ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂದು (ಆಗಸ್ಟ್.17) ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಸಲು ವೈದ್ಯರು ಮುಂದಾಗಿದ್ದಾರೆ. ಆರ್ ಜಿ ಕರ್ ಆಸ್ಪತ್ರೆ ಬಳಿ ಪ್ರತಿಭಟನೆ ಮುಂದುವರಿದಿದೆ. ದೇಶಾದ್ಯಂತ ವೈದ್ಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ದೇಶಾದ್ಯಂತ ಒಪಿಡಿ ಸೇವೆ ಬಂದ್ ಮಾಡಿ ಪ್ರತಿಭಟನೆ ನಡೆಸಲು ವೈದ್ಯರು ಕರೆ ನೀಡಿದ್ದಾರೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಸೇವೆ ಬಂದ್ ಮಾಡಲಾಗುತ್ತೆ. ದೇಶಾದ್ಯಂತ 24 ಗಂಟೆಗಳ ಕಾಲ ವೈದ್ಯಕೀಯ ಸೇವೆ ಬಂದ್ ಆಗಿರಲಿದೆ.
ಇನ್ನು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆ ಕಾಲ OPD ಬಂದ್ ಆಗಿರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸೇವೆ ಕ್ಲೋಸ್ ಆಗಿರಲಿದೆ ಅಂತಾ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ತಿಳಿಸಿದ್ದಾರೆ. ಎಮರ್ಜೆನ್ಸಿ ಓವರ್ಫ್ಲೋ ಆದ್ರೂ ಅದನ್ನು ನಾವು ನಿಭಾಯಿಸುತ್ತೇವೆ. ಕಪ್ಪುಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆ ಮಾತ್ರ ನೀಡುತ್ತೇವೆ ಅಂತ ಹೇಳಿದ್ದಾರೆ. ಜೊತೆಗೆ IMA ,PHANA ಅಡಿ ಬರೋ ಖಾಸಗಿ ಆಸ್ಪತ್ರೆಗಳು ಕೂಡ ಸೇವೆ ಬಂದ್ ಮಾಡಲಿವೆ. ಈ ಪ್ರತಿಭಟನೆಗೆ ಸಂಬಂಧಿಸಿದ ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್ಗಾಗಿ ಟಿವಿ9 ಡಿಜಿಟಲ್ ಲೈವ್ ಫಾಲೋ ಮಾಡಿ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಕೇಸ್ ಖಂಡಿಸಿ ಬೆಂಗಳೂರಿನಲ್ಲಿ ಧರಣಿ ಮಾಡಲಾಗಿದೆ. ನಾಗರಭಾವಿಯ ಜಿಎಂ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯಿಂದ ಕ್ಯಾಂಡಲ್ ಲೈಟ್ ಧರಣಿ ಮಾಡಲಾಗಿದ್ದು, ವೈದ್ಯರ ಸುರಕ್ಷತೆ, ನ್ಯಾಯಕ್ಕಾಗಿ ಆಗ್ರಹಿಸಿ ಆಸ್ಪತ್ರೆ ಮುಂಭಾಗ ಶಾಂತಿಯುತವಾಗಿ ಪ್ರತಿಭಟನೆ ಮಾಡಲಾಗಿದೆ.
ಬೆಂಗಳೂರು: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಬಿಜೆಪಿ ಮಹಿಳಾ ಮೋರ್ಛಾ ಪ್ರತಿಭಟನೆ ಮಾಡಿದೆ. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಎದುರು ಮೊಂಬತ್ತಿ ಬೆಳಗಿ ಘಟನೆ ಖಂಡಿಸಿ ಪ್ರತಿಭಟನೆ ಮಾಡಲಾಗಿದೆ.
ಬೆಂಗಳೂರು: ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ ಬೆಂಗಳೂರು ಸಂತ ಮಾರ್ಥಸ್ ಆಸ್ಪತ್ರೆ ವೈದ್ಯರಿಂದ ಪ್ರತಿಭಟನೆ ಮಾಡಲಾಗಿದೆ. ಒಪಿಡಿ ಸೇವೆ ಬಂದ್ ಮಾಡಿ ಪ್ರತಿಭಟಿಸಿದ್ದಾರೆ.
ಮೈಸೂರು: ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಮಾಡಲಾಗಿದ್ದು, ಸಾವಿರಕ್ಕೂ ಹೆಚ್ಚು ವೈದ್ಯರು, ವೈದ್ಯಕೀಯ ಸಿಬ್ಬಂದಿ ಭಾಗಿ ಆಗಿದ್ದರು. ಮೈಸೂರು ದೊಡ್ಡ ಕೆರೆ ಮೈದಾನದಿಂದ ಮೆರವಣಿಗೆ ಆರಂಭಸಲಾಗಿದ್ದು, ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗಿದೆ. ಪೊಲೀಸ್ ಕಮಿಷನರ್ ಕಚೇರಿವರೆಗೂ ಮೆರವಣಿಗೆ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ.
ಮಂಗಳೂರು: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಖಂಡಿಸಿ ದೇಶಾದ್ಯಂತ ವೈದ್ಯರ ಪ್ರತಿಭಟನೆ ಮಾಡಲಾಗುತ್ತಿದ್ದು, ಮಂಗಳೂರಿನಲ್ಲಿ ಐಎಂಎಯಿಂದ ಮೌನ ಮೆರವಣಿಗೆ ಮಾಡಲಾಗಿದೆ. ವೈದ್ಯರ ಪ್ರತಿಭಟನೆಗೆ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸಾಥ್ ನೀಡಿದ್ದು, ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಓಪಿಡಿ ಸೇವೆಗಳು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ-ಕೊಲೆ ಘಟನೆಯನ್ನು ವಿರೋಧಿಸಿ ಜೈಪುರದ ಎಸ್‌ಎಂಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
#WATCH | Jaipur, Rajasthan: Junior doctors and students of SMS Medical College and Hospital protest against the rape-murder incident at Kolkata's RG Kar Medical College and Hospital. pic.twitter.com/tS4KQpZlyz
— ANI MP/CG/Rajasthan (@ANI_MP_CG_RJ) August 17, 2024
ಶಿವಮೊಗ್ಗದಲ್ಲಿ ಮಾನವ ಸರಪಳಿ ನಿರ್ಮಿಸಿ ವೈದ್ಯರು ಮೌನ ಪ್ರತಿಭಟನೆ ನಡೆಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ ಪ್ರತಿಭಟನೆ ನಡೆಸಿದೆ. ನಗರದ ಮೆಗ್ಗಾನ್ ಆಸ್ಪತ್ರೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿ ನಗರದ ಗೋಪಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೂಡಲೇ ಅತ್ಯಾಚಾರ ಎಸಗಿದ ಆರೋಪಿಗಳನ್ನು ಬಂಧಿಸಿ, ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಮಹಾಗಣಪತಿ ಆಯುರ್ವೇದಿಕ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನೆ ವೇಳೆ ವೈದ್ಯಕೀಯ ವಿದ್ಯಾರ್ಥಿನಿ ಅಸ್ವಸ್ಥಗೊಂಡರು. ಈ ವೇಳೆ ಸಹಪಾಠಿಗಳು ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದೆ. ಇದ್ರಿಂದ ರೋಗಿಗಳು ಒಪಿಡಿ ಬದಲು ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಮುಗಿಬಿದ್ದಿದ್ದು ರೋಗಿಗಳನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡ್ತಿದ್ದಾರೆ.
ಕೋಲಾರದಲ್ಲಿ ಸರ್ಕಾರಿ ಮತ್ತು ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದೆ. ಪಶ್ಚಮ ಬಂಗಾಳದಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನು ಕೊಲೆ ಮಾಡಿ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆದಿದೆ. ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ಸರ್ಕಾರ ತಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಭಾಗಿಯಾಗಿದ್ದಾರೆ.
ಐಎಂಎ ಅಧ್ಯಕ್ಷ ಡಾ. ರವಿ ಬಿರಾದಾರ್ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೊಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಜಿಲ್ಲೆಯ 734 ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಆಗಿದೆ.
ಇಂದು ವೈದ್ಯರ ಪ್ರತಿಭಟನೆ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಕರ್ನಾಟಕ ಸರ್ಕಾರಿ ವೈದ್ಯರಿಗೆ ಇಂದಿನ ರಜೆ ಮಂಜೂರು ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.
ಸರ್ಕಾರಿ ವೈದ್ಯರ ರಜೆಗೆ ಬಿತ್ತು ಕತ್ತರಿ!#Doctorsprotest #Karnataka #governmentdoctorshttps://t.co/7DKOE8ODir
— TV9 Kannada (@tv9kannada) August 17, 2024
ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆ ಒಪಿಡಿ ಸೇರಿದಂತೆ ಜಿಲ್ಲಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆ ಒಪಿಡಿ ಬಂದ್ ಆಗಿವೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಇಂಡಿಯನ್ ಡೆಂಟಲ್ ಅಸೋಸಿಯೇಶನ್, ಆಯುಷ್ ಫೆಡರೇಷನ್ ಆಫ್ ಇಂಡಿಯಾ ಜಿಲ್ಲಾ ಘಟಕದ ವತಿಯಿಂದ ಒಪಿಡಿ ಬಂದ್ ಮಾಡಲಾಗಿದೆ. ತುರ್ತು ಚಿಕಿತ್ಸೆ ಮಾತ್ರ ಲಭ್ಯವಿದೆ. ತುರ್ತು ಚಿಕಿತ್ಸೆ ಸಂಬಂಧಿಸಿದಂತೆ ಆದ್ಯತೆ ಮೇರೆಗೆ ಚಿಕಿತ್ಸೆಗೆ ನಿರ್ಧಾರ ಮಾಡಲಾಗಿದೆ.
ರಾಜಾಜಿನಗರದ ಸುಗುಣ ಆಸ್ಪತ್ರೆಗೆ ಡಯಾಲಿಸಿಸ್ಗಾಗಿ ಬಂದಿದ್ದ ಹಲವು ರೋಗಿಗಳು ವಾಪಸ್ ಆಗುತ್ತಿದ್ದಾರೆ. ಗೊರವನಹಳ್ಳಿ, ಹನುಮಂತನಗರದಿಂದ ಬಂದಿದ್ದ ರೋಗಿಗಳು ಡಯಾಲಿಸಿಸ್ ಚಿಕಿತ್ಸೆ ಸಿಗದೆ ವಾಪಸ್ ತೆರಳ್ತಿದ್ದಾರೆ. ಚಿಕಿತ್ಸೆ ಸಿಗದ ಹಿನ್ನೆಲೆ ಬೇಸರ ಹೊರಹಾಕಿದ್ದಾರೆ.
ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಖಂಡಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವೈದ್ಯರಿಂದ ಪ್ರತಿಭಟನೆ ನಡೆಯಲಿದೆ. ಚಾಮರಾಜಪೇಟೆಯ ಐಎಂಎ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಕಿದ್ವಾಯಿ, ಜಯದೇವ, ಬೌರಿಂಗ್ ವೈದ್ಯರಿಂದಲೂ ಹೋರಾಟ ನಡೆಯಲಿದೆ. ನಿಮ್ಹಾನ್ಸ್ನಲ್ಲಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಯುತ್ತಿದೆ.
ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಿರಲಿದೆ. ವೈದ್ಯರ ಪ್ರತಿಭಟನೆಯ ಕಾರಣ ರಾಜ್ಯದ ಆಸ್ಪತ್ರೆಗಳಲ್ಲಿ ಏನೇನು ಲಭ್ಯವಿರಲಿದೆ, ಯಾವ ಸೇವೆ ದೊರೆಯುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.
ವೈದ್ಯರ ಪ್ರತಿಭಟನೆ: ಇಂದು ಆಸ್ಪತ್ರೆಗೆ ಹೋಗುವ ಮುನ್ನ ಈ ಅಂಶ ಗಮನಿಸಿ#Karnataka #hospitals #OPDBandh #doctorsstrike #doctorsprotesthttps://t.co/wCYnZisUlI
— TV9 Kannada (@tv9kannada) August 17, 2024
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆ ವಿಧ್ಯಾರ್ಥಿಯ ಅತ್ಯಾಚಾರ-ಕೊಲೆಯನ್ನು ವಿರೋಧಿಸಿ ಇಂದೋರ್‌ನಲ್ಲಿ ವೈದ್ಯರು ಕ್ಯಾಂಡಲ್ ಮಾರ್ಚ್ ನಡೆಸಿದರು.
#WATCH | Madhya Pradesh: Doctors in Indore took out a candle march to protest against the rape-murder of a woman post-graduate trainee (PGT) doctor at Kolkata's RG Kar Medical College and Hospital. (16/08) pic.twitter.com/VTcLwDc41i
— ANI (@ANI) August 16, 2024
ವೈದ್ಯೆ ಮೇಲೆ ನಡೆದ ಅತ್ಯಾಚಾರ & ಕೊಲೆ ಪ್ರಕರಣ ಸದ್ದು ಮಾಡುತ್ತಿದೆ. ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಕೋಲ್ಕತ್ತಾ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಆರ್‌ಜಿ ಕರ್ ಆಸ್ಪತ್ರೆಗೆ ಭದ್ರತೆಯನ್ನ ನೀಡಲಾಗದಿದ್ದರೆ ನಾವೇ ಮುಚ್ಚಿಸುತ್ತೇವೆ. ಪೊಲೀಸ್ ವೈಫಲ್ಯಕ್ಕೆ ಹೈಕೋರ್ಟ್ ಜಡ್ಜ್ ಕೆಂಡವಾಗಿದ್ದಾರೆ. ಇದು ಆಡಳಿತ ಯಂತ್ರದ ಸಂಪೂರ್ಣ ವೈಫಲ್ಯ ಅಂತಾ ಕಿಡಿಕಾರಿದೆ.
ಕೋಲ್ಕತ್ತಾ ವೈದ್ಯೆ ಹತ್ಯೆ ವಿರುದ್ಧ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ 25ಕ್ಕೂ ಹೆಚ್ಚು ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 6 ಆರೋಪಿಗಳನ್ನ ಸೇಲಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಲವು ಶಂಕಿತರ ಫೋಟೋ ರಿಲೀಸ್ ಮಾಡಲಾಗಿದೆ. ಮತ್ತಷ್ಟು ಜನರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಕೋಲ್ಕತ್ತದ ಆರ್‌ಜಿ ಕರ್ ಆಸ್ಪತ್ರೆ ವಿರುದ್ಧ ಆಕ್ರೋಶ ಸ್ಪೋಟವಾಗಿದೆ. ಬಿಜೆಪಿ ಕಾರ್ಯಕರ್ತರು ವೈದ್ಯರ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ಯಾರಿಕೇಡ್ಗಳನ್ನ ತಳ್ಳಿ ಮಹಿಳಾ ಕಾರ್ಯಕರ್ತೆಯರು ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನಾ ನಿರತರನ್ನ ತಡೆಯಲು ಪೊಲೀಸರು ಹರಸಾಹಸವನ್ನ ಪಟ್ಟಿದ್ದಾರೆ. ಇನ್ನೊಂದ್ಕಡೆ ಆರ್‌ಜಿ ಕರ್ ಆಸ್ಪತ್ರೆ ಮೇಲೆ ನಡೆಸಿರೋ ದಾಳಿ ಹಿಂದೆ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರು ಇದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ & ಹತ್ಯೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಆಂಧ್ರ ಪ್ರದೇಶದ ವಿಜಯವಾಡಲದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಐಎಂಎ ಸಿಬ್ಬಂದಿ &
ವೈದ್ಯರು, ಸಿಬ್ಬಂದಿ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಅಲ್ದೇ, ತಮಿಳುನಾಡಿನ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾಂಡಲ್
ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ನ್ಯಾಯಕ್ಕಾಗಿ ಎಲ್ಲೆಲ್ಲೂ ಹೋರಾಟ ಭುಗಿಲೆದ್ದಿದೆ.
ರಾಜ್ಯದ ಎಲ್ಲಾ ಕ್ಲಿನಿಕ್ಗಳು ಬಂದ್ ಆಗುತ್ತವೆ ಅಂತಾ IMA ರಾಜ್ಯ ಕಾರ್ಯದರ್ಶಿ ಡಾ. ಕರುಣಾಕರ್ ಹೇಳಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು, ಈಗಾಗಲೇ ಕ್ಲಿನಿಕ್ಗಳ ವೈದ್ಯರೂ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಸಾರ್ವಜನಿಕರಿಗೆ ತೊಂದ್ರೆ ಆಗ್ಬಾರ್ದು ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಅಸೋಸಿಯೇಷನ್ ಜೊತೆ ನಾನು ಸಭೆ ಕರೆದಿದ್ದೇನೆ. ಏನೆಲ್ಲಾ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸೋಕೆ ಹೇಳಿದ್ದೇನೆ ಎಂದು ಹೇಳಿದ್ದಾರೆ.
Published On - 8:02 am, Sat, 17 August 24