ಸಾಹಿತ್ಯ ಸಮ್ಮೇಳನಕ್ಕೆ ಈಗ ಕೋಟಿ ಕೋಟಿ ಹಂಚಿಕೆ; 1945ರಲ್ಲಿ ಮದರಾಸಿನಲ್ಲಿ ನಡೆದ 29ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ಎಷ್ಟು ಗೊತ್ತಾ?
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಹೌದು, ಡಿಸೆಂಬರ್ 20, 21 ಹಾಗೂ 22 ರ ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ವಿವಿಧ ಸಾಹಿತ್ಯ ಕಾರ್ಯಕ್ರಮಗಳು, ಪುಸ್ತಕ ಮಳಿಗೆಗಳು ಸೇರಿದಂತೆ ವಾಣಿಜ್ಯ ಮಳಿಗೆಗಳು ಕನ್ನಡ ಅಭಿಮಾನಿಗಳ ಗಮನ ಸೆಳೆಯಲಿದೆ. ಈ ನಡುವೆ 1945 ರಲ್ಲಿ ಮದರಾಸಿನಲ್ಲಿ ನಡೆದ 29 ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ವೆಚ್ಚಗಳ ಫೋಟೋವೊಂದು ವೈರಲ್ ಆಗಿದೆ. ಅಂದು ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚಾದ ಒಟ್ಟು ಮೊತ್ತವೆಷ್ಟು ಗೊತ್ತಾ? ಈ ಕುರಿತಾದ ಕುತೂಹಲಕಾರಿ ಮಾಹಿತಿಯೂ ಇಲ್ಲಿದೆ.
ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡಿಗರಿಗೆ, ಸಾಹಿತ್ಯ ಪ್ರೇಮಿಗಳಿಗೆ ಹಬ್ಬವೆನ್ನುವುದರಲ್ಲಿ ಎರಡು ಮಾತಿಲ್ಲ. ಕನ್ನಡದ ಮನಸುಗಳನ್ನು ಒಂದಾಗಿಸಿ, ಕನ್ನಡಾಭಿಮಾನವನ್ನು ಹೆಚ್ಚಿಸುವ ಕನ್ನಡ ಹಬ್ಬಕ್ಕೆ ಇದೀಗ ಮಂಡ್ಯದ ಸಾಕ್ಷಿಯಾಗಿದ್ದಾರೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಸಕ್ಕರೆ ನಗರಿ ಮಂಡ್ಯದಲ್ಲಿ ಮುಖ್ಯಮಂತ್ರಿಯಿಂದ ಚಾಲನೆ ದೊರೆತಿದೆ. ಈ ಸಮ್ಮೇಳನವು ಡಿಸೆಂಬರ್ 20 ರಿಂದ 22ರವರೆಗೆ ಮೂರು ದಿನಗಳ ಕಾಲ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿಯೇ 1945 ರಲ್ಲಿ ಮದರಾಸಿನಲ್ಲಿ ನಡೆದ 29 ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ವೆಚ್ಚಗಳ ಫೋಟೋವೊಂದು ವೈರಲ್ ಆಗಿದೆ.
1915 ರಿಂದ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಸಮ್ಮೇಳವನ್ನು ಪ್ರತಿ ವರ್ಷವೂ ಆಯೋಜಿಸುತ್ತಾ ಬಂದಿದೆ. ಕನ್ನಡದ ಇತಿಹಾಸವನ್ನು ಪ್ರಚುರಪಡಿಸುವುದು ಮತ್ತು ಭಾಷೆಯನ್ನು ಬೆಳೆಸುವುದು ಸಮ್ಮೇಳನದ ಮೂಲ ಉದ್ದೇಶವಾಗಿದೆ. ಆದರೆ ಸ್ವಾತ್ರಂತ್ಯ ಸಿಗುವುದಕ್ಕೂ ಒಂದು ವರ್ಷದ ಮೊದಲು ಮದರಾಸಿನಲ್ಲಿ ನಡೆದ ಈ ಸಮ್ಮೇಳನಕ್ಕೆ ಖರ್ಚಾದ ಒಟ್ಟು ಮೊತ್ತದ ಬಗ್ಗೆ ಕೇಳಿದ್ರೆ ಶಾಕ್ ಆಗುವುದು ಪಕ್ಕಾ. 1945ರಲ್ಲಿ ಮದರಾಸಿನಲ್ಲಿ ನಡೆದ 29 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಟಿಪಿ ಕೈಲಾಸಂ ವಹಿಸಿದ್ದರು.
ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:27 pm, Fri, 20 December 24