ವೈದ್ಯರ ಮುಷ್ಕರ: ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಆದೇಶ

ವೈದ್ಯರ ಪ್ರತಿಭಟನೆಯ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದಕ್ಕಾಗಿ ಕರ್ನಾಟಕ ಸರ್ಕಾರಿ ವೈದ್ಯರಿಗೆ ಇಂದಿನ ಮಟ್ಟಿಗೆ ರಜೆ ಮಂಜೂರು ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ. ಕೋಲ್ಕತ್ತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ರಾಜ್ಯದಾದ್ಯಂತ ವೈದ್ಯರು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಒಪಿಡಿ ಬಂದ್ ಆಗಿವೆ.

ವೈದ್ಯರ ಮುಷ್ಕರ: ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಆದೇಶ
ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಆದೇಶ
Follow us
Vinay Kashappanavar
| Updated By: Ganapathi Sharma

Updated on:Aug 17, 2024 | 9:24 AM

ಬೆಂಗಳೂರು, ಆಗಸ್ಟ್ 17: ಕೋಲ್ಕತ್ತದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಕರ್ನಾಟಕದಾದ್ಯಂತ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಕರ್ನಾಟಕ ಸರ್ಕಾರದ ಆದೇಶ ಹೊರಡಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ.

ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದು, ಒಪಿಡಿ ಸೇವೆ ಬಂದ್ ಆಗಿದೆ. ಎಮರ್ಜೆನ್ಸಿ ಸೇವೆ, ⁠ಮೆಡಿಕಲ್ ಶಾಪ್ಸ್, ಇನ್ ಪೇಷೆಂಟ್ ಸೇವೆ, ಹೆರಿಗೆ, ಎಮರ್ಜೆನ್ಸಿ ಸರ್ಜರಿ ಸೇವೆಗಳನ್ನು ಒದಗಿಸುವುದಾಗಿ ವೈದ್ಯರು ತಿಳಿಸಿದ್ದಾರೆ. ಆದಾಗ್ಯೂ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದಾದ್ಯಂತ ಪ್ರತಿಭಟನೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ವೈದ್ಯರು ಸಜ್ಜಾಗಿದ್ದಾರೆ. ಹಾಸನ ವೈದ್ಯಕೀಯ ಬೋದಕ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರಿಂದ ಪ್ರತಿಭಟನೆ ನಡೆಯುತ್ತಿದೆ. ಕೈಗೆ ಕಪ್ಪು ಪಟ್ಟಿ ಕಟ್ಟಿ ಹೋರಾಟಕ್ಕೆ ಸಜ್ಜಾಗಿರುವ ನೂರಾರು ಯುವ ವೈದ್ಯರು ಜಿಲ್ಲಾಸ್ಪತ್ರೆಯ ಮುಂಬಾಗ ಸೇರಿದ್ದಾರೆ.

ಇದನ್ನೂ ಓದಿ: ವೈದ್ಯರ ಪ್ರತಿಭಟನೆ: ಇಂದು ಯಾವೆಲ್ಲ ಸೇವೆಗಳು ಲಭ್ಯ, ಏನೆಲ್ಲ ಇರಲ್ಲ? ಇಲ್ಲಿದೆ ಮಾಹಿತಿ

ಕೋಲ್ಕತ್ತ ಘಟನೆ ಖಂಡಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಹಾಗು ವೈದ್ಯ ತರಬೇತಿ ವಿದ್ಯಾರ್ಥಿಗಳು ಮೆರವಣಿಗೆ ನಡೆಸಲಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಹೋರಾಟ ಬೆಳಗ್ಗೆ 10 ಗಂಟೆಗೆ ಆರಂಭ ಆಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:23 am, Sat, 17 August 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್