ಹೆದರುವುದು ಬೇಡ, ಆತ್ಮಸ್ಥೈರ್ಯದಿಂದಿರಿ; ಕೊರೊನಾ ಗೆದ್ದು ಬಂದ ಒಂದೇ ಕುಟುಂಬದ 17 ಮಂದಿ

ಕೊರೊನಾ ಸೋಂಕಿನಿಂದ ಗೆದ್ದು ಬಂದ ಇಡೀ ಕುಟುಂಬ ಜನರಿಗೆ ಧೈರ್ಯ ತುಂಬುತ್ತಿದೆ. ಕೊರೊನಾ ಸೋಂಕಿಗೆ ಹೆದರಬೇಡಿ ಎಂದು ಎಚ್ಚರಿಕೆಯ ಮಾತುಗಳನ್ನಾಡಿ ಧೈರ್ಯ ಹೇಳುತ್ತಿದೆ.

ಹೆದರುವುದು ಬೇಡ, ಆತ್ಮಸ್ಥೈರ್ಯದಿಂದಿರಿ; ಕೊರೊನಾ ಗೆದ್ದು ಬಂದ ಒಂದೇ ಕುಟುಂಬದ 17 ಮಂದಿ
ಅವಿಭಕ್ತ ಕುಟುಂಬ
Follow us
shruti hegde
|

Updated on: May 07, 2021 | 4:29 PM

ಮೈಸೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಅದೆಷ್ಟೋ ಜನ ಕೊರೊನಾ ಸೋಂಕಿಗೆ ಹೆದರಿದ್ದಾರೆ. ಹೀಗಿರುವಾಗ ಕೊರೊನಾ ಸೋಂಕಿನಿಂದ ಗೆದ್ದು ಬಂದ 17 ಜನರ ಅವಿಭಕ್ತ ಕುಟುಂಬ ಜನರಿಗೆ ಧೈರ್ಯ ತುಂಬುತ್ತಿದೆ. ಕೊರೊನಾ ಸೋಂಕಿಗೆ ಹೆದರಬೇಡಿ ಎಂದು ಧೈರ್ಯ ಹೇಳಿದೆ.

ಕಳೆದ ತಿಂಗಳ 24 ರಂದು ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿರುವ ರೈತ ಸಂಘದ ರಾಜ್ಯಾಧ್ಯಕ್ಷ ನಾಗೇಂದ್ರ ಅವರ ಸಹೋದರ ಲಿಂಗರಾಜೇಗೌಡ ಎಂಬುವರಿಗೆ ಪಾಸಿಟಿವ್ ವರದಿ ದಾಖಲಾಗಿತ್ತು. ತದನಂತರ ಪರೀಕ್ಷೆಗೆ ಒಳಪಟ್ಟ ಕುಟುಂಬದ 17 ಮಂದಿಗೂ ಕೊರೊನಾ ಸೋಂಕು ತಗುಲಿತ್ತು. ಆ ಬಳಿಕ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಲೀಂ ಪಾಷಾ ನೇತೃತ್ವದ ತಂಡ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವೈದ್ಯರ ತಂಡ ಮನೆಯವರಿಗೆ ಆತ್ಮಸ್ಥೈರ್ಯ ತುಂಬಿತ್ತು. ಪ್ರತಿದಿನವೂ ಕೂಡಾ ವೈದ್ಯರು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದರು.

ವಾಸದ ಮನೆಯಲ್ಲೇ ಹೋಮ್ ಐಸೋಲೇಷನ್ ಮಾಡಲಾಗಿತ್ತು. ಇದೀಗ ಹದಿನೇಳು ಮಂದಿಯೂ ಮಹಾಮಾರಿ ಕೊರೊನಾದಿಂದ ಗೆದ್ದು ಬಂದಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಕೂಡಲೇ ಭಯ ಪಡುವುದು ಬೇಡ. ಆತ್ಮಸ್ಥೈರ್ಯದಿಂದ ಎದುರಿಸಿದರೆ ಕೊರೊನಾದಿಂದ ಮುಕ್ತರಾಗಬಹುದು ಎಂದು ಕುಟುಂಬದ ಸದಸ್ಯರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮುಚ್ಚಿಟ್ಟ ಗದಗ ಜಿಲ್ಲಾಡಳಿತ; ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್