ಲಾ ಸೋಂಕಿತರಿಗೂ ಉತ್ತಮವಾದ ಚಿಕಿತ್ಸೆ ಸಿಗುತ್ತಿದೆ. ಸೋಂಕಿತರು ಯಾರೂ ಭಯಪಡುವ ಅವಶ್ಯಕತೆ ಇಲ್ಲ. 96 ವರ್ಷದವರು, 4 ದಿನದ ಮಗು ಕೂಡ […]

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಮೇಲೆ ಬಹಳಷ್ಟು ಆರೋಪಗಳು ಕೇಳಿ ಬಂದಿವೆ. ಇಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವುದಿಲ್ಲ ಎಂದು ಸೋಂಕಿತರು ಅಳಲು ತೋಡಿಕೊಂಡಿರುವುದನ್ನೂ ನೋಡಿದ್ದೇವೆ. ಹೀಗಿರುವ ವಿಕ್ಟೋರಿಯಾ ಆಸ್ಪತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆ ಚೆನ್ನಾಗಿದೆ. ಸೋಂಕಿತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದೇನೆ. ಎಲ್ಲಾ ಸೋಂಕಿತರಿಗೂ ಉತ್ತಮವಾದ ಚಿಕಿತ್ಸೆ ಸಿಗುತ್ತಿದೆ. ಸೋಂಕಿತರು ಯಾರೂ ಭಯಪಡುವ ಅವಶ್ಯಕತೆ ಇಲ್ಲ. 96 ವರ್ಷದವರು, 4 ದಿನದ ಮಗು ಕೂಡ ವಿಕ್ಟೋರಿಯಾ ವೈದ್ಯರ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಬೇಕು ಎಂದು ಬೆಂಗಳೂರಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನರಿಗೆ ಆಸ್ಪತ್ರೆಗಳ ಮೇಲಿರುವ ಅಭಿಪ್ರಾಯ ಬದಲಾಗುವಂತೆ ಮಾತನಾಡಿದ್ದಾರೆ.
ವೈದ್ಯರಿಗೆ ಕಳಪೆ ಪಿಪಿಇ ಕಿಟ್: ಇನ್ನು ವೈದ್ಯರಿಗೆ ಕಳಪೆ ಪಿಪಿಇ ಕಿಟ್ ಪೂರೈಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಹಾಗೂ ಕೊವಿಡ್ ಕೇರ್ ಸೆಂಟರ್ನಲ್ಲಿ ಖರೀದಿ ಹಗರಣ ಆರೋಪ ಸಹ ಸರ್ಕಾರದ ಮೇಲಿದೆ ಈ ಬಗ್ಗೆ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್ ಉತ್ತರ ನೀಡಲು ನಿರಾಕರಿಸಿದ್ರು. ಕಳಪೆ ಪಿಪಿಇ ಕಿಟ್ ಪೂರೈಕೆ ಬಗ್ಗೆ ಈಗ ಮಾತನಾಡುವುದಿಲ್ಲ. ಇದು ರಾಜಕೀಯ ಮಾಡುವ ಸಂದರ್ಭವಲ್ಲ ಎಂದರು. ಹಾಗೂ ಕೊವಿಡ್ ಕೇರ್ ಸೆಂಟರ್ ಆರೋಪದ ಬಗ್ಗೆ ವಿಧಾನಸೌಧದಲ್ಲೇ ಮಾತನಾಡುತ್ತೇನೆ ಎಂದ್ರು.
Published On - 12:01 pm, Wed, 15 July 20