ರಾಮನಗರ: ನಾಡಪ್ರಭು ಕೆಂಪೇಗೌಡ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಬೇಕೆಂಬುದು ಜಿಲ್ಲೆಯ ಜನರ ಬಹು ದಿನಗಳ ಕನಸು. ಜನರ ಕನಸಿನಂತೆ ಕೆಂಪೇಗೌಡ ಹಾಗು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಪ್ರತಿಮೆ ನಿರ್ಮಾಣಗೊಂಡಿದೆ. ಆದರೂ ಇದುವರೆಗೂ ಅನಾವರಣಗೊಂಡಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ ಹಾಗೂ ಜನ ಪ್ರತಿನಿಧಿಗಳ ತಾತ್ಸಾರದಿಂದ ಮಹಾನ್ ನಾಯಕರ ಪ್ರತಿಮೆಗೆ ಅವಮಾನ ಮಾಡಲಾಗುತ್ತಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ
ದಲಿತ ಸಂಘಟನೆಗಳ ಹೋರಾಟ
ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲಾಗಿದ್ದರು, ಇದುವರೆಗೂ ಅನಾವರಣಗೊಂಡಿಲ್ಲ. ಇದು ಪ್ರಗತಿಪರ ಸಂಘಟನೆಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕಳೆದ ಹತ್ತಾರು ವರ್ಷಗಳಿಂದ ಹಲವು ದಲಿತ ಸಂಘಟನೆಗಳು ಹೋರಾಟ ನಡೆಸಿದ್ದವರು. ಅದರಂತೆ 2018 ರಲ್ಲಿ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗ ಶಂಕುಸ್ಥಾಪನೆ ನೆರವೇರಿಸಲಾಯಿತು. ಅಲ್ಲದೆ ಜಿಲ್ಲಾಡಳಿತ ಮುಂದೆ ಪ್ರತಿಮೆಗಳನ್ನು ನಿಲ್ಲಿಸಲಾಗಿದೆ. ಆದರೆ ಪ್ರತಿಮೆ ನಿಲ್ಲಿಸಿ ವರ್ಷಗಳೇ ಕಳೆಯುತ್ತ ಬಂದರೂ ಇದುವರೆಗೂ ಅನಾವರಣಗೊಂಡಿಲ್ಲ. ಇದು ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ.
ರಾಮನಗರ ಜಿಲ್ಲಾಡಳಿತದ ನಿರ್ಲಕ್ಷ ಹಾಗೂ ಜನಪ್ರತಿನಿಧಿಗಳ ತಾತ್ಸರದಿಂದಾಗಿ ಇದುವರೆಗೂ ಪ್ರತಿಮೆಗಳನ್ನ ಅನಾವರಣ ಮಾಡಿಲ್ಲ. ಡಿಸಿ ಕಚೇರಿ ಮುಂಭಾಗ ಇರುವ ಪ್ರತಿಮೆಗಳಿಗೆ ಟಾರ್ಪಲ್ ಸುತ್ತಿ ಬಿಡಲಾಗಿದೆ. ಪ್ರತಿಮೆಗಳನ್ನು ಅನಾವರಣಗೊಳಿಸಿ ಎಂದು ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಇದುವರೆಗೂ ಯಾರು ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಏಪ್ರಿಲ್ 14ರ ಒಳಗೆ ಪ್ರತಿಮೆಗಳನ್ನು ಅನಾವರಣಗೊಳಿಸದಿದ್ದರೇ ಹೋರಾಟ ಮಾಡುವುದಾಗಿ ದಲಿತಪರ ಸಂಘಟನೆ ಮುಖಂಡರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ