Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಬೆಳೆಸಿದ ಧೀಮಂತ ನಾಯಕ ಬಂಗಾರಪ್ಪ: ಡಿ.ಕೆ. ಶಿವಕುಮಾರ್

ನನ್ನ ರಾಜಕಾರಣದ ವಿದ್ಯಾರ್ಥಿ ಘಟಕದಿಂದ ಬಂಗಾರಪ್ಪ ಬೆಂಬಲವಾಗಿದ್ದರು. ನನ್ನನ್ನು ಬೆಳೆಸಿದ ಧೀಮಂತ ನಾಯಕರವರು ಎಂದು

ನನ್ನನ್ನು ಬೆಳೆಸಿದ ಧೀಮಂತ ನಾಯಕ ಬಂಗಾರಪ್ಪ: ಡಿ.ಕೆ. ಶಿವಕುಮಾರ್
ಡಿ.ಕೆ.ಶಿವಕುಮಾರ್ ಭೇಟಿಯಾದ ಮಧು ಬಂಗಾರಪ್ಪ
Follow us
shruti hegde
| Updated By: Skanda

Updated on:Mar 15, 2021 | 10:47 AM

ಬೆಂಗಳೂರು: ವಿದ್ಯಾರ್ಥಿ ರಾಜಕಾರಣದ ದಿನಗಳಿಂದ ಬಂಗಾರಪ್ಪ ನನ್ನ ಬೆಂಬಲಕ್ಕೆ ನಿಂತವರು. ನನ್ನನ್ನು ಬೆಳೆಸಿದ ಧೀಮಂತ ನಾಯಕರವರು. ಕಾಂಗ್ರೆಸ್ ಕಟ್ಟುವಲ್ಲಿ ಬಂಗಾರಪ್ಪ ಪ್ರಮುಖರು. ಅನೇಕ ಕಾರಣಗಳಿಂದ ಪಕ್ಷ ತೊರೆದು ಹೋಗಿದ್ದರು. ಅವರ ಮಗ ಮಧು ಬಂಗಾರಪ್ಪರನ್ನ ಪಕ್ಷಕ್ಕೆ ಸೆಳೆಯುತ್ತಿದ್ದೇವೆ. ಮಧು ಬಂಗಾರಪ್ಪರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಂಗಾರಪ್ಪ ಅವರಿಗೆ ಇಂದಿಗೂ ಅನೇಕ ಅಭಿಮಾನಿಗಳು ಇದ್ದಾರೆ. ಕಾಗೋಡು, ಜನಾರ್ದನ ಪೂಜಾರಿ, ಬಂಗಾರಪ್ಪ ಅಂತಹವರ ಕೊಡುಗೆ ಮರೆಯುವ ಹಾಗಿಲ್ಲ. ಇವತ್ತು ನಮ್ಮ ಪಕ್ಷ ಸೇರೋಕೆ ಬಂದಿದ್ದಾರೆ. ಅವರಿಗೆ ಕಾಂಗ್ರೆಸ್​ ಪಕ್ಷಕ್ಕೆ ಸೇರಲು ಸ್ವಾಗತ ‌ಮಾಡುತ್ತೇವೆ. ಯಾವ ರೀತಿ ಕಾರ್ಯಕ್ರಮ ‌ಮಾಡಿ ಕಾಂಗ್ರೆಸ್ ಸೇರಿಸಿಕೋಳ್ಳಬೇಕು ಅಂತ ತೀರ್ಮಾನ ‌ಮಾಡುತ್ತೇವೆ ಎಂದು ಮಾತನಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಭೇಟಿ ಬಳಿಕ ಮಧು ಬಂಗಾರಪ್ಪ ಮಾತನಾಡಿ, ನಾನು ವಿರೋಧ ಪಕ್ಷದಲ್ಲಿ ಇದ್ದಾಗ ಕೂಡ ಭೇದಭಾವ ಮಾಡಿಲ್ಲ. ಡಿ.ಕೆ.ಶಿವಕುಮಾರ್ ಬಂಗಾರಪ್ಪ ಅವರ ಅನುಯಾಯಿ. ನನಗೆ ಅಣ್ಣನ ರೀತಿಯಲ್ಲಿ ನೆರವಾಗಿ ಎಲ್ಲ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಇಂದಿನಿಂದ ನಾನು ಕಾಂಗ್ರೆಸಿಗ. ಆಮೇಲೆ ಅಧಿಕೃತವಾಗಿ ಸೇರುತ್ತೇನೆ. ಹೆಚ್​.ಡಿ.ಕುಮಾರಸ್ವಾಮಿ ಏನೇ ಹೇಳಿದರೂ ಅವರ ಬಗ್ಗೆ ಗೌರವವಿದೆ. ಗೀತಾ ಶಿವರಾಜ್‌ಕುಮಾರ್ ಸಹ ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಮಧು ಬಂಗಾರಪ್ಪ ಇದೇ ವೇಳೆ ತಿಳಿಸಿದ್ದಾರೆ.

ಕಾಂಗ್ರೆಸ್ ಅವಶ್ಯಕತೆ ದೇಶಕ್ಕೆ, ಹಾಗೂ ರಾಜ್ಯಕ್ಕೆ ಇದೆ. ಹಿಂದೆ ‌ನಡೆದ ಘಟನೆ ಬಗ್ಗೆ ನಾನು ಈಗ ಮಾತನಾಡಲ್ಲ. ಜೆಡಿಎಸ್ ಬಿಟ್ಟ ಬಗ್ಗೆ ಕೂಡ ಮಾತನಾಡಲ್ಲ. ಹೆಚ್​.ಡಿ.ಕುಮಾರಸ್ವಾಮಿ ‌ಏನೇ ಅಂದರೂ ಅವರ ಬಗ್ಗೆ ಗೌರವಿದೆ. ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಬೇಡಿಕೆಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿ ಯಡಿಯೂರಪ್ಪ ಆದೇಶ

ಇದನ್ನೂ ಓದಿ: ‘ಡಿಕೆಶಿ, ಹೆಬ್ಬಾಳ್ಕರ್, ರಮೇಶ್​ ಮಧ್ಯೆ ಜಿದ್ದಾಜಿದ್ದಿ ಇತ್ತು; ಇವರೇ ವಿಡಿಯೋ ಚಿತ್ರೀಕರಿಸಿರಬಹುದೆಂಬ ಅನುಮಾನ ಇದೆ’

Published On - 4:49 pm, Fri, 12 March 21

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ