AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ತಿ ಶುಲ್ಕ ಪಾವತಿಗೆ ಒತ್ತಡ ಹೇರಬೇಡಿ ಎಂದು ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ: ಸಚಿವ ಸುರೇಶ್ ಸ್ವಾಗತ

ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಒಕ್ಕೂಟದ ಸದಸ್ಯ ಶಾಲೆಗಳಿಗೆ ಮನವಿ ಮಾಡಿದ್ದಾರೆ. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ ಎಂದು ಕೇಳಿಕೊಂಡಿದ್ದಾರೆ.

ಪೂರ್ತಿ ಶುಲ್ಕ ಪಾವತಿಗೆ ಒತ್ತಡ ಹೇರಬೇಡಿ ಎಂದು ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ: ಸಚಿವ ಸುರೇಶ್ ಸ್ವಾಗತ
ಡಿ. ಶಶಿಕುಮಾರ್
TV9 Web
| Edited By: |

Updated on:Apr 06, 2022 | 10:58 PM

Share

ಬೆಂಗಳೂರು: ಸಂಪೂರ್ಣ ಶುಲ್ಕ ಪಾವತಿಗೆ ಪೋಷಕರಿಗೆ ಒತ್ತಡ ಹೇರಬೇಡಿ. ಈ ವರ್ಷ ಖರ್ಚುವೆಚ್ಚದ ಆಧಾರದಲ್ಲಿ ಶುಲ್ಕ ನಿಗದಿ ಮಾಡಿ. ಬಲವಂತವಾಗಿ ಶುಲ್ಕ ಪಾವತಿ ಮಾಡಿ ಎನ್ನುವುದು ಸರಿಯಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟದಿಂದ (ಕ್ಯಾಮ್ಸ್) ಸದಸ್ಯ ಶಾಲೆಗಳಿಗೆ ಇಂದು (ಜ.6) ಮನವಿ ಮಾಡಿದ್ದಾರೆ.

ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಒಕ್ಕೂಟದ ಸದಸ್ಯ ಶಾಲೆಗಳಿಗೆ ಮನವಿ ಮಾಡಿದ್ದಾರೆ. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ ಎಂದು ಕೇಳಿಕೊಂಡಿದ್ದಾರೆ. ಕೊರೊನಾ ಲಾಕ್​ಡೌನ್ ಕಾರಣದಿಂದ ಶಾಲಾ ಕಾಲೇಜುಗಳ ಮುಚ್ಚಿದ್ದವು. ಆನ್​ಲೈನ್ ತರಗತಿಗಳನ್ನು ನಡೆಸಿದ್ದವು. ಈ ನಡುವೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕ ಪೋಷಕರಿಗೆ ಸಂಪೂರ್ಣ ಪ್ರಮಾಣದ ಶುಲ್ಕ ಭರಿಸುವಂತೆ ತಿಳಿಸಿದ್ದು, ಹೆತ್ತವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಕಾರಣದಿಂದ ಶಾಲಾ ಆಡಳಿತ ಮಂಡಳಿಗಳಿಗೆ ಡಿ. ಶಶಿಕುಮಾರ್ ಮನವಿ ಮಾಡಿದ್ದಾರೆ.

ಈ ವರ್ಷ ಅನೇಕ ಶೈಕ್ಷಣಿಕ ಚಟುವಟಿಕೆಗಳು ನಡೆಯುವುದಿಲ್ಲ. ಹೀಗಾಗಿ ಪಠ್ಯಕ್ರಮ ಅಥವಾ ಪಠ್ಯೇತರ ಚಟುವಟಿಕೆಗಳಿಗೆ ಶುಲ್ಕ ನಿಗಧಿ ಪಡಿಸಿದ್ದರೆ ಅದನ್ನು ಕೈಬಿಡಬೇಕು. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ. ಪಾಲಕ-ಪೋಷಕರಂದಿಗೆ ಚರ್ಚೆ ನಡೆಸಿ ಶುಲ್ಕ ರಿಯಾಯಿತಿ ನೀಡಬೇಕು ಎಂದು ಶಶಿಕುಮಾರ್ ಮನವಿ ಮಾಡಿದ್ದಾರೆ. ಎಲ್ಲಾ ಶಾಲೆಗಳು ತಮ್ಮ ಶಾಲೆಗಳ ಮಕ್ಕಳ ಪೋಷಕರ ಆರ್ಥಿಕ ಸ್ಥಿತಿಯನ್ನು ಅರಿಯಬೇಕು. ಇದರ ಜೊತೆಗೆ ಸಾಧ್ಯವಿರುವ ಪೋಷಕರು ಖಂಡಿತಾ ಶುಲ್ಕ ನೀಡಿ, ಶಾಲೆಗಳ ಉಳಿವಿಗೆ ಸಹಕರಿಸಿ ಎಂದೂ ಅವರು ತಿಳಿಸಿದ್ದಾರೆ.

ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ಶಾಲಾ ಶುಲ್ಕ ರಿಯಾಯಿತಿಗೆ ಮುಂದಾಗಿರುವ ಕ್ಯಾಮ್ಸ್ ನಡೆಗೆ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಸಂಕಷ್ಟದ ಸಂದರ್ಭದಲ್ಲಿ ಲಕ್ಷ ಲಕ್ಷ ಫೀಸ್ ಪಾವತಿ ಕಷ್ಟ.  ಹೀಗಾಗಿ ಖರ್ಚುವೆಚ್ಚದ ಆಧಾರದಲ್ಲಿ ಶಾಲಾ ಶುಲ್ಕ ನಿಗದಿಪಡಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಂಕಷ್ಟದ ಸಂದರ್ಭದಲ್ಲಿ ಲಕ್ಷ ಲಕ್ಷ ಫೀಸ್ ಪಾವತಿಸುವುದು ಕಷ್ಟ. ಹೀಗಾಗಿ ಖರ್ಚು ವೆಚ್ಚದ ಆಧಾರದಲ್ಲಿ ಶಾಲಾ ಶುಲ್ಕ ನಿಗದಿ ಮಾಡಬೇಕು. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟ ಸೂಚನೆ ನೀಡಿರುವ ಕಾರ್ಯಕ್ಕೆ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಬಲವಂತವಾಗಿ ಶುಲ್ಕ ಪಾವತಿ ಮಾಡಿ ಎನ್ನುವುದು ಸರಿಯಲ್ಲ. ಕ್ಯಾಮ್ಸ್ ತನ್ನ ವ್ಯಾಪ್ತಿಯ ಸಂಸ್ಥೆಗಳಿಗೆ ಈ ಕುರಿತು ಮನವಿ ಮಾಡಿದೆ. ನಾನು ಇದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಅತ್ಯಂತ ಸ್ವಾಗತಾರ್ಹ ಘೋಷಣೆ ಎಂದು ಸಚಿವರು ಹೇಳಿದ್ದಾರೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

Published On - 12:58 pm, Wed, 6 January 21

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್