ಡಿಕೆ ಸುರೇಶ್ ಗೂಂಡಾ ರೀತಿ ವರ್ತಿಸುತ್ತಿದ್ದಾರೆ -ಅಶ್ವತ್ಥ್ ನಾರಾಯಣ್
ರಾಮನಗರ: ಡಿ.ಕೆ ಸುರೇಶ್ ಅವರು ತಮ್ಮ ಮಾನಸಿಕ ಸ್ಥಿತಿ ಕಳೆದುಕೊಂಡು ಮಾತನಾಡಿದ್ದಾರೆ. ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಾಗಿ ಕೆಲಸ ಮಾಡಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಹಿಡಿತಕ್ಕೆ ಬರುತ್ತಿಲ್ಲ ಎಂದು ಕೂಗಾಡಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಬ್ಬಾಳಮ್ಮ ದೇವಾಲಯದಲ್ಲಿ ಎಸ್ಪಿ ಅನೂಪ್ ಶೆಟ್ಟಿ ವಿರುದ್ಧ ಹೀಗೆ ಮಾತನಾಡಿದ್ದರು. ಎಸ್ಪಿ ಅನೂಪ್ ಶೆಟ್ಟಿ ಹಾಗೂ ಅಧಿಕಾರಿಗಳ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ ಆದ ವಿಚಾರ ಸಂಬಂಧಿಸಿ ರಾಮನಗರದಲ್ಲಿ ಬಿಜೆಪಿ ಮುಖಂಡರು ಇಂದು ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ […]
ರಾಮನಗರ: ಡಿ.ಕೆ ಸುರೇಶ್ ಅವರು ತಮ್ಮ ಮಾನಸಿಕ ಸ್ಥಿತಿ ಕಳೆದುಕೊಂಡು ಮಾತನಾಡಿದ್ದಾರೆ. ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಾಗಿ ಕೆಲಸ ಮಾಡಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಹಿಡಿತಕ್ಕೆ ಬರುತ್ತಿಲ್ಲ ಎಂದು ಕೂಗಾಡಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕಬ್ಬಾಳಮ್ಮ ದೇವಾಲಯದಲ್ಲಿ ಎಸ್ಪಿ ಅನೂಪ್ ಶೆಟ್ಟಿ ವಿರುದ್ಧ ಹೀಗೆ ಮಾತನಾಡಿದ್ದರು. ಎಸ್ಪಿ ಅನೂಪ್ ಶೆಟ್ಟಿ ಹಾಗೂ ಅಧಿಕಾರಿಗಳ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ ಆದ ವಿಚಾರ ಸಂಬಂಧಿಸಿ ರಾಮನಗರದಲ್ಲಿ ಬಿಜೆಪಿ ಮುಖಂಡರು ಇಂದು ಪತ್ರಿಕಾಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣ್ ಡಿ.ಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ. ದಂಧೆಗಳಿಗೆ ಸಹಕಾರ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳ ವಿರುದ್ದ ಡಿ.ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳನ್ನ ಹಿಡಿತದಲ್ಲಿ ಇಟ್ಟುಕೊಳ್ಳೋದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಡಿಕೆ ಬ್ರದರ್ಸ್ ವಿರುದ್ಧ ಹರಿಹಾಯ್ದಿದ್ದಾರೆ.
ಡಿ.ಕೆ.ಸುರೇಶ್ ಅಧಿಕಾರಿಗಳ ಕ್ಷಮೆ ಕೋರಬೇಕು: ಡಿಕೆ ಬ್ರದರ್ಸ್ ಹತಾಶೆಗೆ ಒಳಗಾಗಿದ್ದಾರೆ. ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಡಿಕೆ ಬ್ರದರ್ಸ್ ಮಾಡುವ ಅಕ್ರಮ ದಂಧೆಗೆ ಸಹಕಾರ ನೀಡದ ಹಿನ್ನೆಲೆ ಪ್ರಾಮಾಣಿಕ ಅಧಿಕಾರಿಗಳಿಗೆ ಸಭೆಯಲ್ಲಿ ಧಮ್ಕಿ ಹಾಕುತ್ತಿದ್ದಾರೆ. ಗೂಂಡಾ ರೀತಿ ಡಿಕೆ ಸುರೇಶ್ ವರ್ತಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಡಿಕೆ ಬ್ರದರ್ಸ್ ಹೇಳಿದ ಹಾಗೆ ಕೇಳಬೇಕು. ಇಲ್ಲ ಅಂದ್ರೆ ಅವರ ವಿರುದ್ಧ ಹೇಳಿಕೆ ನೀಡುತ್ತಾರೆ. ಈ ಕೂಡಲೆ ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳ ಕ್ಷಮೆ ಕೋರಬೇಕು. ಎಸ್ಪಿ ಅನೂಪ್ ಶೆಟ್ಟಿ ವರ್ಗಾವಣೆ ಮಾಡಿಸಿದ್ರೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.