ಪದವಿ ಪಡೆದ ಅಂಧ ವಿದ್ಯಾರ್ಥಿನಿಗೆ ಆಸರೆಯಾದ ಡಿಸಿಎಂ ಡಿಕೆ ಶಿವಕುಮಾರ್​

ಯಲಹಂಕದ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ದಿವ್ಯಾಂಜಲಿ ಎಂಬ ಅಂಧ ವಿದ್ಯಾರ್ಥಿನಿಗೆ ಸ್ಥಳದಲ್ಲೇ ಕೆಲಸ ಕೊಡಿಸುವ ಮೂಲಕ ಆಕೆಯ ಬಾಳಿಗೆ ಬೆಳಕಾಗಿದ್ದಾರೆ. ಏನಿದು ಅಂತೀರಾ? ಈ ಸ್ಟೋರಿ ಓದಿ.

ಪದವಿ ಪಡೆದ ಅಂಧ ವಿದ್ಯಾರ್ಥಿನಿಗೆ ಆಸರೆಯಾದ ಡಿಸಿಎಂ ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​​
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 05, 2024 | 3:27 PM

ಬೆಂಗಳೂರು, ಜ.05: ಬಿಎ ಪದವಿ ಪಡೆದ ಅಂಧ ವಿದ್ಯಾರ್ಥಿನಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar)​ ಆಸರೆ ಆಗಿದ್ದಾರೆ. ಸುಂಕದಕಟ್ಟೆ(Sunkadkatte) ಶಾಂತಿಧಾಮ ಸಂಸ್ಥೆಯ ಅಂಧ ವಿದ್ಯಾರ್ಥಿನಿ(Blind Student) ಯಾಗಿರುವ ದಿವ್ಯಾಂಜಲಿ ಎಂಬುವವರಿಗೆ ಸ್ವಾವಲಂಭಿ ಜೀವನ ನಡೆಸುವ ಉದ್ದೇಶದಿಂದ ಕೆಲಸವೊಂದನ್ನು ಕೊಡಿಸುವ ಮೂಲಕ ಅಂಧ ವಿದ್ಯಾರ್ಥಿನಿ ಬಾಳಿಗೆ ಬೆಳಕಾಗಿದ್ದಾರೆ.

ಅಂಧ ವಿದ್ಯಾರ್ಥಿನಿ ದಿವ್ಯಾಂಜಲಿಗೆ ಸ್ಥಳದಲ್ಲೇ ಬಿಬಿಎಂಪಿ ಕೆಲಸ ಕೊಡಿಸಿದ ಡಿಕೆಶಿ

ಯಲಹಂಕದ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ದಿವ್ಯಾಂಜಲಿ ಅವರು, ‘ನನಗೆ ಕಣ್ಣು ಕಾಣಲ್ಲ, ಹಾಗಾಗಿ ಎಲ್ಲೂ ಕೆಲಸ ಸಿಗುತ್ತಿಲ್ಲ. ಹೀಗಾಗಿ ಕೆಲಸ ಕೊಡಿಸುವಂತೆ ಡಿಕೆ ಶಿವಕುಮಾರ್​ ಅವರಿಗೆ ಮನವಿ ಮಾಡಿಕೊಂಡಿದ್ದರು. ಕೂಡಲೇ ಮನವಿಗೆ ಸ್ಪಂಧಿಸಿದ ಡಿಸಿಎಂ, ಸ್ಥಳದಲ್ಲಿಯೇ ದಿವ್ಯಾಂಜಲಿಗೆ BBMP ಕೆಲಸ ಕೊಡಿಸಿದ್ದಾರೆ. ಹೌದು, ದಿವ್ಯಾಂಜಲಿ ಅವರ ಪದವಿ ಸರ್ಟಿಫಿಕೇಟ್ ಪರಿಶೀಲಿಸಿ, ಬಿಬಿಎಂಪಿ ಅಧಿಕಾರಿಗಳಿಗೆ ಕೆಲಸಕೊಡುವಂತೆ ತಾಕೀತು ಮಾಡಿದ್ದಲ್ಲದೆ, ಕಾಲ್ ಸೆಂಟರ್ ಅಥವಾ ಕೂತು ಮಾಡುವ ಕೆಲಸವನ್ನೇ ಕೊಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಜನಸ್ಪಂದನ: ಜನರು ಕೊಟ್ಟ ಅರ್ಜಿಗಳನ್ನು ಅಧಿಕಾರಿಗಳಿಗೆ ನೀಡಿದ್ದೇನೆ: ಡಿಕೆ ಶಿವಕುಮಾರ್

ಇದೇ ಜನವರಿ.03 ರಿಂದ ಬೆಂಗಳೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಿಬಿಎಂಪಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ‘ಸುಮಾರು 10 ದಿನ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ನಾನು, ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದೇವೆ ಎಂದಿದ್ದರು. ಅದರಂತೆ ಜನರ ಸಮಸ್ಯೆಗಳಿಗೆ ಸ್ಪಂಧಿಸಿದ ಅವರು ಸ್ಥಳದಲ್ಲೇ ಆದಷ್ಟು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Fri, 5 January 24

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ