ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್​ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಶ್ರೀನಿವಾಸ್

ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್​ಪೇಟೆ ಠಾಣೆಯಲ್ಲಿ ಪ್ರತ್ಯೇಕವಾಗಿ 3 ಎಫ್​ಐಆರ್​ಗಳು ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ.​

ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್​ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಶ್ರೀನಿವಾಸ್
ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್​ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಶ್ರೀನಿವಾಸ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 27, 2024 | 3:28 PM

ಬೆಂಗಳೂರು, ಜುಲೈ 27: ಬೇರೆ ರಾಜ್ಯದಿಂದ ಬೆಂಗಳೂರಿಗೆ ನಾಯಿ (d0g) ಮಾಂಸ ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್​ಗೆ (Abdul Razack) ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ. ಪ್ರಕರಣ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ​ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ 12 ಜನರಿಗೆ ಮಾಂಸ ಮಾರಾಟದ ಲೈಸೆನ್ಸ್ ಕೊಟ್ಟಿದ್ದೇವೆ. ಅವರನ್ನ ಭೇಟಿ ನೀಡಿ ಮಾಹಿತಿ ನೀಡುವುದಕ್ಕೆ ಹೇಳಿದ್ದೇವೆ. ಒಂದು ವೇಳೆ ಇಂದು ಆ 12 ಜನ ಹಾಜರಾಗದಿದ್ದರೆ ನೋಟಿಸ್ ಕೊಡುತ್ತೇವೆ. ವಿಚಾರಣೆಗೆ ಬಾರದಿದ್ದರೆ 12 ಜನರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯೇಕವಾಗಿ 3 ಎಫ್​ಐಆರ್ ದಾಖಲು

ಪ್ರಜಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಟನ್​ಪೇಟೆ ಠಾಣೆಯಲ್ಲಿ ಪ್ರತ್ಯೇಕವಾಗಿ 3 ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ರಮವಾಗಿ ಮಾಂಸ ಮಾರಾಟದ ಬಗ್ಗೆ, ಗುಂಪುಗೂಡಿ ಗಲಾಟೆ ಮಾಡಿದ್ದ ಆರೊಪದಡಿ ಮತ್ತು ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಮೂರನೇ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿದೆಯಾ? ರಾಜಸ್ಥಾನದಿಂದ ಬಂದ ಮಾಂಸದ ಬಾಕ್ಸ್​ಗೆ ತಡೆ

ಸದ್ಯ ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ. ಹೀಗಾಗಿ ಸ್ಯಾಂಪಲ್​ಗಳನ್ನ ಲ್ಯಾಬ್​ಗೆ ಕಳಿಸಿದ್ದೇವೆ. ರಿಪೋರ್ಟ್ ಬಂದ ಮೇಲೆ ಖಂಡಿತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?

ನಾಯಿ ಮಾಂಸ ಮಾರಾಟ ವಿಚಾರವಾಗಿ ನಗರದಲ್ಲಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು, ಇದರ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ‌ ಇಲ್ಲ. ಅಧಿಕಾರಿಗಳು ತನಿಖೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಯಿ ಮಾಂಸ ಸಾಗಾಟ ಪ್ರಕರಣ: ಠಾಣೆಯಲ್ಲಿ ಹಿಂದೂ ಮುಖಂಡ ಪುನೀತ್​ ಕೆರೆಹಳ್ಳಿ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್

ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಇಳಿಸಿರುವ ಲೋಡ್​ಗಟ್ಟಲೇ ಬಾಕ್ಸ್​ನಲ್ಲಿ ಕುರಿ ಮಾಂಸದ ಜೊತೆ ನಾಯಿ ಮಾಂಸ ಮಿಕ್ಸ್ ಆಗಿದ್ದು, ಇದೇ ಮಾಂಸವನ್ನ ನಗರದ ಹೋಟೆಲ್​ಗಳಿಗೆ ಪೂರೈಕೆ ಆಗ್ತಿದೆ ಅನ್ನೋ ಆರೋಪ ಕೇಳಿ ಬಂದಿತ್ತು.

ನಿನ್ನೆ ಜೈಪುರದಿಂದ ಬಾಕ್ಸ್​ಗಳನ್ನ ತಂದು ಇಳಿಸ್ತಿದ್ದಂತೆ ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಕುರಿ ಮಾಂಸ 700 ರಿಂದ 800 ರೂ. ಮಾರಾಟ ಆಗುತ್ತಿದೆ. ಆದರೆ ರಾಜಸ್ಥಾನದ ಮಾಂಸ ಕೇವಲ 500 ರೂಪಾಯಿಗೆ ಒಂದು ಕೆಜಿ ಮಾರಾಟ ಆಗ್ತಿದ್ದು ಇದು ಹಲವು ಅನುಮಾನಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:26 pm, Sat, 27 July 24

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್