AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ಈ ವಿಶೇಷ ಮನವಿಗೆ ಕಾರಣವೇನು?

ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಿತವ್ಯಯ ಜೀವನಶೈಲಿಗೆ ಕರೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಕೆಲವೆಡೆ ಜನರು ತಪ್ಪಾಗಿ ಅರ್ಥೈಹಿಸಿಕೊಂಡು ಮುಂದಿನ ದಿನಗಳಲ್ಲಿ ಇಂಧನ ಕೊರತೆ ಎದುರಾಗಬಹುದು ಎಂದು ಅತಿಯಾಗಿ ಪೆಟ್ರೋಲ್ ಹಾಗೂ ಡೀಸೆಲ್ ಶೇಖರಣೆ ಮಾಡಿಟ್ಟುಕೊಳ್ಳುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕ ಸ್ಪಷ್ಟನೆ ನೀಡಿದ್ದು, ಕರ್ನಾಟಕದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ಈ ವಿಶೇಷ ಮನವಿಗೆ ಕಾರಣವೇನು?
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:May 18, 2026 | 5:38 PM

Share

ಬೆಂಗಳೂರು, (ಮೇ 18): ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಯುದ್ಧದ ಭೀತಿಯಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್  (Petrol And Diesel) ಮತ್ತು ಎಲ್‌ಪಿಜಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂಧನ ದರ ಹೆಚ್ಚಳವಾಗಲಿದೆ ಎನ್ನಲಾಗತ್ತಿದೆ.ಇನ್ನೊಂದೆಡೆ ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್​​ನಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಮಿತಿ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ 500 ರೂಪಾಯಿ ಹಾಗೂ ನಾಲ್ಕು ಚಕ್ರದ ವಾಹನಗಳಿಗೆ 1500ರವರೆಗೆ ಇಂಧನ ಮಿತಿ ಹೇರಲಾಗಿದ್ದು, ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದೆ. ಹೀಗಾಗಿ ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕ ಸ್ಪಷ್ಟನೆ ನೀಡಿದ್ದು, ಕರ್ನಾಟಕದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನು ಲಭ್ಯವಿದೆ. ಆತಂಕದಿಂದ ಇಂಧನ ಖರೀದಿಸದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

  • ಕರ್ನಾಟಕದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನು ಲಭ್ಯ
  • ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕ ಸಿದ್ಧಾರ್ಥ್ ಅಗರ್ವಾಲ್ ಸ್ಪಷ್ಟನೆ
  • ನಿರಂತರ ಪೂರೈಕೆಯ ಭರವಸೆ ನೀಡಿದ ಒಎಂಸಿಗಳು
  • ಆತಂಕದಿಂದ ಇಂಧನ ಖರೀದಿಸದಂತೆ ಸಾರ್ವಜನಿಕರಿಗೆ ಮನವಿ

ಇನ್ನು ಈ ಬಗ್ಗೆ ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ (IOCL, BPCL ಮತ್ತು HPCL) ಸಿದ್ಧಾರ್ಥ್ ಅಗರ್ವಾಲ್ ಸ್ಪಷ್ಟನೆ ನೀಡಿದ್ದು, ರಾಜ್ಯದ ಎಲ್ಲಾ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಸಾಕಷ್ಟು ದಾಸ್ತಾನು ಸಂಪೂರ್ಣವಾಗಿ ಲಭ್ಯವಿದೆ ಎಂದು ಸಾರ್ವಜನಿಕರಿಗೆ ಅಧಿಕೃತವಾಗಿ ಭರವಸೆ ನೀಡಿದ್ದಾರೆ.

ಇದನ್ನೂ ನೋಡಿ: ಇಂಧನ ಬೆಲೆ ಮತ್ತಷ್ಟು ಹೆಚ್ಚಳ: ತಜ್ಞರಿಂದ 8ರಿಂದ 10 ರೂಪಾಯಿ ಏರಿಕೆ ಬಗ್ಗೆ ಭವಿಷ್ಯ

ಇಂಧನ ಪೂರೈಕೆಯಲ್ಲಿ ಅಡೆತಡೆಯಿಲ್ಲ

ಟರ್ಮಿನಲ್ ಗಳು ಮತ್ತು ಡಿಪೋಗಳಿಂದ ಹಿಡಿದು ಸ್ಥಳೀಯ ಚಿಲ್ಲರೆ ಮಾರಾಟ ಮಳಿಗೆಗಳವರೆಗಿನ ಸಂಪೂರ್ಣ ಇಂಧನ ಪೂರೈಕೆ ಸರಪಳಿಯು ಯಾವುದೇ ಅಡೆತಡೆಯಿಲ್ಲದೆ, ಸಾಮಾನ್ಯ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇಂಧನ ಪೂರೈಕೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ರಾಜ್ಯಾದ್ಯಂತ ಮರುಪೂರಣ ಕಾರ್ಯಾಚರಣೆಗಳು ಸುಗಮವಾಗಿ ಸಾಗುತ್ತಿವೆ. ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಕರ್ನಾಟಕದ ಗ್ರಾಹಕರ ದೈನಂದಿನ ಇಂಧನ ಅಗತ್ಯಗಳನ್ನು ಪೂರೈಸಲು ಸಂಪೂರ್ಣವಾಗಿ ಸಜ್ಜಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಕ್ಕಸ ಹೊಟ್ಟೆಗೆ ಅರೆಕಾಸು ಮಜ್ಜಿಗೆ; ದಿನಕ್ಕೆ 1,600 ಕೋಟಿ ನಷ್ಟವಿರುವ ತೈಲ ಕಂಪನಿಗಳಿಗೆ 3 ರೂ ಪೆಟ್ರೋಲ್ ಬೆಲೆ ಏರಿಕೆ ಸಾಲುತ್ತಾ?

ಅತಿಯಾಗಿ ಇಂಧನ ಸಂಗ್ರಹ ಬೇಡ

ಸಾರ್ವಜನಿಕರು ನಿಶ್ಚಿಂತರಾಗಿರಲು ಮತ್ತು ತಮ್ಮ ಸಾಮಾನ್ಯ ಇಂಧನ ಬಳಕೆಯನ್ನು ಮುಂದುವರಿಸಲು ಸಲಹೆ ನೀಡಲಾಗಿದೆ. ಕರ್ನಾಟಕದ ಜನರಿಗೆ ನಿರಂತರ ಇಂಧನ ಪೂರೈಕೆಯನ್ನು ಖಚಿತಪಡಿಸಲು ತೈಲ ಮಾರುಕಟ್ಟೆ ಕಂಪನಿಗಳು (OMCs) ಸಂಪೂರ್ಣವಾಗಿ ಬದ್ಧವಾಗಿವೆ ಮತ್ತು ಸಿದ್ಧವಾಗಿವೆ. ಅದರಂತೆ, ಸಾರ್ವಜನಿಕರು ಆತಂಕದಿಂದ ಇಂಧನ ಖರೀದಿಸುವುದು ಅಥವಾ ಅತಿಯಾಗಿ ಇಂಧನವನ್ನು ಸಂಗ್ರಹಿಸಿಟ್ಟುಕೊಳ್ಳುವುದನ್ನು ಮಾಡಬಾರದು. ಇಡೀ ಪ್ರದೇಶದಾದ್ಯಂತ ತಡೆರಹಿತ ಇಂಧನ ಲಭ್ಯತೆಗಾಗಿ ತೈಲ ಉದ್ಯಮವು ಲಾಜಿಸ್ಟಿಕ್ಸ್, ದಾಸ್ತಾನು ಚಲನೆ ಮತ್ತು ಚಿಲ್ಲರೆ ಕಾರ್ಯಾಚರಣೆಗಳನ್ನು ನಿಕಟವಾಗಿ ಸಂಯೋಜಿಸುವುದನ್ನು ಮುಂದುವರಿಸಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 18 May 26

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?