ಕೊರೊನಾ ಶಂಕೆ: ಚಿಕಿತ್ಸೆ ನೀಡದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿಸಿದ ವೈದ್ಯರು

ಬೆಂಗಳೂರು: ಕೊರೊನಾ ಭೀತಿ ನಡುವೆಯೇ ವೈದ್ಯರು ಮಾನವೀಯತೆ ಮರೆತ ಘಟನೆ ನಡೆದಿದೆ. ರೋಗಿ ತೀವ್ರ ಜ್ವರದಿಂದ ಬಳಲುತ್ತಿದ್ದರೂ ಚಿಕಿತ್ಸೆ ನೀಡದೆ ಸರ್ಕಾರಿ ಆಸ್ಪತ್ರೆಗಳ ವೈದ್ಯ ಸಿಬ್ಬಂದಿ ಮಾನವೀಯತೆ ಮರೆತು ವರ್ತಿಸಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿ ಬೆಳಗ್ಗೆ ಲಗ್ಗೆರೆಯಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ನಂತರ ಆ್ಯಂಬುಲೆನ್ಸ್‌ ಮೂಲಕ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲೂ ಕೂಡ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವಂತೆ ಸಿಬ್ಬಂದಿ […]

ಕೊರೊನಾ ಶಂಕೆ: ಚಿಕಿತ್ಸೆ ನೀಡದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿಸಿದ ವೈದ್ಯರು
ಸಾಧು ಶ್ರೀನಾಥ್​

Updated on: May 10, 2020 | 4:47 PM

ಬೆಂಗಳೂರು: ಕೊರೊನಾ ಭೀತಿ ನಡುವೆಯೇ ವೈದ್ಯರು ಮಾನವೀಯತೆ ಮರೆತ ಘಟನೆ ನಡೆದಿದೆ. ರೋಗಿ ತೀವ್ರ ಜ್ವರದಿಂದ ಬಳಲುತ್ತಿದ್ದರೂ ಚಿಕಿತ್ಸೆ ನೀಡದೆ ಸರ್ಕಾರಿ ಆಸ್ಪತ್ರೆಗಳ ವೈದ್ಯ ಸಿಬ್ಬಂದಿ ಮಾನವೀಯತೆ ಮರೆತು ವರ್ತಿಸಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿ ಬೆಳಗ್ಗೆ ಲಗ್ಗೆರೆಯಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ನಂತರ ಆ್ಯಂಬುಲೆನ್ಸ್‌ ಮೂಲಕ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲೂ ಕೂಡ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡದೆ ಬೌರಿಂಗ್‌ ಆಸ್ಪತ್ರೆಗೆ ಹೋಗಲು ತಿಳಿಸಿದ್ರು. ಬೌರಿಂಗ್‌ ಆಸ್ಪತ್ರೆಯಲ್ಲೂ ಇದೇ ಕಥೆ ಮುಂದುವರೆದಿದೆ.

ಆ್ಯಂಬುಲೆನ್ಸ್‌ ಸಿಬ್ಬಂದಿ ಮತ್ತೆ ಆ ವ್ಯಕ್ತಿಯನ್ನು ಲಗ್ಗೆರೆ ಆಸ್ಪತ್ರೆಗೆ ಕರೆತಂದಿದ್ದಾರೆ. ಆದ್ರೆ ಲಗ್ಗೆರೆ ಆಸ್ಪತ್ರೆ ಸಿಬ್ಬಂದಿ ರೋಗಿ 2ನೇ ಸಲ ಬಂದ್ರೂ ಚಿಕಿತ್ಸೆ ನೀಡದೆ ನಿರ್ಲಕ್ಷಿಸಿದ್ದಾರೆ. ಆಸ್ಪತ್ರೆಯ ಬಾಗಿಲಲ್ಲೇ ಒದ್ದಾಡುತ್ತಿದ್ದರೂ ಚಿಕಿತ್ಸೆ ನೀಡಲಿಲ್ಲ. ನಂತರ ಸ್ಥಳೀಯ ನಿವಾಸಿಗಳು ನಂದಿನಿ ಲೇಔಟ್‌ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ರೋಗಿಯನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆ್ಯಂಬುಲೆನ್ಸ್‌ ಜತೆಯೇ ಪೊಲೀಸರು ತೆರಳಿ ಅತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ರೋಗಿಗೆ ಕೊರೊನಾ ಲಕ್ಷಣವೂ ಕಂಡುಬಂದಿರುವ ಮಾಹಿತಿ ಸಿಕ್ಕಿದ್ದು, ಬೌರಿಂಗ್‌ ಆಸ್ಪತ್ರೆಯ ಸಿಬ್ಬಂದಿ ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us