AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DKHFW Recruitment 2026: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್​ ನ್ಯೂಸ್; DKHFWನಲ್ಲಿ 33 ಹುದ್ದೆಗಳಿಗೆ ನೇಮಕಾತಿ

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DKHFW) ಯಿಂದ ಹಿರಿಯ ಪ್ರಯೋಗಶಾಲಾ ತಾಂತ್ರಿಕ ಮತ್ತು ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ. ಒಟ್ಟು 33 ಗುತ್ತಿಗೆ ಆಧಾರಿತ ಹುದ್ದೆಗಳಿಗೆ (22 ಲ್ಯಾಬ್ ಟೆಕ್, 11 ಫಾರ್ಮಸಿ) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 15ರೊಳಗೆ dkhfw.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

DKHFW Recruitment 2026: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್​ ನ್ಯೂಸ್; DKHFWನಲ್ಲಿ 33 ಹುದ್ದೆಗಳಿಗೆ ನೇಮಕಾತಿ
ದಕ್ಷಿಣ ಕನ್ನಡದಲ್ಲಿ ನೇಮಕಾತಿ Image Credit source: dkhfw.in
ಅಕ್ಷತಾ ವರ್ಕಾಡಿ
|

Updated on:Jul 10, 2026 | 2:19 PM

Share

ಮುಖ್ಯಾಂಶಗಳು

  • ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  • ಹಿರಿಯ ಪ್ರಯೋಗಶಾಲಾ ತಾಂತ್ರಿಕ ಮತ್ತು ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ
  • ಆಸಕ್ತರು ಜುಲೈ 15ರೊಳಗೆ dkhfw.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ (DKHFW) ಉತ್ತಮ ಅವಕಾಶ ಲಭ್ಯವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಮಂಗಳೂರು ವತಿಯಿಂದ ಹಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜುಲೈ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 33 ಹುದ್ದೆಗಳು ಭರ್ತಿಯಾಗಲಿದ್ದು, ಅವುಗಳಲ್ಲಿ ಹಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗೆ 22 ಹುದ್ದೆಗಳು ಮತ್ತು ಫಾರ್ಮಸಿ ಅಧಿಕಾರಿಗೆ 11 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನಡೆಯಲಿದೆ.

ವಿದ್ಯಾರ್ಹತೆ ಏನು?

ಹಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು M.Sc ಅಥವಾ DMLT (Diploma in Medical Laboratory Technology) ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಫಾರ್ಮಸಿ ಅಧಿಕಾರಿ ಹುದ್ದೆಗೆ B.Pharm ಪದವಿ ಪಡೆದಿರಬೇಕು. ಜೊತೆಗೆ ಕರ್ನಾಟಕ ಫಾರ್ಮಸಿ ಕೌನ್ಸಿಲ್‌ನಲ್ಲಿ ನೋಂದಣಿ ಕಡ್ಡಾಯವಾಗಿದೆ. ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಪ್ರಾಥಮಿಕ ಆಯ್ಕೆ ನಡೆಸಲಾಗುತ್ತದೆ. ಬಳಿಕ 1:2 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಂತಿಮ ಆಯ್ಕೆ ಸಂದರ್ಶನದಲ್ಲಿ ಅಭ್ಯರ್ಥಿಗಳ ಸಾಧನೆಯ ಆಧಾರದ ಮೇಲೆ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು dkhfw.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಪ್ರಕಟಣೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಸೂಕ್ತ. ಅರ್ಜಿ ಸಲ್ಲಿಸುವಾಗ ನೀಡುವ ಮಾಹಿತಿಯು ನಿಖರವಾಗಿರಬೇಕು. ಅಪೂರ್ಣ ಅಥವಾ ತಪ್ಪಾದ ಮಾಹಿತಿಯಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಒಳಿತು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:19 pm, Fri, 10 July 26

Follow Us