ಗೃಹಲಕ್ಷ್ಮಿ ಯೋಜನೆಯ ಹೊಸ ಅರ್ಜಿ: ಪ್ರತಿ ತಿಂಗಳು 2000 ರೂ. ಬೇಕಿದ್ರೆ ಈ ದಾಖಲೆಗಳನ್ನು ನೀಡಲೇಬೇಕು

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ. ಈಗಾಗಲೇ ಗೃಹ ಜ್ಯೋತಿ ಯೋಜನೆಯನ್ನು ಮರುಪರಿಶೀಲನೆ ಮಾಡಲಾಗಿದ್ದು, ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್​ ಕಾರ್ಡ್​ ನೀಡಲು ರಾಜ್ಯ ಸರ್ಕಾರದ ಮುಂದಾಗಿದೆ. ಇದರ ಬೆನ್ನಲ್ಲೇ ಇದೀಗ ಪ್ರತಿ ತಿಂಗಳು 2000 ನೀರುವ ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆಗೆ ತೀರ್ಮಾನಿಸಿದ್ದು, ಇದಕ್ಕೆ ಹೊಸ ಅರ್ಜಿ ಸಹ ರೆಡಿಯಾಗಿದೆ. ಹಾಗಾದ್ರೆ, ಹೊಸ ಅರ್ಜಿಯಲ್ಲಿ ಏನೆಲ್ಲಾ ಇದೆ? ಫಲಾನುಭವಿಗಳು ಏನೆಲ್ಲಾ ದಾಖಲೆಗಳನ್ನು ನೀಡಬೇಕೆಂಬ ವಿವರ ಇಲ್ಲಿದೆ.

ಗೃಹಲಕ್ಷ್ಮಿ ಯೋಜನೆಯ ಹೊಸ ಅರ್ಜಿ:  ಪ್ರತಿ ತಿಂಗಳು 2000 ರೂ. ಬೇಕಿದ್ರೆ ಈ ದಾಖಲೆಗಳನ್ನು ನೀಡಲೇಬೇಕು
Gruhalakshmi Scheme
Edited By:

Updated on: Oct 09, 2026 | 3:23 PM

ಬೆಂಗಳೂರು, ಅಕ್ಟೋಬರ್ 09): ಕರ್ನಾಟಕ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ರಾಜ್ಯದ ಸುಮಾರು 1.26 ಕೋಟಿ ಫಲಾನುಭವಿಗಳ ದಾಖಲೆಗಳನ್ನು ಈ ಸಂದರ್ಭದಲ್ಲಿ ಮರುಪರಿಶೀಲಿಸಲಾಗುತ್ತದೆ. ಗೃಹಲಕ್ಷ್ಮಿ ಮರುಪರಿಶೀಲನಾ ಕಾರ್ಯ ಶೀಘ್ರವೇ ಆರಂಭಕ್ಕೆ ಸಿದ್ಧತೆ ನಡೆಸಿರುವ ರಾಜ್ಯ ಸರ್ಕಾರ, ಫಲಾನುಭವಿಗಳ ಅರ್ಜಿ ಸಲ್ಲಿಕೆ ಫಾರ್ಮ್ ಅಂತಿಮಗೊಳಿಸಿದೆ. ಚುನಾವಣೆ ಮಾದರಿ ನೀತಿ ಸಂಹಿತೆ ಮುಗಿದ ಬಳಿಕ ಸರ್ವೆ ಆರಂಭ ಆಗುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಯಲ್ಲಿ ಹಲವು ಹೊಸ ಪ್ರಶ್ನೆಗಳ ಸೇರ್ಪಡೆ ಮಾಡಲಾಗಿದೆ. SIR ಮಾದರಿಯಲ್ಲೇ ಗೃಹಲಕ್ಷ್ಮಿ ಮರು ಪರಿಶೀಲನಾ ಅರ್ಜಿ ಇದ್ದು, ಆ್ಯಪ್‌ನಲ್ಲಿ ಸರ್ವೆ ಆದರೂ ಕೂಡ ಆಫ್‌ಲೈನ್ ಮರುಪರಿಶೀಲನಾ ಅರ್ಜಿ ಭರ್ತಿ ಮಾಡಲೇಬೇಕು. ಬ್ಯಾಂಕ್ ಖಾತೆ, ಆಧಾರ್ ಜೋಡಣೆ , ಪಡಿತರ ಚೀಟಿ ಸಂಖ್ಯೆ ಸಂಬಂಧ ಹಲವು ಪ್ರಶ್ನೆ ಸೇರ್ಪಡೆ ಮಾಡಲಾಗಿದೆ.

ಈ ಹಿಂದೆ ಆಗಿದ್ದ ಲೋಪಗಳನ್ನು ಸರಿಪಡಿಸುವತ್ತ ಸರ್ಕಾರ ಗಮನಹರಿಸಿದೆ. ಹೀಗಾಗಿ ಅನ್ಯ ರಾಜ್ಯದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗದಂತೆ ಕ್ರಮ ಕೈಗೊಳ್ಳಲು ಅರ್ಜಿಯಲ್ಲಿ ಹಲವು ಹೊಸ ಪ್ರಶ್ನಾವಳಿಗಳನ್ನು ಕೇಳಲಾಗಿದೆ. ಇನ್ನು ಈ ಹೊಸ ಅರ್ಜಿಯೊಂದಿಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಸರ್ವೇ ಮಾಡಲಿದ್ದು, ಮರುಪರಿಶೀಲನಾ ಕಾರ್ಯದ ಮೇಲೆ ನಿಗಾ ವಹಿಸಲು ಜಿಲ್ಲಾ, ತಾಲೂಕು, GBA ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇನ್ನು ಆ್ಯಪ್ ನಲ್ಲಿ ಸರ್ವೆ ಆದರೂ ಕೂಡ ಆಫ್ ಲೈನ್ ಮರುಪರಿಶೀಲನಾ ಅರ್ಜಿ ಭರ್ತಿ ಕಡ್ಡಾಯಗೊಳಿಸಲಾಗಿದೆ. ಬ್ಯಾಂಕ್ ಖಾತೆ, ಆಧಾರ್ ಜೋಡಣೆ , ಪಡಿತರ ಚೀಟಿ ಸಂಖ್ಯೆ ಸಂಬಂಧ ಹಲವು ಪ್ರಶ್ನೆಗಳನ್ನು ಮರುಪರೀಲನಾ ಅರ್ಜಿಯಲ್ಲಿ ಸೇರ್ಪಡೆ ಮಾಡಲಾಗಿದೆ.

ಇದನ್ನೂ ನೋಡಿ: ದಸರಾ 2026: ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶುಭಸುದ್ದಿ, ಅ.16 ರಿಂದ 27 ರವರೆಗೆ 3,000 ಹೆಚ್ಚುವರಿ ಬಸ್ ಸೇವೆ

ಗೃಹಜ್ಯೋತಿ ಯೋಜನೆಯಲ್ಲಿ ನಡೆದ ಪರಿಶೀಲನೆಯ ಮಾದರಿಯಲ್ಲೇ ಈ ಕಾರ್ಯಾಚರಣೆ ನಡೆಯಲಿದ್ದು, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ಣಗೊಂಡ ಬಳಿಕ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ. ಇಲಾಖೆಯ ಸಿಬ್ಬಂದಿ ಸದ್ಯ ಬೂತ್ ಮಟ್ಟದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ನಂತರ ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ.

ಮರುಪರಿಶೀಲನೆಯ ಸಂದರ್ಭದಲ್ಲಿ ನಿಯೋಜಿತ ಸಿಬ್ಬಂದಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆ-ಮನೆಗೆ ತೆರಳಿ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಲಿದ್ದಾರೆ. ಮಾಹಿತಿಯನ್ನು ಭೌತಿಕ ದಾಖಲೆಗಳ ಜೊತೆಗೆ ಡಿಜಿಟಲ್ ರೂಪದಲ್ಲೂ ದಾಖಲಿಸಲಾಗುತ್ತದೆ. ಫಲಾನುಭವಿಗಳು ನಿಗದಿತ ಸೇವಾ ಕೇಂದ್ರಗಳಿಗೆ ತೆರಳಿ ಕೂಡ ಪರಿಶೀಲನೆ ಪೂರ್ಣಗೊಳಿಸಲು ಅವಕಾಶ ಇರಲಿದೆ.

ಮರುಪರಿಶೀಲನಾ ಅರ್ಜಿಯಲ್ಲಿ ಏನೆಲ್ಲಾ ಇದೆ?

ಈ ಪ್ರಕ್ರಿಯೆ ಹೊಸ ಫಲಾನುಭವಿಗಳನ್ನು ಸೇರ್ಪಡೆ ಮಾಡಲು ಅಲ್ಲ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿರುವವರ ಅರ್ಹತೆ ಮತ್ತು ದಾಖಲೆಗಳನ್ನು ಮಾತ್ರ ಪರಿಶೀಲಿಸಲಾಗುತ್ತದೆ. ದೇಶದ ಯಾವುದೇ ಬ್ಯಾಂಕ್ ಖಾತೆಯಾಗಲಿ ಆದರೆ ಕರ್ನಾಟಕದಲ್ಲಿ ಆ ಬ್ಯಾಂಕ್ ಬ್ರಾಂಚ್ ಇರಬೇಕು. ಫಲಾನುಭವಿಯು ಕರ್ನಾಟಕ ರಾಜ್ಯದ ವ್ಯಾಪ್ತಿಯೊಳಗಿನ ಶಾಖೆಯಲ್ಲಿ ಖಾತೆ ಹೊಂದಿರಬೇಕು. ಬ್ಯಾಂಕ್‌ನಲ್ಲಿ ಸಾಲ ಪಡೆಯದ ಖಾತೆಯ ಅಕೌಂಟ್ ನಂಬರ್ ಗೃಹಲಕ್ಷ್ಮಿ ಯೋಜನೆಗೆ ಕೊಡಬೇಕು. ಜಂಟಿ ಖಾತೆ ಕೊಡಬಾರದು. ಪಡಿತರ ಚೀಟಿ ಸಂಖ್ಯೆ ಕಡ್ಡಾಯ. ಮೊಬೈಲ್‌ಗೆ ಆಧಾರ್ ಸಂಖ್ಯೆ ಆಗದವರು, ಮೊಬೈಲ್‌ಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯ. ಇಂತಹ ಹಲವು ಅಂಶಗಳನ್ನು ಅರ್ಜಿ ಒಳಗೊಂಡಿದೆ. ಮುಖ್ಯಮಂತ್ರಿಗಳಿಂದ ಅಧಿಕೃತ ಸೂಚನೆ ಸಿಕ್ಕ ಬಳಿಕ ಗೃಹಲಕ್ಷ್ಮಿ ಮರುಪರಿಶೀಲನಾ ಅರ್ಜಿ ಸರ್ವೆ ಆರಂಭ ಆಗಲಿದೆ.

ಫಲಾನುಭವಿಗಳಿಗೆ ಏನೆಲ್ಲಾ ಕಡ್ಡಾಯ?

  • ದೇಶದ ಯಾವುದೇ ಬ್ಯಾಂಕ್ ಖಾತೆಯಾಗಲಿ ಆದರೆ ಕರ್ನಾಟಕದಲ್ಲಿ ಬ್ಯಾಂಕ್ ಖಾತೆ ಇರಬೇಕು.
  •  ಬ್ಯಾಂಕ್ ನಲ್ಲಿ ಸಾಲ ಪಡೆಯದ ಖಾತೆಯ ಅಕೌಂಟ್ ನಂಬರ್ ಗೃಹಲಕ್ಷ್ಮೀ ಯೋಜನೆಗೆ ಕೊಡಬೇಕು
  •  ಜಂಟಿ ಖಾತೆ ಕೊಡಬಾರದು, ವೈಯಕ್ತಿಕ ಖಾತೆ ಇರಬೇಕು.
  • ಪಡಿತರ ಚೀಟಿ ಸಂಖ್ಯೆ ಕಡ್ಡಾಯ
  • ಮೊಬೈಲ್ ಗೆ ಆಧಾರ್ ಸಂಖ್ಯೆ ಆಗದವರು. ಮೊಬೈಲ್ಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯ
  • ನಿವೃತ್ತಿ ಪಿಂಚಣಿ ಪಡೆಯುತ್ತಿದ್ದರೆ, ಮಾಹಿತಿ ನೀಡುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
Loading...
Unable to load recommendations.
Follow Us