Kannada News » Karnataka » Dog lying on the bed photo viral of a childrens ward chitradurga district hospital
ಚಿತ್ರದುರ್ಗ ಜಿಲ್ಲಾಸ್ಪತ್ರೆ ಅವ್ಯವಸ್ಥೆ: ಮಕ್ಕಳ ವಾರ್ಡ್‌ನ ಬೆಡ್ ಮೇಲೆ ಮಲಗಿರುವ ನಾಯಿ! ಫೋಟೋ ವೈರಲ್
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ನಾಯಿ ಮಲಗಿರುವ ಫೋಟೋ ವೈರಲ್
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ನಾಯಿ ಮಲಗಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಂತೆ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಹೊಂದಿದೆ ಎಂಬುದಾಗಿ ಜನರು ಆಗ್ರಹಿಸುತ್ತಿದ್ದಾರೆ.
ಚಿತ್ರದುರ್ಗ: ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ನಾಯಿ ಮಲಗಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಂತೆ ಜಿಲ್ಲಾಸ್ಪತ್ರೆ ಅವ್ಯವಸ್ಥೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅವರ ಬೇಜವಾಬ್ದಾರಿಯೇ ಇದಕ್ಕೆಲ್ಲ ಕಾರಣ ಎಂದು ನಗರದ ಜನರು ಆಕ್ರೋಶ ಹೊರಹಾಕಿದ್ದಾರೆ.
ಮೊದಲೇ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಬೆಡ್ ಕೊರತೆ ಇದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಾರೆ. ಆದರೆ ಇದೀಗ ಬೆಡ್ ಮೇಲೆ ನಾಯಿ ಮಲಗಿದೆ. ಅನಾರೋಗ್ಯದಿಂದ ಬಂದ ಮಕ್ಕಳು ಮಲಗುವ ಬೆಡ್ ಮೇಲೆ ನಾಯಿ ಮಲಗಿರುವುದು ಆಸ್ಪತ್ರೆಯ ಅವ್ಯವಸ್ಥೆಯನ್ನು ತೋರುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನ ಕಾಣುತ್ತಿದೆ ಎಂದು ಅಧಿಕಾರಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.