ಕೇಂದ್ರ ಕಾರಾಗೃಹದಲ್ಲಿ ವರದಕ್ಷಿಣೆ ಕಿರುಕುಳ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು
ಪ್ರದೀಪ್ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೇ 10 ರಂದು ಜೈಲು ಸೇರಿದ್ದರು. ತನ್ನ ಸೆಲ್ನಲ್ಲಿ ಬೆಡ್ ಶೀಟ್ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಂಡಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು: ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಜೈಲುವಾಸಿಯಾಗಿದ್ದ 33 ವರ್ಷದ ಪ್ರದೀಪ್ ಕುಮಾರ್ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರದೀಪ್ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೇ 10 ರಂದು ಜೈಲು ಸೇರಿದ್ದರು. ತನ್ನ ಸೆಲ್ನಲ್ಲಿ ಬೆಡ್ ಶೀಟ್ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮಂಡಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಕ್ಕೆ ವೈದ್ಯರು ಹಾಗೂ ಸರ್ಕಾರದ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಮೃತರ ಕಡೆಯವರು ಆಸ್ಪತ್ರೆ ಹಾಗೂ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾರ್ವಜನಿಕರು ಆಸ್ಪತ್ರೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆಸ್ಪತ್ರೆಯ ಮುಖ್ಯಗೇಟ್ ನಿಂದಲೇ ಜನರನ್ನು ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ. ರೋಗಿಗಳಿಗೆ ಮಾತ್ರ ಆಸ್ಪತ್ರೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ನಿರ್ಧಾರಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮಂಡ್ಯ ಕೊವಿಡ್ ಚಿಕಿತ್ಸಾ ಕೇಂದ್ರದ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾದ ವೃದ್ಧೆ