ಕೋಲಾರ ಕುರುಬರ ಸಂಘದಲ್ಲಿ ಕೈ ವಿರೋಧಿ ಭಾವನೆ ಇದೆ: ರಾಜಕೀಯವಾಗಿ ಬಳಸಿಕೊಳ್ಳಿ- ಕಾರ್ಯಕರ್ತರಿಗೆ ಬಿ ಎಲ್​ ಸಂತೋಷ್ ಸೂಚನೆ

ಕೋಲಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವ ಬಗ್ಗೆ ಹೆಚ್ಚಿನ ಒತ್ತಡ ಬೇಡ, ಯಾರೇ ಬಂದರೂ ನಮ್ಮ ಸಂಘಟನೆ ಗಟ್ಟಿ ಇದ್ದರೆ ಗೆಲುವು ನಮ್ಮದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದ್ದಾರೆ.

ಕೋಲಾರ ಕುರುಬರ ಸಂಘದಲ್ಲಿ ಕೈ ವಿರೋಧಿ ಭಾವನೆ ಇದೆ: ರಾಜಕೀಯವಾಗಿ ಬಳಸಿಕೊಳ್ಳಿ- ಕಾರ್ಯಕರ್ತರಿಗೆ ಬಿ ಎಲ್​ ಸಂತೋಷ್ ಸೂಚನೆ
ಬಿ ಎಲ್ ಸಂತೋಷ್ Image Credit source: Deccan Herald
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 20, 2023 | 12:55 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಬಿಜೆಪಿ (BJP) ರಾಷ್ಟ್ರೀಯ ನಾಯಕರು ಒಬ್ಬರ ಹಿಂದೆ ಒಬ್ಬರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದರ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santosh) ರಾಜ್ಯದಲ್ಲಿ ಬೀಡು ಬಿಟ್ಟಿದ್ದು, ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸ್ಪರ್ಧಿಸುವ ಬಗ್ಗೆ ಹೆಚ್ಚಿನ ಒತ್ತಡ ಬೇಡ ಎಂದು ಬಿ ಎಲ್ ಸಂತೋಷ್ ಹೇಳಿದ್ದಾರೆ.

ನಿನ್ನೆ (ಜ.19) ರಂದು ಕೋಲಾರದಲ್ಲಿ ನಡೆಸಿದ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು ಯಾರೇ ಬಂದರೂ ನಮ್ಮ ಸಂಘಟನೆ ಗಟ್ಟಿ ಇದ್ದರೆ ಗೆಲುವು ನಮ್ಮದೆ. ಮನೆ ಮನೆಗೂ ಪಕ್ಷದ ಕಾರ್ಯಕರ್ತರು ಹೋಗಬೇಕು. ಪ್ರತಿ ಮನೆಯ ಮೇಲೂ ಬಿಜೆಪಿ ಬಾವುಟ ನೆಟ್ಟಿ ಎಂದು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಜಿಲ್ಲಾ ಕುರುಬ ಸಂಘದಲ್ಲಿ ಬಿರುಕೋ ಬಿರುಕು!

ಜಿಲ್ಲೆಯಲ್ಲಿ ಎಲ್ಲ ಸಮುದಾಯಗಳ ಸಭೆ ನಡೆಸಿ. ಸಮುದಾಯದ ಪ್ರಮುಖರನ್ನು ಭೇಟಿಯಾಗಿ ಚರ್ಚಿಸಿ. ಸಣ್ಣ ಸಮುದಾಯಗಳನ್ನೂ ಕಡೆಗಣಿಸವುದು ಬೇಡ. ಹೋಬಳಿ ಮಟ್ಟದಲ್ಲಿ ಜಾತಿ ಸಮಾವೇಶಗಳನ್ನು ಮಾಡಿ. ಕಾಂಗ್ರೆಸ್ ಹಾಗೂ ಜೆಡಿಎಸ್​ನ ಸ್ಥಳಿಯ ನಾಯಕರನ್ನು ಗುರುತಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ. ಈಗಾಗಲೇ ಜಿಲ್ಲಾ ಕುರುಬರ ಸಂಘ ಸೇರಿದಂತೆ ಸ್ಥಳಿಯವಾಗಿ ಸಂಘಗಳಲ್ಲಿ ಕಾಂಗ್ರೆಸ್ ವಿರೋಧಿ ಭಾವನೆ ಇದೆ. ಅದನ್ನು ಸೂಕ್ತ ರೀತಿಯಲ್ಲಿ ರಾಜಕೀಯವಾಗಿ ಬಳಸಿಕೊಳ್ಳಲು ಹೇಳಿದರು.

ಇದನ್ನೂ ಓದಿ: ಚುನಾವಣಾ ವಿಚಾರದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿಜೆಪಿ ವಿರುದ್ಧ ಕಿಡಿಕಾರಿದ ಡಿ ಕೆ ಶಿವಕುಮಾರ್

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಘಟನಾ ಕಾರ್ಯದರ್ಶಿಗಳ ಸಭೆ

ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ನೇತೃತ್ವದಲ್ಲಿ ಸಂಘಟನಾ ಕಾರ್ಯದರ್ಶಿಗಳ ಸಭೆ ಆರಂಭವಾಗಿದೆ. ಬೂತ್ ವಿಜಯ, ವಿಜಯ ಸಂಕಲ್ಪ ಅಭಿಯಾನಗಳ ಅನುಷ್ಠಾನ ಸಭೆಗು ಮುನ್ನ ಮಹತ್ವದ ಸಭೆ ನಡೆಸುತ್ತಿದ್ದಾರೆ. ವಿಜಯ ಸಂಕಲ್ಪ ಮಾದರಿ ಅಭಿಯಾನ ಗುಜರಾತ್ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಯಶಸ್ವಿ ಹಿನ್ನಲೆ ರಾಜ್ಯದಲ್ಲೂ ಸಮರ್ಪಕವಾಗಿ ಜಾರಿಗೆ ತರಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Fri, 20 January 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್