AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗ ಗುರು ಬಾಬಾ ರಾಮ್​ದೇವ್ ಹೇಳಿಕೆ ಖಂಡಿಸಿ ವೈದ್ಯರ ಪ್ರತಿಭಟನೆ

ಕೊರೊನಾದ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟಕೊಂಡು ರೋಗಿಗಳಿಗೆ, ಆರೋಗ್ಯ ಸೇವೆಗೆ ಯಾವುದೇ ತೊಂದರೆ ಆಗಬಾರದೆಂದು ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ ಅಸೋಸಿಯೇಷನ್ಸ್ ಸೂಚಿಸಿತ್ತು. ಹೀಗಾಗಿ ವೈದ್ಯರು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಯೋಗ ಗುರು ಬಾಬಾ ರಾಮ್​ದೇವ್ ಹೇಳಿಕೆ ಖಂಡಿಸಿ ವೈದ್ಯರ ಪ್ರತಿಭಟನೆ
ಬಾಬಾ ರಾಮ್​ದೇವ್​
ಆಯೇಷಾ ಬಾನು
|

Updated on: Jun 01, 2021 | 1:47 PM

Share

ದೆಹಲಿ: ಅಲೋಪಥಿ ಮತ್ತು ಆಧುನಿಕ ಔಷಧಿ ಪದ್ಧತಿ ಬಗ್ಗೆ ಅವಮಾನಕರ ಹೇಳಿಕೆ ವಿರೋಧಿಸಿ ಯೋಗ ಗುರು ಬಾಬಾ ರಾಮದೇವ್ ವಿರುದ್ಧ ದೇಶಾದ್ಯಂತ ವೈದ್ಯರು ಕಪ್ಪು ದಿನವನ್ನು ಆಚರಿಸುತ್ತಿದ್ದಾರೆ. ದೇಶಾದ್ಯಂತ ಹಲವಾರು ಆಸ್ಪತ್ರೆಗಳ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿಯೂ ಕಪ್ಪು ಪಟ್ಟಿ ಧರಿಸಿ, ಪಿಪಿಇ ಕಿಟ್ ಮೇಲೆ ಬ್ಲ್ಯಾಕ್ ಡೇ ಎಂದು ಬರೆದ ಫಲಕಗಳನ್ನು ಹಿಡಿದು ಪತಂಜಲಿ ಆಯುರ್ವೇದ ಸಂಸ್ಥಾಪಕರಾದ ಯೋಗ ಗುರು ಬಾಬಾ ರಾಮ್​ದೇವ್ ಬಂಧಿಸುವಂತೆ ಆಗ್ರಹಿಸಿ ಸೈಲೆಂಟ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊರೊನಾದ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟಕೊಂಡು ರೋಗಿಗಳಿಗೆ, ಆರೋಗ್ಯ ಸೇವೆಗೆ ಯಾವುದೇ ತೊಂದರೆ ಆಗಬಾರದೆಂದು ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ ಅಸೋಸಿಯೇಷನ್ಸ್ ಸೂಚಿಸಿತ್ತು. ಹೀಗಾಗಿ ವೈದ್ಯರು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಆಲೋಪಥಿ ವೈದ್ಯರನ್ನ ಆಯುರ್ವೇದ ವೈದ್ಯರನ್ನಾಗಿ ಮಾರ್ಪಾಡು ಮಾಡ್ತೀನಿ‌ ಎಂದು ಬಾಬ ರಾಮ್​ದೇವ್ ಹೇಳಿಕೆ ವಿರುದ್ಧ ಕಪ್ಪು ಪಟ್ಟಿ ಧರಿಸಿ ಆಕ್ರೋಶ ಹೊರ ಹಾಕಿದ್ದಾರೆ.

#Arrestbabaramdev ಎಂಬ ಬೋರ್ಡ್ ಹಿಡಿದು ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಬಾ ರಾಮ್​ದೇವ್ ಹೇಳಿಕೆಯಿಂದ ನಮ್ಮಂತ ವೈದ್ಯರಿಗೆ ಅವಮಾನವಾಗಿದೆ. ಇಂತಾ ಸಂದರ್ಭದಲ್ಲೂ ನಾವು ಎದೆಗುಂದದೆ ಕಾರ್ಯ ನಿರ್ವಹಿಸುತ್ತಿದ್ದೇವೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ನಮ್ಮವರನ್ನ ಕಳೆದುಕೊಂಡಿದ್ದೇವೆ. ಸಾವಿರಾರು ಆರೋಗ್ಯ ಕಾರ್ಯಕರ್ತರು ಮಹಾಮಾರಿಗೆ ಬಲಿಯಾಗಿದ್ದಾರೆ. ಹೀಗಿರುವಾಗ ಬಾಬಾ ನೀಡಿರುವ ಹೇಳಿಕೆ ಅವಮಾನ ಮಾಡುವಂತದ್ದು ಅವರನ್ನ ಕೂಡಲೇ ಅರೆಸ್ಟ್ ಮಾಡಿ ಎಂದು ವೈದ್ಯರು ಆಗ್ರಹಿಸಿದ್ದಾರೆ.

“ಅಲೋಪಥಿಯ ಶಿಸ್ತಿನ ಬಗ್ಗೆ ಮಾತನಾಡಲು ಸಹ ಅರ್ಹತೆ ಇಲ್ಲದ ರಾಮ್​ದೇವ್ ಅವರು ಮಾಡಿದ ಟೀಕೆಗಳ ವಿರುದ್ಧ ಇಂದು ಬೆಳಿಗ್ಗೆಯಿಂದಲೇ ನಮ್ಮ ಪ್ರತಿಭಟನೆ ಪ್ರಾರಂಭವಾಗಿದೆ. ಇಂತಹ ಸಾಂಕ್ರಾಮಿಕ ರೋಗದ ಸಮಯದಲ್ಲೂ ಅವರ ಈ ಹೇಳಿಕೆ ವೈದ್ಯರ ಮನೋಸ್ಥೈರ್ಯದ ಮೇಲೆ ಪರಿಣಾಮಬೀರಿದೆ. ನಾವು ಬೇಷರತ್ತಾಗಿ ಒತ್ತಾಯಿಸುತ್ತೇವೆ ಅವರಿಂದ ಸಾರ್ವಜನಿಕ ಕ್ಷಮೆಯಾಚನೆ ಅಥವಾ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು”ಎಂದು ಫೋರ್ಡಾದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಜೂ.1ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಅಲೋಪಥಿಕ್​ ವೈದ್ಯರ ನಿರ್ಧಾರ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ