ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ

ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್ ವ್ಯವಸ್ಥೆ ನೀಡಬೇಕು. ಹಾಸ್ಟೆಲ್ ಖಾಲಿ ಮಾಡಲು ಒತ್ತಾಯಿಸಿದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ.

ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)
Follow us
guruganesh bhat
|

Updated on:Apr 22, 2021 | 9:33 PM

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ. ಹೀಗಾಗಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳನ್ನು ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ. ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್ ವ್ಯವಸ್ಥೆ ನೀಡಬೇಕು. ಹಾಸ್ಟೆಲ್ ಖಾಲಿ ಮಾಡಲು ಒತ್ತಾಯಿಸಿದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ವಿಟಿಯು ವಿದ್ಯಾರ್ಥಿಗಳ ಹಾಸ್ಟೆಲ್ ಸಮಸ್ಯೆಗೆ ಪರಿಹಾರ ದೊರಕಿದಂತಾಗಿದೆ.

ರಾಜ್ಯಾದ್ಯಂತ ಕೊವಿಡ್ ತಡೆ ಬಿಗಿ ನಿಯಮಗಳು  ಜಾರಿಯಾಗಲಿವೆ. ಸದ್ಯ ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಆದರೆ ವಿಟಿಯು ಪರೀಕ್ಷೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ  ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಿದ್ದು ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಸೂಚನೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್​ಗಳಿಂದ ಹೊರಹಾಕುವಂತಿಲ್ಲ. ಇಂಜಿನಿಯರಿಂಗ್‌, ಡಿಪ್ಲೊಮಾ, ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಹಾಸ್ಟೆಲ್​ಗಳಿಂದ ಹೊರಗೆ ಕಳುಹಿಸುವಂತಿಲ್ಲ. ಪರೀಕ್ಷೆ ಮುಗಿಯುವವರೆಗೆ ಎಲ್ಲಾ ಸೌಲಭ್ಯ ಮುಂದುವರಿಸಿ ಊಟ, ವಸತಿ ಸೇರಿ ಎಲ್ಲಾ ಸೌಲಭ್ಯ ಒದಗಿಸಬೇಕು. ಹಾಸ್ಟೆಲ್‌ಗಳಲ್ಲಿ ಕೊವಿಡ್‌ ಬಗ್ಗೆ ಎಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಸೂಚನೆ ನೀಡಿದರು.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಕೊರೊನಾ ಓಟಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಕಠಿಣಾತಿ ಕಠಿಣ ರೂಲ್ಸ್ ಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದ್ರೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ. ಬೆಂಗಳೂರಿನಲ್ಲೇ 15 ಸಾವಿರಕ್ಕೂ ಹೆಚ್ಚು ವಿಟಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗುಜರಾತ್, ಮಹಾರಾಷ್ಟ್ರ, ಕೇರಳದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದಾರೆ. ಸದ್ಯದ ಪರಿಸ್ಥಿತಿಗೆ ಪರೀಕ್ಷೆ ಬೇಡ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರೂ ವಿಟಿಯು ಪರೀಕ್ಷೆ ನಡೆಸುತ್ತಿದೆ.  ಮುಂದಿನ ಶೈಕ್ಷಣಿಕ ವರ್ಷಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಿಕೆ ಮಾಡಲ್ಲ. ಆಫ್​ಲೈನಲ್ಲೇ ಪರೀಕ್ಷೆ ಬರೆಯಬೇಕು ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳಿದ್ದರು.

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Covid-19 Karnataka Update: ಕರ್ನಾಟಕದಲ್ಲಿ ಇಂದು 25,795 ಮಂದಿಯಲ್ಲಿ ಕೊರೊನಾ ಸೋಂಕು, 123 ಸಾವು

(Do not vacate VTU students from hostels by end of their exams says chancellor Prof Karisiddappa)

Published On - 8:38 pm, Thu, 22 April 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ