ಇನ್ಮೇಲೆ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ, ಲೈಸೆನ್ಸ್ ಇದ್ರೆ ಮಾತ್ರ ಗಣಿಗಾರಿಕೆ ಮಾಡಬೇಕು: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡುವುದಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಇನ್ಮೇಲೆ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ, ಲೈಸೆನ್ಸ್ ಇದ್ರೆ ಮಾತ್ರ ಗಣಿಗಾರಿಕೆ ಮಾಡಬೇಕು: ಮುಖ್ಯಮಂತ್ರಿ ಯಡಿಯೂರಪ್ಪ
ಕಲ್ಲು ಗಣಿಗಾರಿಕೆ
Follow us
ಪೃಥ್ವಿಶಂಕರ
|

Updated on:Jan 23, 2021 | 11:19 AM

ಬೆಂಗಳೂರು: ಮೊನ್ನೆ ಶಿವಮೊಗ್ಗದಲ್ಲಿ ನಡೆದ ಗಣಿಗಾರಿಕೆ ಸ್ಫೋಟ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಈಗ ಮಹತ್ವದ ಕಾನೂನು ತರುವತ್ತ ಹೆಜ್ಜೆ ಇಟ್ಟಿದೆ.

ಈ ಘಟನೆಯನ್ನ ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಯುವ ಸಲುವಾಗಿ ಮಹತ್ತರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡುವುದಾಗಿ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟಿದ್ದ ಐವರ ಗುರುತು ಪತ್ತೆ.. ಶಿವಮೊಗ್ಗ ತಾಲೂಕಿನ ಹುಣಸೋಡುನಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸದಂತೆ ಸ್ಫೋಟದಲ್ಲಿ ಮೃತಪಟ್ಟಿದ್ದ ಐವರ ಗುರುತು ಪತ್ತೆಯಾಗಿದೆ. ನಿನ್ನೆ ಮೂವರ ಗುರುತು ಪತ್ತೆಯಾಗಿತ್ತು. ಇಂದು ಇಬ್ಬರ ಗುರುತು ಪತ್ತೆಯಾಗಿದೆ. ಮೃತರು ಆಂಧ್ರದ ರಾಯದುರ್ಗದ ಪವನ್, ರಾಜು, ಜಾವೇದ್ ಹಾಗೂ ಅಂತರಗಂಗೆಯ ಪ್ರವೀಣ್, ಮಂಜುನಾಥ್ ಎಂದು ಪತ್ತೆಯಾಗಿದೆ

Shivamogga Blast ಪ್ರಕರಣಕ್ಕೆ ತಮಿಳುನಾಡು ಲಿಂಕ್​, ಮೃತಪಟ್ಟವರೆಲ್ಲರು ಭದ್ರಾವತಿ ಮೂಲದವರು..!

Published On - 10:16 am, Sat, 23 January 21