ಚಿತ್ರದುರ್ಗ: ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ನಾಯಿ ಮಲಗಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಂತೆ ಜಿಲ್ಲಾಸ್ಪತ್ರೆ ಅವ್ಯವಸ್ಥೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅವರ ಬೇಜವಾಬ್ದಾರಿಯೇ ಇದಕ್ಕೆಲ್ಲ ಕಾರಣ ಎಂದು ನಗರದ ಜನರು ಆಕ್ರೋಶ ಹೊರಹಾಕಿದ್ದಾರೆ.
ಮೊದಲೇ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಬೆಡ್ ಕೊರತೆ ಇದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಾರೆ. ಆದರೆ ಇದೀಗ ಬೆಡ್ ಮೇಲೆ ನಾಯಿ ಮಲಗಿದೆ. ಅನಾರೋಗ್ಯದಿಂದ ಬಂದ ಮಕ್ಕಳು ಮಲಗುವ ಬೆಡ್ ಮೇಲೆ ನಾಯಿ ಮಲಗಿರುವುದು ಆಸ್ಪತ್ರೆಯ ಅವ್ಯವಸ್ಥೆಯನ್ನು ತೋರುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನ ಕಾಣುತ್ತಿದೆ ಎಂದು ಅಧಿಕಾರಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್
ಇದನ್ನೂ ಓದಿ: ಈ ಜನರಿಗೆ ರೋಗ ಕೊಡದೇ ಕಾಪಾಡೋ ದೇವ್ರೆ; ಉತ್ತರ ಕನ್ನಡ ಜಿಲ್ಲೆಗೆ ಒಂದಾದ್ರೂ ಒಳ್ಳೇ ಆಸ್ಪತ್ರೆ ಬೇಡ್ವಾ?
ಇದನ್ನೂ ಓದಿ: ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಬೆನ್ನಲ್ಲೇ ತಾಲೂಕಾಸ್ಪತ್ರೆ ಆರೋಗ್ಯ ಸಚಿವರ ದಿಢೀರ್ ಭೇಟಿ