ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಇಂದು ದೇಶವ್ಯಾಪ್ತಿ ಪ್ರತಿಭಟನೆ.. ಕಪ್ಪು ಬ್ಯಾಡ್ಜ್, ಮಾಸ್ಕ್ ಧರಿಸಿ ನ್ಯಾಯಕ್ಕಾಗಿ ಹೋರಾಟ
ರಕ್ಷಕರನ್ನು ರಕ್ಷಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ದೇಶವ್ಯಾಪ್ತಿ ಪ್ರತಿಭಟನೆ ನಡೆಯಲಿದೆ. ಸ್ಥಳೀಯ ಮಟ್ಟದಲ್ಲಿ ತನ್ನ ಸಂಘಟನೆಗಳಿಗೆ ಸೂಚನೆ ನೀಡಲಾಗಿದ್ದು, ಕಪ್ಪು ಬ್ಯಾಡ್ಜ್, ಮಾಸ್ಕ್, ರಿಬ್ಬನ್, ಶರ್ಟ್ನ್ನು ಧರಿಸಿ, ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹಲ್ಲೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುವಂತೆ ಕರೆ ನೀಡಲಾಗಿದೆ ಎಂದು ಐಎಂಎ ತಿಳಿಸಿದೆ.
ಬೆಂಗಳೂರು: ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ವೈದ್ಯರು ಇಂದು(ಜೂನ್ 18) ದೇಶವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ದೇಶದ ವಿವಿಧ ಭಾಗಗಳಲ್ಲಿ ವೈದ್ಯರು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಈ ಹಲ್ಲೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ ನೀಡಿದೆ.
ರಕ್ಷಕರನ್ನು ರಕ್ಷಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ದೇಶವ್ಯಾಪ್ತಿ ಪ್ರತಿಭಟನೆ ನಡೆಯಲಿದೆ. ಸ್ಥಳೀಯ ಮಟ್ಟದಲ್ಲಿ ತನ್ನ ಸಂಘಟನೆಗಳಿಗೆ ಸೂಚನೆ ನೀಡಲಾಗಿದ್ದು, ಕಪ್ಪು ಬ್ಯಾಡ್ಜ್, ಮಾಸ್ಕ್, ರಿಬ್ಬನ್, ಶರ್ಟ್ನ್ನು ಧರಿಸಿ, ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹಲ್ಲೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುವಂತೆ ಕರೆ ನೀಡಲಾಗಿದೆ ಎಂದು ಐಎಂಎ ತಿಳಿಸಿದೆ.
ಇನ್ನು ಪ್ರತಿಭಟನೆಗೆ ಖಾಸಗಿ ಆಸ್ಪತ್ರೆ ಒಕ್ಕೂಟ ಸಾಥ್ ನೀಡಿದೆ. ಖಾಸಗಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಆಸ್ಪತ್ರೆಗಳನ್ನ ಸಂರಕ್ಷಿತ ವಲಯ ಅಂತ ಘೋಷಿಸಬೇಕು. ಆಸ್ಪತ್ರೆ ಹಾಗೂ ಆರೋಗ್ಯ ಸೇವೆ ವೃತ್ತಿಪರ ಸಂರಕ್ಷಣಾ ಕಾಯ್ದೆ ಐಪಿಸಿ ಮತ್ತು ಸಿಆರ್ಪಿಸಿ ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಇದನ್ನೂ ಓದಿ: ಮಲೆನಾಡಿನ ಫೋರ್ಕ್ ಫ್ರೈ; ಮಳೆಗಾಲದಲ್ಲಿ ಅಕ್ಕಿ ರೊಟ್ಟಿ ಜತೆ ಮಾಡಿ ಸವಿಯಿರಿ