Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದರಬೇಡಿ, ಬ್ಲ್ಯಾಕ್ ಫಂಗಸ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದಿಲ್ಲ: ನೇತ್ರ ತಜ್ಞ ಡಾ.ಭುಜಂಗಶೆಟ್ಟಿ

Black Fungus treatment hospitals in Karnataka: ಕೊವಿಡ್ ಸೋಂಕಿನ ನಂತರ ವಿರಳವಾಗಿ ಕಂಡುಬರುತ್ತಿರುವ ಬ್ಲಾಕ್ ಫಂಗಸ್​ ಸೋಂಕಿಗೆ ರಾಜ್ಯದಲ್ಲಿ ಎಲ್ಲೆಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ.

ಹೆದರಬೇಡಿ, ಬ್ಲ್ಯಾಕ್ ಫಂಗಸ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದಿಲ್ಲ: ನೇತ್ರ ತಜ್ಞ ಡಾ.ಭುಜಂಗಶೆಟ್ಟಿ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on: May 17, 2021 | 3:10 PM

ಕೊರೊನಾ ಮೇಲಿಂದ ಮೇಲೆ ನೀಡುತ್ತಿರುವ ಆಘಾತಕ್ಕೆ ಜನಸಾಮಾನ್ಯರು ಹೈರಾಣಾಗಿದ್ದಾರೆ. ಎರಡನೇ ಅಲೆಯ ಸೋಂಕಿನಿಂದ ಹೇಗೋ ಬಚಾವಾದೆ ಎಂದು ನಿಟ್ಟುಸಿರು ಬಿಡುವವರನ್ನೂ ಈಗ ಮತ್ತೊಂದು ಸಮಸ್ಯೆ ಬೆಂಬತ್ತಿ ಕಾಡಲಾರಂಭಿಸಿದೆ.  ಅದೇ ಬ್ಲಾಕ್ ಫಂಗಸ್. ನಮ್ಮ ರಾಜ್ಯದಲ್ಲೂ ಬ್ಲಾಕ್​ ಫಂಗಸ್​ನಿಂದ ಹಲವು ಬಳಲುತ್ತಿದ್ದು ಇಗಾಗಲೇ ಕೆಲವು ತಮ್ಮ ಪ್ರಾಣಬಿಟ್ಟಿದ್ದಾರೆ. ಕೊವಿಡ್ ಸೋಂಕು ತಗುಲಿದ ಮಧುಮೇಹಿಗಳಲ್ಲಿ ಅತಿಯಾದ ಸ್ಟಿರಾಯ್ಟ್ ಬಳಕೆಯಿಂದ ಬ್ಲಾಕ್ ಫಂಗಸ್ ಸೋಂಕು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ವೈದ್ಯರು. ಆದರೆ ಕೊಂಚ ನೆಮ್ಮದಿಯ ವಿಷಯವೇನೆಂದರೆ ಕೊವಿಡ್ ನಂತರ ಕಂಡುಬರುವ ಬ್ಲ್ಯಾಕ್ ಫಂಗಸ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದಿಲ್ಲ. ರೋಗ ನಿರೋಧಕ ಶಕ್ತಿ ಚೆನ್ನಾಗಿದ್ದರೆ ಬ್ಲ್ಯಾಕ್ ಫಂಗಸ್ ಸೋಂಕು ಬರುವುದಿಲ್ಲ ಎಂದು ಬೆಂಗಳೂರಿನಲ್ಲಿ ಖ್ಯಾತ ನೇತ್ರ ತಜ್ಞ ಡಾ.ಭುಜಂಗಶೆಟ್ಟಿ ತಿಳಿಸಿದ್ದಾರೆ.

ಫಂಗಸ್ ಅನ್ನೋದು ಗಾಳಿಯಲ್ಲಿಯೂ ಇರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ಅಟ್ಯಾಕ್ ಮಾಡುತ್ತದೆ. ಇದು ಮೊದಲಿಗೆ ಕಣ್ಣಿಗೆ ಅಟ್ಯಾಕ್ ಆಗುತ್ತದೆ. ಕಣ್ಣಿನ ನೋವು, ಊತ ಬರುವುದು ಆಗುತ್ತದೆ. ಕಣ್ಣು, ಮುಗಿನ ಬಳಿಕ ಮೆದುಳಿಗೆ ತಾಗುತ್ತದೆ. ಹೀಗಾಗಿ ಆರಂಭದಲ್ಲೇ ಎಚ್ಚರಿಕೆ ವಹಿಸಬೇಕಾಗಿದೆ. ಈ ಬಗ್ಗೆ ಪತ್ತೆ ಹಚ್ಚುವುದಕ್ಕೆ ಸಮಿತಿಯನ್ನು ರಚಿಸಿದ್ದೇವೆ. ವೆಂಟಿಲೇಟರ್​ಗಳು ಸ್ವಚ್ಛವಾಗಿಲ್ಲದೆ ಹರಡುತ್ತಿರುವ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಅಲ್ಲದೇ, ಒಬ್ಬರಿಂದ ಮತ್ತೊಬ್ಬರಿಗೆ ಆಕ್ಸಿಜನ್ ಮಾಸ್ಕ್ ಹಾಕುವದರಿಂದ ಫಂಗಸ್ ಹರಡಬಹುದು. ಟ್ಯಾಪ್ ನೀರು ಬಳಕೆ ಮಾಡುವ ಕಾರಣವೂ ಫಂಗಸ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎನ್ನುತ್ತಾರೆ ಕೆಲವು ವೈದ್ಯರು. ಈ ಎಲ್ಲದರ ಕುರಿತು ವರದಿಯನ್ನು ತರಿಸಿಕೊಳ್ಳುತ್ತಿರುವ ಕರ್ನಾಟಕ ಸರ್ಕಾರ, ಉಚಿತ ಚಿಕಿತ್ಸೆ ನೀಡುವ ಕುರಿತು ಇಂದು ನಿರ್ಧಾರ ಕೈಗೊಳ್ಳಲಿದೆ.

ರಾಜ್ಯದಲ್ಲಿ ಬ್ಲಾಕ್ ಫಂಗಸ್​ ಸೋಂಕಿಗೆ ಚಿಕಿತ್ಸೆ ಎಲ್ಲಿ ನೀಡಲಾಗುತ್ತದೆ? ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ, ಕಲಬುರಗಿಯ ಜಿಮ್ಸ್, ಹುಬ್ಬಳ್ಳಿಯ ಕಿಮ್ಸ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್​ ಸೋಂಕಿಗೆ ಚಿಕಿತ್ಸೆ ನೀಡುವುದಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಆಯಾ ಸ್ಥಳದಲ್ಲೇ ಬ್ಲ್ಯಾಕ್ ಫಂಗಸ್​ಗೆ ಚಿಕಿತ್ಸೆ ನೀಡಲಾಗುತ್ತದೆ.  ಸದ್ಯ ನಮ್ಮ ರಾಜ್ಯದಲ್ಲಿ ಹೋಮ್ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಸ್ಟೀರಾಯ್ಡ್ ನೀಡುತ್ತಿಲ್ಲ.

ಇದನ್ನೂ ಓದಿ: Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ

ಕೊವಿಡ್ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ಲಸಿಕೆ ನೀಡಿ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ (Dont Be Afraid of Black Fungus Infection it will not spread one tone say eye specialist Dr Bhujanga Shetty)

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು