ಜಾತಿ ಗಣತಿ: ಕೇಂದ್ರ ಸರ್ಕಾರದ ನಿರ್ಧಾರವನ್ನು ತಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: May 01, 2025 | 1:01 PM

ಕರ್ನಾಟಕ ಸರ್ಕಾರವೂ ಸೇರಿದಂತೆ ಕಾಂಗ್ರೆಸ್ ಆಡಳಿತದಲ್ಲಿರುವ ಇತರ ರಾಜ್ಯಗಳು ಸಹ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತವೆ ಮತ್ತು ರಾಜ್ಯಗಳಿಂದ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸುತ್ತವೆ ಎಂದು ಶಿವಕುಮಾರ್ ಹೇಳಿದರು. ಮಂಗಳೂರು ನಗರದಲ್ಲಿ ವ್ಯಕ್ತಿಯೊಬ್ಬನ್ನು ಒಂದು ಗುಂಪು ಕೊಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡದೆ ಅಲ್ಲಿಂದ ಮೌನವಾಗಿ ಸರಿದರು.

ಬೆಂಗಳೂರು, ಮೇ 1: ಮುಂದಿನ ಜನಗಣತಿಯ ಜೊತೆ ಜಾತಿ ಗಣತಿಯನ್ನು (Caste Census) ಸಹ ಮಾಡಲಾಗುವುದು ಅಂತ ಕೇಂದ್ರ ಸರ್ಕಾರ ಹೇಳಿರುವುದನ್ನು ತಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಜಾತಿ ಗಣತಿ ಮಾಡಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ, ಇದನ್ನು ಮಾಡಿಸುವುದರಿಂದ ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು ಸಾಧ್ಯವಾಗುತ್ತದೆ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹಲ್ ಗಾಂಧಿ ಜಾತಿಗಣತಿಗಾಗಿ ಅಗ್ರಹಿಸುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ:  ಭಯೋತ್ಪಾದಕರನ್ನು ಸದೆಬಡಿಯುವ ಕೇಂದ್ರದ ಸಂಕಲ್ಪದೊಂದಿಗೆ ನಾವಿದ್ದೇವೆ: ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.