ಕೆಪಿಸಿಸಿ ಅಧ್ಯಕ್ಷ ಈಗ ಕೊವಿಡ್-19 ಮುಕ್ತ, ಆಸ್ಪತ್ರೆಯಿಂದ ಮನೆಗೆ ವಾಪಸ್ಸು
ಕೊವಿಡ್-19 ಸೋಂಕಿಗೀಡಾಗಿ ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ಸಾದರು. ಅವರಿಗೆ ಒಟ್ಟು 7 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಶಿವಕುಮಾರಗಿಂತ ಮೊದಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಸೋಂಕಿಗೊಳಗಾಗಿದ್ದರು ಎನ್ನುವುದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಜನರೊಂದಿಗೆ ಜಾಸ್ತಿ ಬೆರೆಯುತ್ತಿರುವ ನಾಯಕರೆಲ್ಲ ಒಬ್ಬೊಬ್ಬರಾಗಿ ಕೊವಿಡ್-19 ಸೋಂಕಿಗೀಡಾಗುತ್ತಿದ್ದಾರೆ. […]

ಕೊವಿಡ್-19 ಸೋಂಕಿಗೀಡಾಗಿ ಚಿಕಿತ್ಸೆಗೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ಸಾದರು. ಅವರಿಗೆ ಒಟ್ಟು 7 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.
ಶಿವಕುಮಾರಗಿಂತ ಮೊದಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಸೋಂಕಿಗೊಳಗಾಗಿದ್ದರು ಎನ್ನುವುದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದಾಗಿದೆ.
ಪಕ್ಷದ ಕಾರ್ಯಕರ್ತರು ಹಾಗೂ ಜನರೊಂದಿಗೆ ಜಾಸ್ತಿ ಬೆರೆಯುತ್ತಿರುವ ನಾಯಕರೆಲ್ಲ ಒಬ್ಬೊಬ್ಬರಾಗಿ ಕೊವಿಡ್-19 ಸೋಂಕಿಗೀಡಾಗುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ರಾಜ್ಯ ಬಿಜೆಪಿ ಘಟಕದ ಅದ್ಯಕ್ಷ ನಳಿನ್ ಕುಮಾರ್ ಕಟೀಲ್. ಅವರು ಸೋಂಕು ತಗುಲಿಸಿಕೊಂಡಿರುವ ಬಗ್ಗೆ ರವಿರಾರದಂದು ವರದಿಯಾಗಿದೆ.




