ಬೆಂಗಳೂರು: ರಾಜಭವನದ ಅಂಗಳದಲ್ಲಿ ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸಿ, ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ

Dr Ambedkar Statue: ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸನ್ಮಾನ್ಯ ವಿಧಾನಪರಿಷತ್ ಸಭಾಪತಿ ಶ್ರೀ ರಘುನಾಥ್‌ರಾವ್ ಮಲ್ಕಾಪೂರೆ, ಸನ್ಮಾನ್ಯ ಮುಖ್ಯಮಂತ್ರಿಗಳು, ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೂ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಬೆಂಗಳೂರು: ರಾಜಭವನದ ಅಂಗಳದಲ್ಲಿ ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸಿ, ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ
ರಾಜಭವನದ ಅಂಗಳದಲ್ಲಿ ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸಿ, ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 30, 2022 | 7:27 PM

ಬೆಂಗಳೂರು: ‘ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ ಆಶಯಗಳನ್ನು ನಾಡಿನ ಜನರೆದೆಯಲ್ಲಿ ಬಿತ್ತಿದ ಡಾ.ಬಿ.ಆರ್.ಅಂಬೇಡ್ಕರ ಅವರು ಬರೀ ವ್ಯಕ್ತಿಯಲ್ಲ, ಒಂದು ಶಕ್ತಿ. ಅನೇಕ ರಾಷ್ಟ್ರಗಳ ಕಾನೂನು ಅಧ್ಯಯನ ನಡೆಸಿ ಸಮಾನತೆಯ ಸಂದೇಶದ ಸಂವಿಧಾನ ನಿರ್ಮಿಸಿದ ಕಾರಣಕ್ಕೆ ಡಾ.ಅಂಬೇಡ್ಕರ ಇಡೀ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಏಪ್ರಿಲ್ 14ರಂದು ಆಚರಿಸಲ್ಪಡುವ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿಯನ್ನು ವಿಶ್ವ ಜ್ಞಾನದ ದಿನವನ್ನಾಗಿ ಆಚರಿಸಲು ಅವರ 125ನೇ ಜನ್ಮದಿನದ ಮುನ್ನಾ ದಿನದಂದು ಯುನೈಟೆಡ್ ನೇಷನ್ ಘೋಷಿಸಿದ್ದು ಈ ವೇಳೆ ಸ್ಮರಣೀಯ.

ಇಂತಹ ಮಹಾನ್‌ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಯು ಈಗ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲೂ ನಿರ್ಮಾಣಗೊಂಡಿದೆ.

ಇದನ್ನೂ ಓದಿ:

PSI Recruitment Scam: ಪಿಎಸ್ಐ ‌ನೇಮಕಾತಿ -ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾ ನಾಯಕ್ ಹೈದ್ರಾಬಾದ್ ನಲ್ಲಿ ಬಂಧನ!

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಸೋಮವಾರ ಸಾಮಾಜಿಕ ನ್ಯಾಯದ ಹರಿಕಾರ ಡಾ.ಅಂಬೇಡ್ಕರ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ ನಾಡಿನ ಜನತೆಗೆ ಸಮರ್ಪಿಸಿದರು.

ಡಾ.ಬಿ.ಆರ್.ಅಂಬೇಡ್ಕರ ಅವರ 125ನೇ ಜಯಂತಿ ವರ್ಷಾಚರಣೆಯ ಸಂದರ್ಭದಿಂದಲೇ ದೇಶದೆಲ್ಲೆಡೆ ಡಾ.ಅಂಬೇಡ್ಕರ ಅವರ ಬದುಕು-ಸಾಧನೆ ಸ್ಮರಣೆಯ ಕಾರ್ಯಕ್ರಮಗಳು ವಿಭಿನ್ನವಾಗಿ ನಡೆಯುತ್ತಲೇ ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಂತೆಯೇ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲಿಯೂ ಡಾ.ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸುವ ಮೂಲಕ ರಾಜಭವನವು ಈ ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶವನ್ನು ರವಾನಿಸಿ, ಭಾರತ ರತ್ನಕ್ಕೆ ತನ್ನ ಗೌರವವನ್ನು ಸಮರ್ಪಿಸಿದೆ.

ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸನ್ಮಾನ್ಯ ವಿಧಾನಪರಿಷತ್ ಸಭಾಪತಿ ಶ್ರೀ ರಘುನಾಥ್‌ರಾವ್ ಮಲ್ಕಾಪೂರೆ, ಸನ್ಮಾನ್ಯ ಮುಖ್ಯಮಂತ್ರಿಗಳು, ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೂ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಇದನ್ನೂ ಓದಿ:

ಶಾಸಕ ಜಮೀರ್ ಅಹಮದ್ ಮನೆ ಖರೀದಿಗೆ, ಮೂರೂವರೆ ಕೋಟಿ ಸಾಲ ಕೊಟ್ಟಿದ್ದು ಉರುಳಾಯ್ತಾ? ಇಡಿ ದಾಳಿ ಬಗ್ಗೆ ಕೆಜಿಎಫ್ ಬಾಬು ಹೇಳಿದ್ದೇನು?

Published On - 7:21 pm, Mon, 30 May 22

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ