ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ: ಮೈಸೂರು ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

ಪತ್ನಿ ಮಂಡ್ಯದಲ್ಲಿ ಡಿಸಿಯಾಗಿರುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ಪತ್ನಿ ಮನೆ ಮೊದಲೂ ಸಹ ಹತ್ತಿರವೇ ಇತ್ತು. ಬೆಂಗಳೂರಿನಿಂದ ಮಂಡ್ಯ ದೂರವೇನಲ್ಲ. ಈಗ ಇನ್ನಷ್ಟು ಹತ್ತಿರಕ್ಕೆ ಬಂದಿದ್ದೇವೆ ಎಂದು ನಗುತ್ತಲೇ ಮೈಸೂರಿಗೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ: ಮೈಸೂರು ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್
ಡಾ.ಗೌತಮ್ ಬಗಾದಿ
Follow us
| Updated By: guruganesh bhat

Updated on: Jun 06, 2021 | 5:28 PM

ಮೈಸೂರು: ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಗಾದಿ ಗೌತಮ್ ಅಧಿಕಾರ ಸ್ವೀಕರಿಸಿದರು. ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗೈರಾದ ಕಾರಣ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ದೊಡ್ಡ ಸವಾಲಾಗಿದೆ. ಜಿಲ್ಲಾಧಿಕಾರಿಯಾಗಿ ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ. ನನ್ನ ಜೀವನದಲ್ಲಿ ಎಂದೂ ವಿವಾದಕ್ಕೆ ಒಳಗಾಗಿಲ್ಲ. ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ. ನಾನು ಲೋ ಫ್ರೋಫೈಲ್ ಅಧಿಕಾರಿ. ನನ್ನ 13 ವರ್ಷದ ಸರ್ವಿಸ್‌ನಲ್ಲಿ ಬಹುತೇಕರು ನನ್ನ ಹೆಸರು ಸಹ ಕೇಳಿಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ. ವಿವಾದಿತ ಸ್ಥಳಕ್ಕೆ ಬಂದೆ ಅಂತ ಅನ್ನಿಸಿಲ್ಲ. ಒಳ್ಳೆಯ ಕೆಲಸ ಮಾಡಿದರೆ ಎಲ್ಲರೂ ಒಳ್ಳೆಯವರಾಗುತ್ತಾರೆ. ನಾನು ಮೈಸೂರಿನ ಜನ ಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಸಾರ್ವಜನಿಕರ ಸಲಹೆಗಳನ್ನ ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ ಎಂದು ಹುರುಪಿನಿಂದ ಉತ್ತರಿಸಿದರು.

ನಿಮಗೆ ಈ ವರ್ಗಾವಣೆ ಅನಿರೀಕ್ಷಿತವಾಗಿತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ಈ ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಕೊವಿಡ್ ನಿರ್ವಹಣೆ ಜವಾಬ್ದಾರಿ ಇರುವ ಕಾರಣ ಜಿಲ್ಲಾಧಿಕಾರಿ ಕೆಲಸವು ಸವಾಲಾಗಿಯೇ ಇರುತ್ತದೆ. ಆದರೂ ಚಾಲೆಂಜಿಂಗ್ ಆಗಿ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಒಳ್ಳೆ ಕೆಲಸ ಮಾಡಿದರೆ ಎಲ್ಲರೂ ಮುಂದೆ ಬಂದು ಸಹಕಾರ ಕೊಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು.

ಪತ್ನಿ ಮಂಡ್ಯದಲ್ಲಿ ಡಿಸಿಯಾಗಿರುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ಪತ್ನಿ ಮನೆ ಮೊದಲೂ ಸಹ ಹತ್ತಿರವೇ ಇತ್ತು. ಬೆಂಗಳೂರಿನಿಂದ ಮಂಡ್ಯ ದೂರವೇನಲ್ಲ. ಈಗ ಇನ್ನಷ್ಟು ಹತ್ತಿರಕ್ಕೆ ಬಂದಿದ್ದೇವೆ ಎಂದು ನಗುತ್ತಲೇ ಮೈಸೂರಿಗೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Mysuru: ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಇಬ್ಬರೂ ಮೈಸೂರಿನಿಂದ ವರ್ಗಾವಣೆ, ಹೊಸ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ನೇಮಕ

ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ

(Dr.Bagadi Gautam new District Collector of Mysuru says give people friendly governance is my intention)

‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ