ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ; ಕರ್ನಾಟಕ ಹೈಕೋರ್ಟ್

| Updated By: ಗಣಪತಿ ಶರ್ಮ

Updated on: Jun 27, 2023 | 9:11 PM

ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ; ಕರ್ನಾಟಕ ಹೈಕೋರ್ಟ್
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ (Income Tax Exemption) ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಂಗಳವಾರ ಆದೇಶ ನೀಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ತೆರಿಗೆ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಜತೆಗೆ, ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ ಎಂದು ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ?

ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆ ನೀಡಿದ ವಿಚಾರವಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್​ಗೆ ತೆರಿಗೆ ವಿನಾಯಿತಿ ನೀಡಲಾಗಿತ್ತು. 27.23 ಕೋಟಿ ಹಣ ದೇಣಿಗೆ ನೀಡಲಾಗಿದೆ ಎಂದು ಟ್ರಸ್ಟ್ ಘೋಷಿಸಿತ್ತು. ಆದರೆ, ಈ ದೇಣಿಗೆಗೆ ತೆರಿಗೆ ವಿನಾಯಿತಿ ನೀಡಲು ಐಟಿ ಇಲಾಖೆ ನಿರಾಕರಿಸಿತ್ತು. ಇದರ ವಿರುದ್ಧ ಟ್ರಸ್ಟ್​​, ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿತ್ತು. ಅದನ್ನು ಪರಿಗಣಿಸಿದ್ದ ಮೇಲ್ಮನವಿ ಪ್ರಾಧಿಕಾರ ತೆರಿಗೆ ವಿನಾಯಿತಿ ನೀಡಲು ಆದಾಯ ತೆರಿಗೆ ಇಲಾಖೆಗೆ ಆದೇಶಿಸಿತ್ತು.

ಇದನ್ನೂ ಓದಿ: Karnataka High Court: ಸಾರ್ವಜನಿಕರ ಹಣದಲ್ಲಿ ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಅವಕಾಶ ನೀಡುವಂತಿಲ್ಲ: ಹೈಕೋರ್ಟ್

ಮೇಲ್ಮನವಿ ಪ್ರಾಧಿಕಾರ ನೀಡಿದ್ದ ಆದೇಶವನ್ನು ಆದಾಯ ತೆರಿಗೆ ಇಲಾಖೆ ಹೈಕೋರ್ಟ್​​ನಲ್ಲಿ ಪ್ರಶ್ನಿಸಿತ್ತು. ಇದನ್ನು ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, ತೆರಿಗೆ ವಿನಾಯಿತಿ ನೀಡುವಂತೆ ಆದೇಶ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ