AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಟ್ಟ ಮಾಲೀಕನಿಗೆ ನೌಕರನಿಂದಲೇ ಕೋಟಿ ರೂ. ನಾಮ; ಪ್ರೇಯಸಿ ಜೊತೆ ಸೇರಿ ಜರಿ ದಾರ ಕದ್ದ ಖದೀಮ ಜಹಿದ್ ಖಾನ್

ದೊಡ್ಡಬಳ್ಳಾಪುರದಲ್ಲಿ, ಮಾಲೀಕನಿಗೆ ಇಬ್ಬರು ನಂಬಿಕಸ್ಥ ನೌಕರರು ಸೇರಿ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಕಚ್ಚಾ ವಸ್ತುಗಳನ್ನು ವಂಚಿಸಿದ್ದಾರೆ. ಸೀರೆ ನೇಯುವ ಅಂಗಡಿಯ ಮಾಲೀಕರ ಅನುಪಸ್ಥಿತಿಯಲ್ಲಿ ಜರಿ ದಾರ ಮತ್ತು ಇತರ ವಸ್ತುಗಳನ್ನು ಕದ್ದು ಮಾರಾಟ ಮಾಡಿದ್ದಾರೆ. ದೂರು ನೀಡಿದರೂ ಪೊಲೀಸರಿಂದ ಕ್ರಮವಿಲ್ಲ ಎಂದು ಮಾಲೀಕ ಮೊಹಮ್ಮದ್ ಅಪನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ಅವರ ಹೋರಾಟ ಮುಂದುವರಿದಿದೆ.

ಕೆಲಸ ಕೊಟ್ಟ ಮಾಲೀಕನಿಗೆ ನೌಕರನಿಂದಲೇ ಕೋಟಿ ರೂ. ನಾಮ; ಪ್ರೇಯಸಿ ಜೊತೆ ಸೇರಿ ಜರಿ ದಾರ ಕದ್ದ ಖದೀಮ ಜಹಿದ್ ಖಾನ್
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ.
| Edited By: |

Updated on: Jul 07, 2026 | 3:45 PM

Share

ಮುಖ್ಯಾಂಶಗಳು

  • ಮಾಲೀಕನಿಗೆ ಇಬ್ಬರು ನಂಬಿಕಸ್ಥ ನೌಕರರು ಸೇರಿ ಕೋಟ್ಯಂತರ ರೂ. ವಂಚನೆ
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ನಡೆದ ಘಟನೆ
  • ಲಕ್ಷಾಂತರ ರೂಪಾಯಿ ಮೌಲ್ಯದ ಕಚ್ಚಾ ವಸ್ತುಗಳನ್ನು ಕದ್ದು ಮಾರಾಟ

ದೊಡ್ಡಬಳ್ಳಾಪುರ, ಜು.7: ತನಗೆ ಕೆಲಸ ಕೊಟ್ಟು ಸಾಕಿ ಸಲಹಿದ ಮಾಲೀಕನಿಗೆ ಇಬ್ಬರು ನಂಬಿಕಸ್ಥ ನೌಕರರು ಸೇರಿ ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಬೆಳಕಿಗೆ ಬಂದಿದೆ. ಮಾಲೀಕನ ಅನುಪಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡ ಕೆಲಸಗಾರ ಮತ್ತು ಆತನ ಪ್ರೇಯಸಿಯಾಗಿದ್ದ ಅಕೌಂಟೆಂಟ್ ಮಹಿಳೆ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಕಚ್ಚಾ ವಸ್ತುಗಳನ್ನು ಕದ್ದು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ದೊಡ್ಡಬಳ್ಳಾಪುರ ನಗರದಲ್ಲಿ ಉದ್ಯಮಿ ಮಹಮದ್ ಅಪನ್ ಎಂಬುವರು ಸೀರೆ ನೇಯುವ ಮಗ್ಗಗಳಿಗೆ ಬೇಕಾಗುವ ಜರಿ ದಾರ ಸೇರಿದಂತೆ ವಿವಿಧ ಕಚ್ಚಾ ವಸ್ತುಗಳನ್ನು ಮಾರಾಟ ಮಾಡುವ ದೊಡ್ಡ ಅಂಗಡಿಯನ್ನು ನಡೆಸುತ್ತಿದ್ದರು. ಈ ಅಂಗಡಿಯಲ್ಲಿ ಜಹಿದ್ ಖಾನ್ ಎಂಬಾತ ಕೆಲಸಗಾರನಾಗಿದ್ದ ಹಾಗೂ ಅಪ್ಶಿನ್ ಎಂಬ ಮಹಿಳೆ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಳು. ಇವರಿಬ್ಬರ ನಡುವೆ ಪ್ರೇಮ ಸಂಬಂಧವಿತ್ತು ಎನ್ನಲಾಗಿದೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮಾಲೀಕ ಮಹಮದ್ ಅಪನ್ ಅವರು ಅಂಗಡಿಯಲ್ಲಿ ಇಲ್ಲದ ಸಮಯವನ್ನು ನೋಡಿಕೊಂಡು, ಇವರಿಬ್ಬರು ಸೇರಿ ಬರೋಬ್ಬರಿ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಜರಿ ದಾರ ಹಾಗೂ ಇತರ ಕಚ್ಚಾ ವಸ್ತುಗಳನ್ನು ಯಾರಿಗೂ ತಿಳಿಯದಂತೆ ಖದ್ದಾಗಿ ಅವರೇ ಬೇರೆಯವರಿಗೆ ಮಾರಾಟ ಮಾಡಿ ಹಣ ಜೇಬಿಗೆ ಇಳಿಸಿಕೊಂಡಿದ್ದಾರೆ ಎಂದು ಪೊಲೀಸ್​​​​ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತನ್ನ ಅಂಗಡಿಯಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳು ಕಳ್ಳತನವಾಗಿರುವುದನ್ನು ಪತ್ತೆಹಚ್ಚಿದ ಮಾಲೀಕ ಮಹಮದ್ ಅಪನ್, ಆರೋಪಿಗಳಾದ ಜಹಿದ್ ಖಾನ್ ಮತ್ತು ಅಪ್ಶಿನ್ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಹುಂಡಿ ಎಣಿಕೆ ಲೂಟಿ ಮಧ್ಯೆ ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ

ಆದರೆ ದೂರು ದಾಖಲಾಗಿ ದಿನಗಳೇ ಕಳೆದರೂ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಲೀಕ ಮಹಮದ್ ಅಪನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟ್ಯಂತರ ರೂಪಾಯಿ ಕಳೆದುಕೊಂಡು ಕಂಗಾಲಾಗಿರುವ ತಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಪೊಲೀಸ್ ಉನ್ನತಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ